Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ

ಮಾರ್ಚ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ ಮಾ.27 NEWS DESK :  ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ರಾಜ್ಯ ಶಿಕ್ಷಣ ಮತ್ತು ತರಬೇತಿ ಇಲಾಖೆ( ಡಿ.ಎಸ್.ಇ.ಆರ್.ಟಿ.) ಯ ವತಿಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನು ಸ್ಥಾಪಿಸಲಾಗಿದೆ ಎಂದು ಡಯಟ್ ಸಂಸ್ಥೆಯ ಪ್ರಾಂಶುಪಾಲರು ಆದ ಪದನಿಮಿತ್ತ ಉಪನಿರ್ದೇಶಕ(ಅಭಿವೃದ್ದಿ)ರಾದ ರಾಮಚಂದ್ರ ರಾಜೇ ಅರಸ್  ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನುಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 34 ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಗಳಲ್ಲಿ ಇಂತಹ ವೃತ್ತಿಪರ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.
ಡಯಟ್ ಸಂಸ್ಥೆಯಲ್ಲಿ ಆರಂಭಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕದ ಮೂಲಕ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದರು.
ವೃತ್ತಿ ಮಾರ್ಗದರ್ಶನ ಘಟಕ ಹಾಗೂ ರೂಪುರೇಷೆ ಕುರಿತು ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ಡಯಟ್ ಸಂಸ್ಥೆಯ ಮೂಲಕ ಜಿಲ್ಲಾ ಮಟ್ಟದ ವೃತ್ತಿ ದಿಕ್ಸೂಚಿ, ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ವೃತ್ತಿ ಮಾರ್ಗದರ್ಶನ ಕೆರಿಯರ್ ಮೇಳ 2026 ವನ್ನು ಕೂಡ ಸಂಘಟಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರ ಕಛೇರಿಯಿಂದ ನೀಡಿರುವ ಸುತ್ತೋಲೆ ಅನ್ವಯ ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪಿಸಲಾಗುತ್ತಿದ್ದು ಈ ಘಟಕದ ಮೂಲಕ ವಿದ್ಯಾರ್ಥಿಗಳಿಗೆ ನಿರಂತರವಾಗಿ ವೃತ್ತಿ ಮಾರ್ಗದರ್ಶನ ನೀಡಲಾಗುವುದು ಎಂದು ಪ್ರಾಂಶುಪಾಲರು ರಾಮಚಂದ್ರ ರಾಜೇ ಅರಸ್ ತಿಳಿಸಿದರು. ಈ ವೃತ್ತಿ ಮಾರ್ಗದರ್ಶನ ಘಟಕದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯೂಸಿ ನಂತರದ
ಕೋರ್ಸ್‍ಗಳು  ಪ್ರವೇಶ ಪರೀಕ್ಷೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಭವಿಷತ್ತಿನ ದೃಷ್ಠಿಯಿಂದ ಉದ್ಯೋಗಾವಕಾಶಗಳ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ. ಈ ಘಟಕದಲ್ಲಿ ಜಿಲ್ಲೆಯ ಹಾಗೂ ಆಸುಪಾಸಿನ ಹಲವಾರು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ವೃತ್ತಿ ಶಿಕ್ಷಣ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಕೂಡ. ಈ ಘಟಕಕ್ಕೆ ಆಗಮಿಸಿ ಈ ಘಟಕದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಅರಸ್ ತಿಳಿಸಿದರು.  ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಡಯಟ್ ಸಂಸ್ಥೆಯಲ್ಲಿ ಆರಂಭವಾಗುತ್ತಿರುವ ವೃತ್ತಿ ಮಾರ್ಗದರ್ಶನ ಘಟಕವು ಜಿಲ್ಲೆಯ ಶಾಲಾ- ಕಾಲೇಜಿನ ವಿದ್ಯಾರ್ಥಿಗಳಿಗೆ ಮುಂದಿನ ಕೋರ್ಸ್ ಗಳು ಮತ್ತು ವೃತ್ತಿ ಆಯ್ಕೆಗೆ ಪೂರಕವಾಗಿದೆ ಎಂದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಆರೋಗ್ಯ ಇಲಾಖೆಯ ವತಿಯಿಂದ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ.
ವೃತ್ತಿಪರ ಘಟಕ ಸಮಿತಿಯ ಕಾರ್ಯದರ್ಶಿ ಎಚ್.ಎಚ್.ಸತೀಶ್, ಘಟಕದ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು. ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪೂರ್ಣ,ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ, ಬಿ.ಆರ್.ಸಿ. ಎಂ.ವಿ.ಮಂಜೇಶ್, ಸಂಸ್ಥೆಯ ಉಪನ್ಯಾಸಕರಾದ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ, ಪಿ.ಪಿ.ಗಾಯತ್ರಿ, ಸಿ.ಆರ್.ಪಿ.ಗಳಾದ ಕೆ.ಶಾಂತಕುಮಾರ್, ಟಿ.ಈ.ವಿಶ್ವನಾಥ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಎಂ.ಎಸ್. ಮಹೇಂದ್ರ , ಶಾಲಾ ಶಿಕ್ಷಕರು ಇದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.