Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ

ಮಾರ್ಚ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಕೂಡಿಗೆ ಮಾ.26 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ಕೂಡಿಗೆ
 ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯಲ್ಲಿ ಆರಂಭಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಲ್ಲಿ ಶುಮಾ.27 ರಂದು ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ( ಕೆರಿಯರ್ )
ಮೇಳವನ್ನು ಬೆಳಿಗ್ಗೆ 10.00 ಗಂಟೆಗೆ ಏರ್ಪಡಿಸಲಾಗಿದೆ ಎಂದು ಡಯಟ್ ಸಂಸ್ಥೆಯ ಪ್ರಾಂಶುಪಾಲರು ಆದ ಜಿಲ್ಲಾ  ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ದಿ) ರಾಮಚಂದ್ರ ರಾಜೇ ಅರಸ್  ತಿಳಿಸಿದರು. ಕೂಡಿಗೆ ಡಯಟ್ ಸಂಸ್ಥೆಯಲ್ಲಿ ನಡೆಯಲಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಮೇಳಕ್ಕೆ ಸಂಸ್ಥೆಯ ಆವರಣದಲ್ಲಿ  ವಿವಿಧ ಇಲಾಖೆಗಳು ಮತ್ತು ವಿವಿಧ ಸಂಸ್ಥೆಗಳ ನಡೆಯಲಿರುವ ಪ್ರದರ್ಶನ ಹಾಗೂ ಮಾಹಿತಿಗಳಿಗೆ ಸಿದ್ದಪಡಿಸಿರುವ ಮಳಿಗೆ( ಸ್ಟಾಲ್) ಗಳ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದರು. ಈ ವೃತ್ತಿಪರ ಮೇಳದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು
ಎಂದು ತಿಳಿಸಿದರು. ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು, ಬ್ಯಾಂಕ್ ಗಳು ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮಳಿಗೆ (ಸ್ಟಾಲ್)ಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಉನ್ನತ ಶಿಕ್ಷಣ ಮತ್ತು ವೃತ್ತಿ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು. ಸರ್ಕಾರಿ ವಿವಿಧ ಇಲಾಖೆಗಳು ಹಾಗೂ ಬ್ಯಾಂಕ್ ಗಳು ಭಾಗವಹಿಸಲಿದ್ದು ತಜ್ಞರಿಂದ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದ ಬಗ್ಗೆ ಸೂಕ್ತ ತಿಳುವಳಿಕೆ ಮತ್ತು ವಿವಿಧ ಇಲಾಖೆಗಳಿಂದ ಸಿಗುವ ಮಾಹಿತಿಗಳು, ಬ್ಯಾಂಕ್ ಗಳಿಂದ ಲಭ್ಯವಾಗುವ ಶಿಕ್ಷಣ ಸಾಲ ಸೌಲಭ್ಯಗಳು ಇತ್ಯಾದಿ ಮಾಹಿತಿ ಬಗ್ಗೆ ಸಂಪೂರ್ಣ ವಿವರ ಲಭ್ಯವಾಗುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಈ ಕುರಿತ ತರಬೇತಿಗಳು ಲಭ್ಯವಾಗಲಿವೆ ಎಂದು ಸಂಸ್ಥೆಯ ಪ್ರಾಂಶುಪಾಲರು  ರಾಮಚಂದ್ರ ರಾಜೇ ಅರಸ್ ವಿವರಿಸಿದರು. ಈ ವೃತ್ತಿ ಮಾರ್ಗದರ್ಶನ ಮೇಳದಲ್ಲಿ 10 ನೇ ತರಗತಿ ಮತ್ತು 12 ನೇ ತರಗತಿ ನಂತರದ ಶಿಕ್ಷಣ ಮಾರ್ಗಗಳು, ಜೊತೆಗೆ ಸಿ.ಇ.ಟಿ, ನೀಟ್, ಜೆ.ಇ.ಇ. ಪರೀಕ್ಷೆ ಮುಂತಾದ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ. ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು, ಬ್ಯಾಂಕ್ ಗಳು ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮಳಿಗೆ (ಸ್ಟಾಲ್)ಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಉನ್ನತ ಶಿಕ್ಷಣ ಮತ್ತು ವೃತ್ತಿ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು. 9 ರಿಂದ 12 ನೇ ತರಗತಿ ವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸೇರಿದಂತೆ ವೃತ್ತಿಪರ ಕೋಸ್ ್ಗಳ ವಿದ್ಯಾರ್ಥಿಗಳು, ಅವರ ಪೋಷಕರು, ಮಹಿಳೆಯರು ಹಾಗೂ ಸಾರ್ವಜನಿಕರು ಈ ವೃತ್ತಿ ಮೇಳಕ್ಕೆ ಆಗಮಿಸಿ ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಪ್ರಾಂಶುಪಾಲರಾದ ರಾಮಚಂದ್ರ ರಾಜೇ ಅರಸ್ ಮನವಿ ಮಾಡಿದ್ದಾರೆ. ಮೇಳದ ಪೂರ್ವಸಿದ್ಧತೆ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಹಿರಿಯ ಉಪನ್ಯಾಸಕ ಎಚ್.ಎಚ್.ಸತೀಶ್,  ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಎನ್.ವಿ.ಸ್ವಾಮಿ,
 ಬಿ.ಎನ್.ಪುಷ್ಪ, ಉಪನ್ಯಾಸಕರಾದ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ,  ಪಿ.ಪಿ.ಗಾಯತ್ರಿ,  ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ತಾಂತ್ರಿಕ ಸಲಹೆಗಾರ ಹರೀಶ್ , ಶಿಕ್ಷಕರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.