
ಮಡಿಕೇರಿ ಮಾ.27 NEWS DESK : ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಟಾಸ್ ಫೋರ್ಸ್ ಸಭೆ ನಡೆಯಿತು. ಈ ಸಂದರ್ಭದಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಅದರಂತೆ ತಹಶೀಲ್ದಾರ್ ಅವರು ಮಾತನಾಡಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸುವಂತೆ ನಿರ್ದೇಶನ ನೀಡಿದರು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ರಡಿ ನೇಮಕಗೊಂಡಿರುವ ಹೆಚ್ಚುವರಿ ನಿರೀಕ್ಷಕರುಗಳು ತಮ್ಮ ಕಾರ್ಯವ್ಯಾಪ್ತಿಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳು, ಹಾಗೂ ತೋಟಗಳ ಮಾಲೀಕರಿಂದ ಸ್ವಯಂ ಘೋಷಣಾ ಪತ್ರಗಳನ್ನು ಪಡೆದು ಈ ವರದಿಯನ್ನು ಪಡೆಯಲು ಹಾಗೂ ಬಾಲಕಾರ್ಮಿಕ ಮುಕ್ತ ತಾಲ್ಲೂಕುಗಳನ್ನಾಗಿಸಲು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ಕಲಂ 16 ಮತ್ತು 17 ರಡಿ ನೇಮಕಗೊಂಡ ನಿರೀಕ್ಷಕರು ತಮ್ಮ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಪ್ರತಿ ತಿಂಗಳು ಹೆಚ್ಚೆಚ್ಚು ತಪಾಸಣೆ ಹಾಗೂ ವ್ಯಾಪಕ ಪ್ರಚಾರ ಕೈಗೊಂಡು ಅದರ ವರದಿಯನ್ನು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೋಸೈಟಿ ಕೊಡಗು ಜಿಲ್ಲೆ, ಮಡಿಕೇರಿರವರಿಗೆ ಸಲ್ಲಿಸಲು ಸೂಚಿಸಿದರು. ಮಡಿಕೇರಿ ವೃತ್ತ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟಿ, ಕೊಡಗು ಪೊಲೀಸ್ ಇಲಾಖೆಯ ವಿಶೇಷ ಮಕ್ಕಳ ಪೊಲೀಸ್ ಘಟಕದ ಸುಮತಿ, ಶಿಕ್ಷಣ ಇಲಾಖೆಯ ಎಜುಕೇಶನ್ ಕೋ ಆರ್ಡಿನೇಟರ್ ಜಾನೆಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ವಿರೂಪಾಕ್ಷ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀಕಾಂತ್, ನಗರಸಭೆ ಸುರೇಶ್, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರೀಕ್ಷಕರಾದ ಪಾಲಾಕ್ಷ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಜ್ ಅಹ್ಮದ್ ಹಾಗೂ ಸಿಬ್ಬಂದಿ ಗಳಾದ ರಕ್ಷಿತ್, ಶೋಭ ಮತ್ತು ಪ್ರಿಯಾಂಕ ಪಾಲ್ಗೊಂಡಿದ್ದರು.








