Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
  • *ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*
  • *ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.26 NEWS DESK : ಮಹಿಳೆಯರು ಸಬಲರಾದಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಕೋಟಿ ಅವರು ಹೇಳಿದರು. ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ವತಿಯಿಂದ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಮಹಿಳಾ ಸಂಭ್ರಮ-2026ಅನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಮಹಿಳೆಯರಿಗೆ ಸರ್ಕಾರದ ಹತ್ತು ಹಲವು ಯೋಜನೆಗಳಿದ್ದು, ಅದನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು. ಆ ಮೂಲಕ ಬದುಕನ್ನು ಭದ್ರವಾಗಿ ರೂಪಿಸಿಕೊಳ್ಳಬೇಕು. ಮಹಿಳಾ ಘಟಕದ ಇಂತಹ ಕಾರ್ಯಕ್ರಮವು ಮಹಿಳೆಯರ ಸಂಘಟನೆಯ ಜೊತೆಗೆ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘಟನೆಗೆ ಪೂರಕವಾಗಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾದ ಲತಾ ಮಡಿಕೆಬೀಡು ಮಾತನಾಡಿ, ಮಹಿಳೆಯರು ಸಂಘಟಿತಗೊಳ್ಳುವ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿಯಬಹುದು. ಈ ರೀತಿಯ ಸ್ಪಂದನೆ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಬೆಳವಣಿಗೆಗೆ ಇನ್ನಷ್ಟು ಪೂರಕವಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕಾಂತಿಮಣಿ ರಾಜು ಅವರು, ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಅತ್ಯಂತ ಬಲಿಷ್ಠವಾಗಿ ಸಂಘಟಿತವಾಗುತ್ತಿದ್ದು, ಇತ್ತೀಚೆಗೆ ರಚನೆಗೊಂಡ ಮಹಿಳಾ ಘಟಕವು ಇದೀಗ ಮಹಿಳಾ ದಿನಾಚರಣೆ ಮಾಡುವ ಮೂಲಕ ಮೊದಲ ಸುಂದರ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸುವಂತ ಕಾರ್ಯವನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಹಿಳಾ ಘಟಕವು ಮಹಿಳೆಯರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಆ ಮೂಲಕ ಸಮಾಜದ ಅಭಿವೃದ್ಧಿಗೆ ಮಹಿಳಾ ಘಟಕವು ಶ್ರಮಿಸಲಿದೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ಉಪ ಖಜಾಂಚಿ ಭವಾನಿ ಶಿವರಾಜ್ ಮಡಿಕೆ ಬೀಡು ಅವರು ಮಾತನಾಡಿ ಇಂತಹ ಕಾರ್ಯಕ್ರಮದ ಮೂಲಕ ಮಹಿಳೆಯರ ನಡುವೆ ಬಾಂಧವ್ಯ ವೃದ್ಧಿಯಾಗುತ್ತದೆ. ಆ ಮೂಲಕ ತಮ್ಮ ಸಾಮಥ್ರ್ಯದ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಹೇಳಿದರು. ಅತಿಥಿಗಳಾದ ಕಾವ್ಯ ಅವರು ಮಾತನಾಡಿ, ಮಹಿಳೆಯರು ಧೈರ್ಯದಿಂದ ಮುನ್ನುಗ್ಗಿದಾಗ ಮಾತ್ರ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿಯಲು ಸಾಧ್ಯವಿದೆ. ಇಂತಹ ಕಾರ್ಯಕ್ರಮವು ಇದಕ್ಕೆಲ್ಲ ಮುನ್ನುಡಿ ಬರೆಯಲಿದೆ ಎಂದರು. ಸೈಕಾಲಜಿ ವಿದ್ಯಾರ್ಥಿನಿ ವರ್ಷ ಮಾತನಾಡಿ, ಯೋಗಾ, ಧ್ಯಾನ ಮಾನವ ಜೀವನಕ್ಕೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಉಪಾಧ್ಯಕ್ಷರಾದ ಶ್ವೇತಾ ಅಶ್ವಥ್ ಮಡಿಕೆಬೀಡು, ಉಪ ಕಾರ್ಯದರ್ಶಿ ದಮಯಂತಿ ಚೇರಂಬಾಣೆ, ಪದಾಧಿಕಾರಿ ಸಂಧ್ಯಾ ಚಂದ್ರಶೇಖರ್ ಮುರ್ನಾಡು ಹಾಜರಿದ್ದರು. ಸಪ್ನಾ ಪ್ರಾರ್ಥಿಸಿದರು. ಬೃಂದಾ ಸ್ವಾಗತಿಸಿದರು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹೇಮಲತಾ ಪೂರ್ಣ ಪ್ರಕಾಶ್ ನಿರೂಪಿಸಿದರು. ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಬಾಂಧವರಿಂದ ನೃತ್ಯ, ಕವಿತೆ ವಾಚನ ಸೇರಿದಂತೆ ವಿವಿಧ ರೀತಿಯ ಆಟೋಟಗಳು ಗಮನ ಸೆಳೆದವು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.26 NEWS DESK : ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವದ ಮುನ್ನ ದಿನದಂದು ರಾಮಲಿಂಗೇಶ್ವರ ದೇವಾಲಯದ…

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026

*ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.