Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*
  • *ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*
  • *ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*
  • *ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*
  • *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
  • *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
  • *ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
  • *ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*
  • *ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*
  • *ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»Uncategorized»*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.25:-ಇದೇ ಏಪ್ರಿಲ್, 05 ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119 ನೇ ಮತ್ತು ಏಪ್ರಿಲ್, 14 ರಂದು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು.
ಏಪ್ರಿಲ್, 14 ರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ನಗರದ ಕಾವೇರಿ ಕಲಾಕ್ಷೇತ್ರ ಬಳಿಯಿಂದ ಗಾಂಧಿಭವನದ ವರೆಗೆ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು. ನೀಟ್, ಸಿಇಟಿ ಹಾಗೆಯೇ ನಾಗರಿಕ ಸೇವೆ ಜೊತೆಗೆ ಕ್ರೀಡಾ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವಂತಾಗಬೇಕು. ಇದರಿಂದ ಇತರರಿಗೂ ಪ್ರೇರಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.


ಇಬ್ಬರು ಮಹನೀಯರ ಜೀವನ ಸಂದೇಶವನ್ನು ತಿಳಿದುಕೊಳ್ಳುವಂತಾಗಬೇಕು. ಜೊತೆಗೆ ಸಮಾಜ ಕಲ್ಯಾಣ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ, ಸವಲತ್ತುಗಳನ್ನು ವಿತರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಸದಸ್ಯರಾದ ಎಸ್.ಸಿ.ಸತೀಶ್ ಅವರು ವಿವಿಧ ಸಮಾಜದ ಪ್ರಮುಖರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವಂತಾಗಬೇಕು ಎಂದು ಕೋರಿದರು.
ಪ್ರಮುಖರಾದ ಮೋಹನ್ ಮೌರ್ಯ ಅವರು ಮಾತನಾಡಿ ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಕಲ್ಪಿಸಿದ ಇಬ್ಬರು ಮಹಾನ್ ಸಾಧಕರ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ನೀಡುವಂತಾಗಬೇಕು ಎಂದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಎಚ್.ಎಲ್.ದಿವಾಕರ ಅವರು ಮಾತನಾಡಿ ಇಬ್ಬರು ಮಹಾನ್ ನಾಯಕರ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಲಹೆ ನೀಡಿದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜಯಂತಿ ಆಚರಣೆ ಸಂಬಂಧಿಸಿದಂತೆ ಹಲವು ಸಲಹೆ, ಮಾರ್ಗದರ್ಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಯನ್ನು ಎಲ್ಲರ ಸಹಕಾರದಿಂದ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.
ಪ್ರಮುಖರಾದ ಪಾಲಾಕ್ಷ, ಪಾಪು ಸಣ್ಣಯ್ಯ, ಗಾಯತ್ರಿ ನರಸಿಂಹ, ಪ್ರೇಮ ಕೃಷ್ಣಪ್ಪ, ಮಹದೇವ, ಎಚ್.ಎಲ್.ಕುಮಾರ, ಜಯಪ್ಪ ಹಾನಗಲ್ಲು, ಸಿ.ಪಿ.ಸಿದ್ದೇಶ್ವರ, ಜಗದೀಶ ಎಚ್.ಆರ್., ಪಿ.ಪಿ.ಸುಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ತಹಶೀಲ್ದಾರರಾದ ಶ್ರೀಧರ, ಕೃಷ್ಣಮೂರ್ತಿ, ಪ್ರವೀಣ್ ಕುಮಾರ್, ತಾ.ಪಂ.ಇಒಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.24 NEWS DESK : ಕಾರ್ಮಿಕ ಕಾಯ್ದೆಗಳ ಕುರಿತು ಜಿಲ್ಲಾ ಕಾರ್ಮಿಕ ಅಧಿಕಾರಿ ಯತ್ನಟ್ಟಿ ಮತ್ತು ತಂಡದವರು ಜಿಲ್ಲೆಯ…

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*

ಸೆಪ್ಟೆಂಬರ್ 24, 2026

*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026

*ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*

ಸೆಪ್ಟೆಂಬರ್ 24, 2026

*ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*

ಸೆಪ್ಟೆಂಬರ್ 24, 2026

*ಬೆಟ್ಟದಳ್ಳಿ, ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ನಿರ್ಣಯ*

ಸೆಪ್ಟೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.