
ಮಡಿಕೇರಿ ಮಾ.28 NEWS DESK : 33/11ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ F3 ಮೂರ್ನಾಡು ಫೀಡರ್‌ನಲ್ಲಿ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾ.29 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಮೂರ್ನಾಡು ಟೌನ್, ಮುತ್ತಾರುಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.








