Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ

ಮಾರ್ಚ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ ಮಾ.25 NEWS DESK : ಪ್ರವಾಹ, ಭೂಕಂಪ, ಚಂಡಮಾರುತ ಮೊದಲಾದ ನೈಸರ್ಗಿಕ ವಿಕೋಪಗಳು ಮತ್ತು ಮಾನವ ನಿರ್ಮಿತ ವಿಪತ್ತುಗಳು ಎದುರಾದ ಸಂದರ್ಭಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ತಕ್ಷಣದಲ್ಲಿ ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ ಬಂದಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮತ್ತು ಕೊಡಗು ವಿಶ್ವವಿದ್ಯಾಲಯ ಸಹಯೋಗದಲ್ಲಿ  ಕಾಲೇಜಿನ ಜ್ಞಾನ ಕಾವೇರಿ ಆವರಣದಲ್ಲಿ  ನಡೆದ ಯುವ ಆಪತ್ ಮಿತ್ರ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಪತ್ತೆಹಚ್ಚಿ ರಕ್ಷಿಸುವಂತಹ ಮತ್ತು ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತಹ ಧೈರ್ಯ ಮತ್ತು ವೃತ್ತಿಪರತೆಯಿಂದ ಜೀವ ರಕ್ಷಣೆ ಮಾಡುತ್ತದೆ. ಗಾಯಗೊಂಡವರಿಗೆ ತಕ್ಷಣದ ಪ್ರಾಥಮಿಕ ಚಿಕಿತ್ಸೆ ಮತ್ತು ತುರ್ತು ವೈದ್ಯಕೀಯ ಆರೈಕೆಯನ್ನು ಒದಗಿಸುತ್ತದೆ. ರಾಸಾಯನಿಕ, ಜೈವಿಕ, ವಿಕಿರಣಶೀಲ ಮತ್ತು ಪರಮಾಣು ವಿಪತ್ತುಗಳನ್ನು ಎದುರಿಸಲು ವಿಶೇಷ ತರಬೇತಿ ನೀಡುತ್ತದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಗಳು ಸ್ಥಳೀಯ ಪೊಲೀಸರು ಮತ್ತು ಸಮುದಾಯದ ಸ್ವಯಂಸೇವಕರಿಗೆ ವಿಪತ್ತು ನಿರ್ವಹಣೆಯ ತರಬೇತಿ ನೀಡುತ್ತದೆ. ವಿಪತ್ತುಗಳ ಸಮಯದಲ್ಲಿ ತ್ವರಿತವಾಗಿ ಕಾರ್ಯಪ್ರವೃತ್ತರಾಗಲು ನಿಯಮಿತವಾಗಿ ತಾಲೀಮುಗಳನ್ನು ನಡೆಸುವಂತಹ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಹ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಕೊಡಗು ಜಿಲ್ಲಾ ಮುಖ್ಯ ತರಬೇತಿ ಆಯುಕ್ತರಾದ ಕೆ.ಟಿ. ಬೇಬಿ ಮ್ಯಾಥ್ಯು,  ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ದೇಶದ ಬಹಳಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ಅಗತ್ಯಬಿದ್ದಾಗ ವಿಶ್ವಸಂಸ್ಥೆಯ ಸಮನ್ವಯದೊಂದಿಗೆ ಇತರ ದೇಶಗಳಲ್ಲಿ ಮಾನವೀಯ ನೆರವು ಮತ್ತು ರಕ್ಷಣಾ ಕಾರ್ಯಗಳಲ್ಲಿ ಭಾಗವಹಿಸುತ್ತದೆ. ಪ್ರವಾಹ, ಭೂಕಂಪ, ಚಂಡಮಾರುತ, ಮತ್ತು ಕೈಗಾರಿಕಾ ಅಪಘಾತಗಳಂತಹ ತುರ್ತು ಸಂದರ್ಭಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ನಡೆಸುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ)  ಡಾ.ಸುರೇಶ ಎಂ., ಮಾತನಾಡಿದರು. ಕೊಡಗು ಜಿಲ್ಲಾ ಸ್ಕೌಟ್ ಆಯುಕ್ತರಾದ ಜಿಮ್ಮಿ ಸಿಕ್ವೇರ ಶಿಬಿರದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕೊಡಗು ವಿವಿಯ ಮೌಲ್ಯಮಾಪನ ವಿಶೇಷ ಅಧಿಕಾರಿಗಳಾದ ಪ್ರೊ. ರವಿಶಂಕರ್ ಎಂ.ಎನ್., ಗೈಡ್ಸ್ ಕೊಡಗು ಜಿಲ್ಲಾ ತರಬೇತಿ ಆಯುಕ್ತರಾದ ಮೈಥಿಲಿರಾವ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಕೊಡಗು ಸ್ಥಾನಿಕ ಆಯುಕ್ತರಾದ ಹೆಚ್.ಆರ್.ಮುತ್ತಪ್ಪ, ಜಿಲ್ಲಾ ಸಂಘಟಕರಾದ ದಮಯಂತಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಕುಶಾಲನಗರ ಸ್ಥಳೀಯ ಸಂಸ್ಥೆ ಅಧ್ಯಕ್ಷರಾದ ಡಾ.ಪ್ರವೀಣ್ ದೇವಗುಂಡ ಸೋಮಪ್ಪ, ಕಾರ್ಯದರ್ಶಿ ಗಣೇಶ್ ಎಂ.ಎಸ್., ಖಜಾಂಚಿ ನರೇಶ್ ಕುಮಾರ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಎಡಿಸಿ ಸುಲೋಚನ, ಕೊಡಗು ಸ್ಕೌಟ್ ವಿಭಾಗದ ಜಿಲ್ಲಾ ತರಬೇತಿ ಆಯುಕ್ತರಾದ ರಂಜಿತ್, ಕೊಡಗು ವಿಶ್ವವಿದ್ಯಾಲಯದ ಯುವ ರೆಡ್‌ಕ್ರಾಸ್ ನೋಡಲ್  ಅಧಿಕಾರಿ ಡಾ. ಜ಼ಮೀರ್ ಅಹಮದ್, ಕೊಡಗು ವಿವಿ ಕೌಶಲ್ಯ ಅಭಿವೃದ್ಧಿ ಅಕಾಡೆಮಿಯ ಸಂಯೋಜಕರಾದ ಸುದರ್ಶನ್ ಕುಮಾರ್ ಎನ್,ಕೆ., ಕೊಡಗು ವಿವಿ ಸಮುದಾಯ ಕಾರ್ಯಕ್ರಮಗಳ ಸಂಯೋಜಕರುಗಳಾದ ಡಾ. ಲೋಕೇಶ್ ಭರಣಿ, ಮಂಜುನಾಥ್‌ಗೌಡ ಪಿ.ಸಿ., ಕೊಡಗು ವಿಶ್ವವಿದ್ಯಾಲಯದ ಘಟಕ, ಸರ್ಕಾರಿ, ಸಂಯೋಜಿತ ಮಹಾವಿದ್ಯಾಲಯಗಳ ಶಿಬಿರಾರ್ಥಿಗಳು, ಬೋಧಕ ವೃಂದ, ಬೋಧಕೇತರ ವೃಂದದವರು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.