
ಸುಂಟಿಕೊಪ್ಪ ಮಾ.28 NEWS DESK : ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ (ಕೋಕಾ), ಪ್ರಧಾನ ಕಾರ್ಯದರ್ಶಿಯಾಗಿ ಬಿ.ಜಿ.ರಮೇಶ್ ನಾಕೂರು ಅವರನ್ನು ನೇಮಕಗೊಳಿಸಲಾಯಿತು. ಸುಂಟಿಕೊಪ್ಪದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಬಿಜೆಪಿಯ ಶಕ್ತಿ ಕೇಂದ್ರದ ಅಧ್ಯಕ್ಷ ಧನುಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಗೌತಮ್ ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪಿ.ಆರ್.ಸುನಿಲ್‍ಕುಮಾರ್, ಯುವ ಮೋರ್ಚಾ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಹೆರೂರು, ಜಿಲ್ಲಾ ಒಬಿಸಿ ಮಾಜಿ ಉಪಾಧ್ಯಕ್ಷರಾದ ಬಿ.ಕೆ.ಮೋಹನ್, ನಾಕೂರು ಶಿರಂಗಾಲ ಪಂಚಾಯಿತಿ ವ್ಯಾಪ್ತಿಯ ಶಕ್ತಿ ಕೇಂದ್ರ ಅಧ್ಯಕ್ಷ ಶಂಕರ್ ನಾರಾಯಣ, ಕೆದಕಲ್ ಪಂಚಾಯಿತಿ ಶಕ್ತಿ ಕೇಂದ್ರ ಅಧ್ಯಕ್ಷ ರಮೇಶ್, ಸೋಮಯ್ಯ, ಲೀಲಾ ಮೇದಪ್ಪ ಹಾಗೂ ವಿವಿಧ ಬೂತ್ ಮಟ್ಟದ ಅಧ್ಯಕ್ಷರುಗಳು ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ನಿಕಟ ಪೂರ್ವ ಅಧ್ಯಕ್ಷರಾದ ವಾಸುದೇವ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳು ಪಾಲ್ಗೊಂಡಿದ್ದರು. 4 ಪಂಚಾಯಿತಿ ಕಾರ್ಯಕರ್ತರ ಸಮ್ಮುಖದಲ್ಲಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರನ್ನಾಗಿ ಬಿ.ಕೆ.ಪ್ರಶಾಂತ್ ಕೋಕ ಇವರನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಬಿ.ಜಿ. ರಮೇಶ್ ನಾಕೂರು ಇವರನ್ನು ಆಯ್ಕೆ ಮಾಡಲಾಯಿತು.









