Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು

ಮಾರ್ಚ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮಾ.27 NEWS DESK : ಶ್ರೀ ವಿನಾಯಕ ಸೇವಾ ಟ್ರಸ್ಟ್‌ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀರಾಮನವಮಿ, ದುರ್ಗಾಪೂಜೆ ಹಾಗೂ ಟ್ರಸ್ಟ್‌ನ ವಾರ್ಷಿಕ ಮಹಾಸಭೆ ಸಂಭ್ರಮದಿಂದ ಜರುಗಿತು. ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್‌ ತಂತ್ರಿಯವರ ನೇತೃತ್ವದಲ್ಲಿ ಗುರುವಾರ ಪೂಜಾ ಕಾರ್ಯಗಳು ನೆರವೇರಿದವು. ಟ್ರಸ್ಟ್‌ನ ನೂತನ ಜಾಗದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಸಭಾಭವನಕ್ಕೆ ದೇವರ ಚಿತ್ರಪಟವನ್ನು ಮೆರವಣಿಗೆಯಲ್ಲಿ ತಂದು ಇರಿಸಲಾಯಿತು. ನೂತನ ಭಜನಾ ಮಂದಿರ ನಿರ್ಮಾಣ ಸಂಬಂಧ ಟ್ರಸ್ಟ್‌ ವತಿಯಿಂದ ಸಾಮೂಹಿಕ ದುರ್ಗಾ ಹೋಮ ಏರ್ಪಡಿಸಲಾಗಿತ್ತು. ಬಳಿಕ ಶ್ರೀ ರಾಮಚಂದ್ರನ ಚಿತ್ರಪಟಕ್ಕೆ ಆರತಿ ಬೆಳಗಿ ಪ್ರಾರ್ಥಿಸಲಾಯಿತು. ದಿನದ ಪ್ರಯುಕ್ತ ಪುಟಾಣಿ ಮಕ್ಕಳು ಶ್ರೀರಾಮಚಂದ್ರ ಹಾಗೂ ಸೀತಾ ಮಾತೆಯ ವೇಷ ಧರಿಸಿ ಪಾಲ್ಗೊಂಡು ವಿಶೇಷ ಮೆರುಗು ನೀಡಿದರು. ಗಿರೀಶ್‌ ತಂತ್ರಿ ಮಾತನಾಡಿ, ನಮ್ಮ ಧರ್ಮದ ಪಾಲನೆ ಮತ್ತು ರಕ್ಷಣೆಯನ್ನು ನಾವೇ ಮಾಡಬೇಕು. ಧರ್ಮ ಕಾರ್ಯದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಾಗಿ ನಮ್ಮಲ್ಲಿ ಜಾಗೃತಿ ನಿರಂತರವಾಗಿರಲು ಸಾಧ್ಯವಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ನಮ್ಮವರೇ ನಮ್ಮ ಧರ್ಮವನ್ನು ಬೇರೆ ಬೇರೆ ರೀತಿಯಲ್ಲಿ ಅವಹೇಳನ ಮಾಡುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು. ರಾಮನವಮಿಯ ಪ್ರಯುಕ್ತ ಪಾನಕ, ಮಜ್ಜಿಗೆ ವಿತರಿಸಲಾಯಿತು. ಕತ್ತಲೆಕಾಡು, ಜೇನುಕೊಲ್ಲಿ, ಕ್ಲೋಸ್‌ಬರ್ನ್‌ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ವಿಶೇಷ ಸಂಭ್ರಮಕ್ಕೆ ಸಾಕ್ಷಿಯಾದರು. ಬಳಿಕ ಅನ್ನಪ್ರಸಾದ ವಿತರಿಸಲಾಯಿತು. :: ವಾರ್ಷಿಕ ಮಹಾಸಭೆ : : ಟ್ರಸ್ಟ್‌ನ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷ ಹೊನ್ನಪ್ಪ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಬ್ರಿಜೇಶ್‌ ರೈ ವಾರ್ಷಿಕ ವರದಿ, ಲೆಕ್ಕಪತ್ರ ಮಂಡಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಸುಜಾತಾ ಡಿ.ಎಂ., ನಾರಾಯಣ, ಕಿಶೋರ್‌ ರೈ ಕತ್ತಲೆಕಾಡು, ತೃಪ್ತಿ ಬಿ.ಎಸ್.‌, ತನುಶ್ರೀ ಬಿ.ಜೆ., ಚರಣ್‌ ಎಂ.ಆರ್.‌ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಮ, ಸೀತೆಯ ರೂಪದಲ್ಲಿ ಕಂಗೊಳಿಸಿದ ಪುಟಾಣಿಗಳಾದ ಅದೃಷ್ಟ, ಮನಸ್ಸು ಕಿಶೋರ್ ರೈ, ಅದ್ವಿಕ ರೈ, ಶ್ರೀನಿಧಿ, ಅಕ್ಷನ, ನಿಶ್ಮಿತಾ, ಚಾರ್ವಿನ್‌ ಎಂ. ರೈ ಅವರಿಗೆ ಸ್ಮರಣಿಗೆ ನೀಡಿ ಗೌರವಿಸಿ ಪ್ರೋತ್ಸಾಹಿಸಲಾಯಿತು. ಮುಖ್ಯ ಅತಿಥಿಯಾಗಿ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಕೆ.ಕೆ. ಮಹೇಶ್‌ ಕುಮಾರ್‌ ಪಾಲ್ಗೊಂಡಿದ್ದರು. ಗ್ರಾಮದಲ್ಲಿ ಮಕ್ಕಳು ಮತ್ತು ಹಿರಿಯರಿಗೆ ಧರ್ಮ, ಸಂಸ್ಕೃತಿಯ ಕುರಿತಾಗಿ ಅರಿವು ಮೂಡಿಸುವ ಕಾರ್ಯವನ್ನು ವಿನಾಯಕ ಸೇವಾ ಟ್ರಸ್ಟ್‌ ಜವಾಬ್ದಾರಿಯಿಂದ ಮಾಡಿಕೊಂಡು ಬರುತ್ತಿದೆ. ಟ್ರಸ್ಟ್‌ ವತಿಯಿಂದ ನಡೆಯುತ್ತಿರುವ ಭಜನಾ ತಂಡ ಉತ್ತಮ ತಂಡವಾಗಿ ರೂಪುಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಟ್ರಸ್ಟ್‌ ವತಿಯಿಂದ ಉದ್ದೇಶಿಸಿರುವ ಭಜನಾ ಮಂದಿರ ನಿರ್ಮಾಣ ಸಂಬಂಧ ಎಲ್ಲರೂ ಕೈಜೋಡಿಸಬೇಕಿದೆ. ಗ್ರಾಮದಲ್ಲಿ ಉತ್ತಮ ಮಂದಿರ ನಿರ್ಮಾಣವಾದರೆ ವಿವಿಧ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಆ ನಿಟ್ಟಿನಲ್ಲಿ ರಾಮಾಂಜನೇಯ ಭಜನಾ ಮಂಡಳಿಯಿಂದಲೂ ನೆರವಾಗುವ ವಿಶ್ವಾಸ ವ್ಯಕ್ತಪಡಿಸಿದರು. ಶಿಕ್ಷಕಿ ಸುಜಾತಾ ಮಾತನಾಡಿ, ಸಮಾಜಮುಖಿ ಚಟುವಟಿಕೆಗಳಲ್ಲಿ ಟ್ರಸ್ಟ್‌ ಸದಾ ತೊಡಗಿಸಿಕೊಳ್ಳುತ್ತಿದೆ. ಗ್ರಾಮದ ಶಾಲೆಯ ಏಳಿಗೆ ನಿಟ್ಟಿನಲ್ಲೂ ಉತ್ತಮ ಸಹಕಾರವನ್ನು ನೀಡುತ್ತಿದೆ ಎಂದರು. ಟ್ರಸ್ಟ್‌ನ ಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾ ಜನಾರ್ದನ್‌, ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಸುರೇಶ್‌ ಕೆ.ಯು. ವೇದಿಕೆಯಲ್ಲಿದ್ದರು. ರುಕ್ಮಿಣಿ ಕೃಷ್ಣಪ್ಪ ಪ್ರಾರ್ಥಿಸಿದರು. ಚಂದ್ರಶೇಖರ್ ರೈ ಸ್ವಾಗತಿಸಿದರು. ಕಿಶೋರ್‌ ರೈ ಕತ್ತಲೆಕಾಡು ನಿರೂಪಿಸಿದರು. ವನಿತಾ ವಂದಿಸಿದರು.

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.