
ಮಡಿಕೇರಿ ಮಾ.28 NEWS DESK : ವಯನಾಡು ಜಿಲ್ಲೆಯ ಮಾನಂದವಾಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿರುನೆಲ್ಲಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ತಿರುನೆಲ್ಲಿ ಭಾಗದ ಪ್ರಸಿದ್ಧ ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಅಭ್ಯರ್ಥಿಯ ಗೆಲುವಿಗಾಗಿ ಪ್ರಾರ್ಥಿಸಿದರು. ಶಾಸಕರೊಂದಿಗೆ ಮಾನಂದವಾಡಿ ಕ್ಷೇತ್ರದ ಅಭ್ಯರ್ಥಿ ಉಷಾ ವಿಜಯನ್, ಕೊಡಗಿನ ಪ್ರಮುಖರಾದ ಅಜ್ಜಿಕುಟ್ಟಿರ ಪೊನ್ನು, ಕುಂಡಚ್ಚಿರ ಮಂಜು ದೇವಯ್ಯ, ರಾಜನ್, ಶಾಸಕರ ಸಹಾಯಕರಾದ ಕುಮಾರ್ ಮಂಡ್ಯ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.









