Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.28 NEWS DESK : ನಗರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಅಮೃತ್ ಯೋಜನೆಯ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಕುರಿತು ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಯಿತು. ನಗರಸಭೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವ ಸದಸ್ಯರು ಅಮೃತ್ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ವಾಹನ ಚಾಲಕರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ವ ಸದಸ್ಯರು ಪ್ರಸ್ತಾಪಿಸಿದರು. ಕಾಂಗ್ರೆಸ್ ಸದಸ್ಯ ಬಿ.ವೈ.ರಾಜೇಶ್ ಮಾತನಾಡಿ ಕಾಮಗಾರಿ ಮಳೆಗಾಲಕ್ಕೂ ಮೊದಲು ಪೂರ್ಣಗೊಳ್ಳುವುದು ಅಸಾಧ್ಯ, ಇದರಿಂದ ಹೆಚ್ಚಿನ ತೊಂದರೆ ಎದುರಾಗಲಿದೆ ಎಂದರು. ವಿರೋಧ ಪಕ್ಷದ ನಾಯಕ ಅಮಿನ್ ಮೊಹಿಸಿನ್ ಮಾತನಾಡಿ ನಗರಸಭೆಯ ಆಡಳಿತದ ಅವಧಿ ಇನ್ನು ಕೇವಲ 6 ತಿಂಗಳು ಮಾತ್ರವೇ ಇದೆ. ಈ ಕಾಮಗಾರಿ ಕುರಿತು ಹಲವು ಬಾರಿ ಚರ್ಚೆ ನಡೆದಿದೆ, ಈಗಲಾದರೂ ಗಂಭೀರವಾಗಿ ಪರಿಗಣಿಸಿ ಎಂದು ಒತ್ತಾಯಿಸಿದರು. ಎಸ್‍ಡಿಪಿಐ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಮಾತನಾಡಿ ಪ್ರತಿ ಸಭೆಯಲ್ಲಿ ಈ ಕುರಿತು ಗಮನ ಸೆಳೆದರೂ ಪ್ರಯೋಜನವಾಗಿಲ್ಲ, ಗುತ್ತಿಗೆದಾರರನ್ನು ಸಭೆಗೆ ಕರೆಸಿ ಕಟ್ಟುನಿಟ್ಟಿನ ಸೂಚನೆ ನೀಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸ್ವತಃ ಪೌರಾಯುಕ್ತ ಹೆಚ್.ಆರ್.ರಮೇಶ್ ಅವರು ಕಾಮಗಾರಿ ವಿಳಂಬವಾಗುತ್ತಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಮಾರ್ಚ್ ಒಳಗೆ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದೀರಿ. ಇನ್ನೂ ಕಾಮಗಾರಿ ಮುಗಿದೇ ಇಲ್ಲ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು, ತೆಗೆದ ಗುಂಡಿಗಳನ್ನು ಮುಚ್ಚುತ್ತಿಲ್ಲ. ಇಂಟರ್ ಲಾಕ್ ಹಾಕಿಲ್ಲ, ಇಷ್ಟ ಬಂದಂತೆ ನೀರಿನ ಸಂಪರ್ಕ ಕೊಡುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
*ಸಭಾತ್ಯಾಗ* ನಗರದಲ್ಲಿ ನಿರ್ಮಾಣಗೊಂಡಿರುವ ನಿಯಮಬಾಹಿರ ಶೆಡ್ ಗಳಿಗೆ ಸಂಬಂಧಿಸಿದಂತೆ ನಗರಸಭೆ ಅಧ್ಯಕ್ಷರು ಕ್ಷಮೆಯಾಸಬೇಕೆನ್ನುವ ಒತ್ತಾಯ ಸಭೆಯಲ್ಲಿ ಕೇಳಿ ಬಂತು. ಕ್ಷಮೆಯಾಚನೆಗೆ ಅಧ್ಯಕ್ಷೆ ಪಿ.ಕಲಾವತಿ ಅವರು ಒಪ್ಪದೆ ಇದ್ದಾಗ ಕಾಂಗ್ರೆಸ್ ಸದಸ್ಯರು ದಿಕ್ಕಾರ ಕೂಗಿದರು. ಕೆಲವು ಅಕ್ರಮ ಅಂಗಡಿಗಳನ್ನು ಮುಚ್ಚಿಸುವ ಕುರಿತು ನಗರಸಭೆ ಸಾಮಾನ್ಯಸಭೆ ಕೈಗೊಂಡಿದ್ದ ನಿರ್ಣಯಕ್ಕೆ ವಿರುದ್ಧವಾಗಿ ಅಧ್ಯಕ್ಷರು “ನನ್ನನ್ನು ಕೇಳದೇ ಯಾವುದೇ ಕ್ರಮ ಜರುಗಿಸಬಾರದು ಎಂದು ಪೌರಾಯುಕ್ತರಿಗೆ ಪತ್ರ ಬರೆದಿದ್ದಾರೆ” ಎಂದು ಆರೋಪಿಸಿದ ಕಾಂಗ್ರೆಸ್ ಸದಸ್ಯ ಬಿ.ವೈ.ರಾಜೇಶ್, “ಇದು ಕೌನ್ಸಿಲ್ ಸಭೆಗೆ ಅಧ್ಯಕ್ಷರು ತೋರಿದ ಆಗೌರವ’ ಎಂದು ಟೀಕಿಸಿದರು. ಇವರ ಆರೋಪಕ್ಕೆ ಕಾಂಗ್ರೆಸ್ ನ ಇತರ ಸದಸ್ಯರೂ ದನಿಗೂಡಿಸಿದರು. ಅಲ್ಲದೆ ಅಧ್ಯಕ್ಷರು ಕ್ಷಮೆ ಕೋರಬೇಕು ಎನ್ನುವ ಒತ್ತಾಯ ಕೇಳಿ ಬಂತು. ಆರೋಪ ನಿರಾಕರಿಸಿದ ಅಧ್ಯಕ್ಷೆ ಕಲಾವತಿ, “ನಾನೇನೂ ತಪ್ಪು ಮಾಡಿಲ್ಲ. ಈಗ ಆ ವಿಚಾರ ನ್ಯಾಯಾಲಯದಲ್ಲಿರುವುದರಿಂದ ಅದನ್ನು ಇಲ್ಲಿ ಚರ್ಚೆ ಮಾಡಲು ಸಾಧ್ಯವಿಲ” ಎಂದು ಹೇಳಿದರು. ಇವರ ಮಾತನ್ನು ಒಪ್ಪದ ಕಾಂಗ್ರೆಸ್ ಸದಸ್ಯರು “ಈ ರೀತಿ ಪತ್ರ ಬರೆಯಲು ಸದಸ್ಯರೊಬ್ಬರ ಒತ್ತಡ ಇತ್ತು. ಆದರೆ, ಈಗ ಆ ಸದಸ್ಯರೂ ಅಧ್ಯಕ್ಷರ ನೆರವಿಗೆ ಬರುತ್ತಿಲ್ಲ. ಆಡಳಿತ ಪಕ್ಷದ ಇತರ ಸದಸ್ಯರೂ ಅಧ್ಯಕ್ಷರನ್ನು ಸಮರ್ಥಿಸಿಕೊಳ್ಳುತ್ತಿಲ್ಲ” ಎಂದು ಸದಸ್ಯ ರಾಜೇಶ್ ವ್ಯಂಗ್ಯವಾಡಿದರು. ಎಸ್‍ಡಿಪಿಐ ಸದಸ್ಯ ಅಮಿನ್ ಮೊಹಿಸಿನ್ ಮಾತನಾಡಿ “ಕೌನ್ಸಿಲ್ ನಿರ್ಣಯದ ವಿರುದ್ಧ ಪತ್ರ ಬರೆದರೆ ನೀವೇ ತೊಂದರೆಗೆ ಸಿಲುಕುತ್ತೀರಿ. ಯಾರೋ ಹೇಳಿದರೆಂದು ಕೇಳಿ ಸುಮ್ಮನೇ ಪತ್ರ ಬರೆಯಬಾರದು” ಎಂದು ಹೇಳಿದರು. ಈ ನಡುವೆ ಕಾಂಗ್ರೆಸ್ ಸದಸ್ಯರು ಕ್ಷಮೆಯಾಚನೆಗೆ ಪಟ್ಟು ಹಿಡಿದರು. ಮಧ್ಯಾಹ್ನದ ನಂತರ ಸಭೆ ಸೇರಿದಾಗಲೂ ಕಾಂಗ್ರೆಸ್ ಸದಸ್ಯರು ಕ್ಷಮೆಯಾಚನೆಗೆ ಒತ್ತಾಯಿಸಿದರು. ಇದಕ್ಕೆ ಅಧ್ಯಕ್ಷರು ಒಪ್ಪದೇ ಇದ್ದಾಗ ಒಪ್ಪಲಿಲ್ಲ. ಕಾಂಗ್ರೆಸ್ ಸದಸ್ಯರು ದಿಕ್ಕಾರ ಕೂಗುತ್ತಾ ಸಭಾತ್ಯಾಗ ಮಾಡಿದರು. ಸದಸ್ಯರಾದ ಅಮಿನ್ ಮೊಹಿಸಿನ್ ಹಾಗೂ ಎಂ.ಕೆ.ಮನ್ಸೂರ್ ಆಲಿ ಬಜೆಟ್ ಕುರಿತು ಚರ್ಚಿಸಿದರು. ಉಪಾಧ್ಯಕ್ಷ ಮಹೇಶ್ ಜೈನಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.28 NEWS DESK : ನಗರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಅಮೃತ್ ಯೋಜನೆಯ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಕುರಿತು…

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026

*ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.