Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ

ಮಾರ್ಚ್ 26, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮಾ 26  NEWS DESK : ಚಾಟ್ ಜಿಪಿಟಿಯಂಥ ತಾಂತ್ರಿಕ ಮಾಧ್ಯಮವನ್ನು ಹೆಚ್ಚು ಬಳಕೆ ಮಾಡುತ್ತಿದ್ದರೆ ನಮ್ಮ ಮನಸ್ಸಿನ ಕ್ರಿಯಾಶೀಲತೆಯನ್ನೇ ನಾಶ ಮಾಡುವ ಮೂಲಕ ಮೆದುಳಿನ ಮೇಲೆ ದುಫ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿರುವ ನಿಟ್ಟಿನಲ್ಲಿ ಅಗತ್ಯಕ್ಕೆ ತಕ್ಕಂತೆ ಎಐ, ಜಿಪಿಟಿಯಂಥ ಮಾಧ್ಯಮವನ್ನು ಬಳಸುವ ಮೂಲಕ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕರೆ ಗಮನ ನೀಡಿ ಎಂದು ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಶುಭಾ ಕೆ.ಜಿ. ವಿದ್ಯಾಥಿ೯ಗಳಿಗೆ ಕರೆ ನೀಡಿದ್ದಾರೆ. ಕೊಡಗು ವಿಶ್ವವಿದ್ಯಾಲಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕೆ. ಎಂ. ಕಾರ್ಯಪ್ಪ ಕಾಲೇಜಿನ ಮಹಿಳಾ ಘಟಕ ಹಾಗೂ ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗಗಗಳ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ರ ಅಂಗವಾಗಿ ” ಹೆಲ್ದಿ ಹ್ಯಾಬಿಟ್ಸ್ – ಹ್ಯಾಪಿ ಲೈಫ್” ವಿಷಯದ ಕುರಿತು ಆಯೋಜಿತ ಕಾಯಾ೯ಗಾರದಲ್ಲಿ ಅವರು ಮಾತನಾಡಿದರು. ಯೌವನದಲ್ಲಿ ಯುವತಿಯರು ಚಮ೯ ಸಂರಕ್ಷಣೆ ಸಂಬಂಧಿತ ಹೆಚ್ಚು ಜಾಗೖತೆ ವಹಿಸುವ ನಿಟ್ಟಿನಲ್ಲಿ ಆರೋಗ್ಯಕರ ಆಹಾರ ಸೇವಿಸಬೇಕು. ಆಯಾಯ ಕಾಲಮಾನಕ್ಕೆ ತಕ್ಕಂತೆ ಆಹಾರ ಸೇವನೆಯೂ ಯೌವನದಲ್ಲಿ ಮುಖ್ಯವಾಗುತ್ತದೆ ಎಂದೂ ಡಾ. ಶುಭಾ ಕೆ.ಜಿ. ಕಿವಿಮಾತು ಹೇಳಿದರು.. ಮೊಬೈಲ್ ಬಳಕೆಯು ಹೆಚ್ಚಾದಂತೆ ಇದು ಯುವಪೀಳಿಗೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ದೈಹಿಕವಾಗಿಯೂ ಮೊಬೈಲ್ ನ ಅತೀ ಬಳಕೆಯು ಗಂಭೀರ ಪರಿಣಾಮ ಬೀರುತ್ತದೆ. ಹಿಂದಿನ ಕಾಲದಲ್ಲಿ ಸಂಸ್ಕೖತಿ, ಸಂಪ್ರದಾಯಕ್ಕೆ ಮನೆಗಳಲ್ಲಿ ಹೆಚ್ಚು ಆದ್ಯತೆ ನೀಡುತ್ತಿದ್ದ ಹಿನ್ನಲೆಯಲ್ಲಿ ಕುಟುಂಬ ವಗ೯ದ ಆರೋಗ್ಯ ಉತ್ತಮವಾಿತ್ತು ಎಂದು ಸ್ಮರಿಸಿಕೊಂಡ ಡಾ.ಶುಭಾ, ನಮ್ಮ ದೇಹಕ್ಕೆ ನಾವೇ ಚಾಲಕರಂತೆ, ಹೀಗಾಗಿ ನಮ್ಮ ದೇಹದ ಆರೋಗ್ಯದ ಕಾಳಜಿಯನ್ನು ನಾವೇ ಸೂಕ್ತವಾಗಿ ನಿವ೯ಹಿಸಬೇಕು. ಕಾಯಿಲೆಗಳಿಂದ ಮುಕ್ತವಾಗಿರುವ ಶರೀರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಯೌವನದಲ್ಲಿಯೇ ಹೆಚ್ಚು ಮುತುವಜಿ೯ ವಹಿಸಬೇಕೆಂದೂ ಕರೆ ನೀಡಿದರು. ವಿದ್ಯಾರ್ಥಿನಿಯರಿಗೆ ಆರೋಗ್ಯಕರ ಜೀವನದ ಮಹತ್ವ, ಉತ್ತಮ ಜೀವನ ಶೈಲಿ ಮತ್ತು ದೈನಂದಿನ ಆಹಾರ ಹಾಗೂ ಆರೋಗ್ಯ ದಲ್ಲಿ ಆಗುವ ಏರುಪೇರುಗಳು ಮತ್ತು ಅವುಗಳನ್ನು ಸಮರ್ಪಕವಾಗಿ ನಿಭಾಯಿಸುವ ಬಗ್ಗೆಯೂ ಡಾ. ಶುಭಾ ಅರಿವು ಮೂಡಿಸಿದರು. ಪ್ರಸ್ತುತ ನವಯುಗದಲ್ಲಿ ಆಯುರ್ವೇದದ ಮಹತ್ವ ನಮ್ಮ ಸುತ್ತ ಮುತ್ತಲಿನ ಔಷಧೀಯ ಸಸ್ಯಗಳ ಬಳಕೆ ಬಗ್ಗೆ ಮಾಹಿತಿ ನೀಡಿದ ಅವರು ಅವುಗಳನ್ನು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಬಳಸಬಹುದಾದ ರೀತಿಯನ್ನೂ ವಿವರಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹನಿರ್ದೇಶಕಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ವಿದ್ಯಾರ್ಥಿಗಳು ಹೇಗೆ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ, ಮೊಬೈಲ್ ದುರ್ಬಳಕೆಯಿಂದ ದಿಕ್ಕು ತಪ್ಪುತ್ತಿದ್ದಾರೆಹ ಎಂದು ವಿವರಿಸಿ, , ಜೀವನದಲ್ಲಿ ತೆಗೆದು ಕೊಳ್ಳಬೇಕಾದ ಸರಿಯಾದ ನಿರ್ಧಾರಗಳು ಮತ್ತು ಪೌಷ್ಟಿಕ ಆಹಾರದ ಮಹತ್ವ ಕುರಿತು ಜಾಗೃತಿ ಮೂಡಿಸಿದರು. ಕರ್ನಾಟಕ ಸರ್ಕಾರಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಜಾರಿಗೆ ತಂದಿರುವ ವಿಶೇಷ ಪೊಲೀಸ್ ಪಡೆಯಾದ “ಅಕ್ಕ ಪಡೆ” ಯ ಬಗ್ಗೆಯೂ ಸವಿತಾ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಮೇ.ಜರ್ ಪ್ರೊ. ರಾಘವ ಬಿ. ಮಾತನಾಡಿ, ಮಹಿಳಾ ದಿನಾಚರಣೆಯು ಒಂದು ದಿನದ ಆಚರಣೆಗೆ ಸೀಮಿತವಾಗಿರಬಾರದು. ಪ್ರಸ್ತುತ ಸಮಾಜದಲ್ಲಿ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಮಹಿಳೆಯರ ಪ್ರತಿನಿಧಿತ್ವ ಮಹತ್ವ ದ್ದಾಗಿದೆ, ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಸ್ತ್ರೀಯ ಮಹತ್ವ ತಿಳಿಯುವ ಅಗತ್ಯ ಇದೆ ಎಂದು ಕರೆ ನೀಡಿದರು. ಕಾಲೇಜಿನ ಮಹಿಳಾ ಘಟಕದ ಸಂಯೋಜಕಿ ಪ್ರೊ. ನಯನಾ ಕಶ್ಯಪ್ ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳೆ ಈವರೆಗೆ ಸಾಗಿಬಂದ ಹೋರಾಟದ ಹಾದಿ ಒಂದೆಡೆಯಾದರೆ ಇಂದಿನ ಶತಮಾನದ ಮಹಿಳೆ ಹೊಸ ಸವಾಲುಗಳನ್ನು ಎದುರಿಸುವ ಅನಿವಾರ್ಯ ಇನ್ನೊಂದೆಡೆ ಇದೆ. ಈ ನಿಟ್ಟಿನಲ್ಲಿ ಪ್ರತಿಯೋವ೯ ಯುವತಿ ಮಾನಸಿಕ, ದೈಹಿಕ ಸಾಮರ್ಥ್ಯ ಮತ್ತು ಆರೋಗ್ಯ ಸಮತೋಲನವನ್ನು ಎಚ್ಚರದಿಂದ ಕಾಪಾಡಿಕೊಳ್ಳಬೇಕಾದ ತುರ್ತಿನ ಕುರಿತು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು. ಈ ಸಂದರ್ಭ ಕಾಲೇಜಿನ ಮಹಿಳಾ ಸ್ವಚ್ಛತಾ ಸಿಬ್ಬಂದಿ ಯ ಅವಿರತ ಶ್ರಮ, ಸೇವೆ ಗುರುತಿಸಿ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.
ತಾವು ಯಾವುದೇ ದುಶ್ಚಟಗಳಿಗೆ ಒಳಗಾಗುವುದಿಲ್ಲ ಹಾಗೂ ಆರೋಗ್ಯಕರ ಜೀವನ ನಡೆಸುತ್ತೇವೆ ಎಂದು ಕಾಯ೯ಗಾರದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರು ಪ್ರತಿಜ್ಞೆ ಸ್ವೀಕರಿಸಿದರು. ವಿದ್ಯಾರ್ಥಿನಿಯರಾದ ಸಪ್ನಾ ಶೇಠ್ ಮತ್ತು ಚೋಂದಮ್ಮ ಪ್ರಾಥಿ೯ಸಿ, ರಾಜ್ಯ ಶಾಸ್ತ್ರ ವಿಭಾಗದ ಸಂಯೋಜಕಿ ಪ್ರೊ. ಗಾಯತ್ರಿ ದೇವಿ ಸ್ವಾಗತಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಎ. ಎನ್ ಗಾಯತ್ರಿ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ರಾಜ್ಯ ಶಾಸ್ತ್ರ ವಿಭಾಗದ ಡಾ. ಶ್ರುಂಗಾರ್ ನಿರ್ವಹಿಸಿದರು. ಕಾಲೇಜಿನ ಬೋಧಕರಾದ ಆಲೋಕ್ ಬಿಜೈ, ಯೋಗಾನಂದ, ಶರತ್, ಡಾ. ಭೈರವಿ, ಕನ್ನಿಕಾ ಪ್ರಕಾಶ್, ಡಾ. ವಿಜಯಲತ, ದೇವಮ್ಮ, ಡಾ. ಅಮೃತ ಮತ್ತು ಡಾ. ನಳಿನಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.