Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು

ಮಾರ್ಚ್ 29, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಬೆಂಗಳೂರು NEWS DESK ಮಾ.29 : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು ಲಭ್ಯವಿವೆ. ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (OMCs) IOCL, BPCL ಮತ್ತು HPCL ಮೂಲಕ ಆಟೋ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. 77.74 ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ. ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ. ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18,000 ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ. ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.