Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.27 NEWS DESK : ಪಂಚ ಗ್ಯಾರಂಟಿ ಯೋಜನೆಯ ಎಲ್ಲಾ ಪ್ರಯೋಜನಗಳು ಫಲಾನುಭವಿಗಳಿಗೆ ದೊರಕಬೇಕಾದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಹೇಳಿದ್ದಾರೆ. ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ನಡೆದ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,271 ಪಡಿತರ ಚೀಟಿದಾರರು ಇದ್ದು, ಇವರಿಗೆ ಈಗಾಗಲೇ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮತ್ತು ಹೆಸರು ತೆಗೆದು ಹಾಕುವುದಕ್ಕೆ ಅರ್ಜಿ ಸಲ್ಲಿಸಲು ಮಾ.31 ರ ವರೆಗೆ ಅವವಕಾಶ ಕಲ್ಪಿಸಲಾಗಿದೆ ಎಂದು ಆಹಾರ ನಿರೀಕ್ಷಕರಾದ ವೀಣಾ ಅವರು ಸಭೆಗೆ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ ಅವರು ಮಾತನಾಡಿ, ಮಡಿಕೇರಿ ತಾಲ್ಲೂಕಿನಲ್ಲಿ ಶೇಕಡವಾರು ಸಾಧನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಮಿತಿ ಸದಸ್ಯರಾದ ಪ್ರಭು ರೈ ಅವರು ಮಾತನಾಡಿ, ನಗರದಲ್ಲಿ ಅಡುಗೆ ಅನಿಲ ಸರಬರಾಜುದಾರ ಏಜೆನ್ಸಿಯೊಂದು ಒಂದೇ ಹೋಟೆಲ್ಗೆ 20 ಅಡುಗೆ ಅನಿಲ ಪೂರೈಕೆ ಮಾಡಿದ್ದು, ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು. ಮತ್ತೋರ್ವ ಸಮಿತಿ ಸದಸ್ಯ ಬಿ.ಜಿ.ಕುಟ್ಟಪ್ಪ ಮಾತನಾಡಿ, ಅಧಿಕಾರಿಗಳು ನಿರಂತರವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಮೂಲಕ ಗ್ರಾಹಕರಿಗೆ ವಂಚನೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಆಹಾರ ನಿರೀಕ್ಷಕರಾದ ವೀಣಾ ಅವರು ಮಾತನಾಡಿ, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಮಾತನಾಡಿ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಳಸಂತೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಅಕ್ರಮ ಮಾರಾಟವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ತಾ.ಪಂ.ಇಒ ಶೇಖರ್ ಅವರು ಮಾತನಾಡಿ, ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಅಡುಗೆ ಅನಿಲ ಎಜೆನ್ಸಿಗಳಲ್ಲಿ ವಂಚನೆ ಕಂಡುಬಂದಲ್ಲಿ ಎಸ್ಮಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು. ಶಕ್ತಿ ಯೋಜನೆ ಕುರಿತು ಮಾತನಾಡಿದ ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ಪ್ರತಿನಿಧಿ ಅವರು ಬೆಂಗಳೂರಿನಿಂದ ಮಂಗಳೂರಿಗೆ ರಾತ್ರಿ ವೇಳೆ ತೆರಳುವ ಕೆಎಸ್‍ಆರ್‍ಟಿಸಿ ಬಸ್‍ಗಳು ಬಸ್ ನಿಲ್ದಾಣಕ್ಕೆ ತೆರಳದೆ ಟೋಲ್‍ಗೇಟ್‍ನಲ್ಲಿ ಪ್ರಯಾಣಿಕರನ್ನು ಇಳಿಸಿ ಮಂಗಳೂರಿಗೆ ತೆರಳುತ್ತಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಸದಸ್ಯರಾದ ಪ್ರಭು ರೈ ಪ್ರಶ್ನಿಸಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರು ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್‍ಗಳು ಸರಿಯಾದ ಸಮಯಕ್ಕೆ ಸಂಚರಿಸುವಂತಾಗಬೇಕು ಎಂದರು. ಕಾಟಕೇರಿ ಜೋಡುಪಾಲ ಬಳಿ ಬಸ್ ನಿಲ್ಲಿಸುತ್ತಿಲ್ಲ ಎಂಬ ದೂರುಗಳಿದ್ದು, ಅಧಿಕಾರಿಗಳು ಸ್ಥಳೀಯರ ಸಮಸ್ಯೆಗಳನ್ನು ಪರಿಹರಿಸುವಂತಾಗಬೇಕು ಎಂದರು. ಯುವನಿಧಿಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಫೆಬ್ರವರಿ 2026ರ ಅಂತ್ಯದವರೆಗೆ ಒಟ್ಟು 592 ಮಂದಿ ನೋಂದಣಿಯಾಗಿದ್ದು, 4454 ಪದವಿದರರು, 66 ಮಂದಿ ಡಿಪ್ಲೋಮಾ ವಿದ್ಯಾರ್ಥಿಗಳು ಸೇರಿದಂತೆ ಹಲವರು ಯುವ ನಿಧಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಸಂಬಂದಪಟ್ಟ ಅಧಿಕಾರಿಗಳು ವಿವರಿಸಿದರು. ಅಲ್ಲದೇ ಯುವ ನಿಧಿ ಕುರಿತು ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಿಬ್ಬಂದಿ ಗಣೇಶ್ ಅವರು ಮಾಹಿತಿ ನೀಡಿದರು. ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಅವರು ಮಾತನಾಡಿ ಯಾವುದೇ ಫಲಾನುಭಗಳಿಗೆ ಯಾವುದೇ ತೊಂದರೆಯಾದಂತೆ ನೋಡಿಕೊಳ್ಳುವಂತೆ ಸಲಹೆ ನೀಡಿದರು. ಗೃಹಜ್ಯೋತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಸೆಸ್ಕ್ ಎಇಇ ವಿನಯ್ ಕುಮಾರ್ ಅವರು ಮಡಿಕೇರಿ ತಾಲ್ಲೂಕಿನಲ್ಲಿ ಹಲವು ವಿದ್ಯುತ್ ಸ್ಥಾವರಗಳಿದ್ದು, ಶೇ.98.94ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಸದಸ್ಯರಾದ ಫ್ಯಾನ್ಸಿ ಪಾರ್ವತಿ, ರಾಜೇಶ್ವರಿ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಬಗ್ಗೆ ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.