Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.29 : “ಕೆಪಿಎಸ್ ಮ್ಯಾಗ್ನೆಟ್” ಯೋಜನೆ ಜಾರಿಯಾದರೆ ಕೊಡಗಿನ ಬಹುತೇಕ ಸರಕಾರಿ ಶಾಲೆಗಳು ಮುಚ್ಚುವ ಸಾಧ್ಯತೆಗಳಿದೆ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಯೂನಿಯನ್(ಎಐಡಿಎಸ್‌ಓ) ಸಂಘಟನೆ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಕುಶಾಲನಗರದ ಮಹಿಳಾ ಸಮಾಜ ಭವನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಿದ ಪ್ರಮುಖರು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಎಐಡಿಎಸ್‌ಓ ರಾಜ್ಯ ಉಪಾಧ್ಯಕ್ಷರಾದ ಅಭಯ ದಿವಾಕರ್ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರವು “ಸಂಯೋಜನೆ” ಹೆಸರಿನಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿತ್ತು. ಆ ಸಂದರ್ಭ ರಾಜ್ಯಾದ್ಯಂತ ಹೋರಾಟ ನಡೆಸಿ ಸರಕಾರಿ ಶಾಲೆಗಳನ್ನು ಉಳಿಸಿದ್ದೆವು. ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿಯಲ್ಲಿ 40ಸಾವಿರ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರಕಾರಿ ಶಾಲೆಗಳನ್ನು ಮುಚ್ಚಿ ಬಡ ವಿದ್ಯಾರ್ಥಿಗಳಿಂದ ಶಿಕ್ಷಣವನ್ನು ಕಸಿದುಕೊಳ್ಳುವುದೇ ಸರಕಾರದ ಉದ್ದೇಶವಾಗಿದೆ ಎಂದು ಆರೋಪಿಸಿದರು.
ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸರಕಾರವು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನಿoದ 2,500 ಕೋಟಿ ಸಾಲ ಮಾಡಿ ತೆರೆಯುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಹೊರಗುತ್ತಿಗೆ ನೀಡುವ ಮೂಲಕ ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನಾಗಿ ಪರಿವರ್ತಿಸುವ ಹುನ್ನಾರವನ್ನು ಸರಕಾರ ಮಾಡುತ್ತಿದೆ. ಪ್ರತಿ ಕಿಲೋಮೀಟರ್ ವ್ಯಾಪ್ತಿಯಲ್ಲಿ ಪ್ರಾಥಮಿಕ ಶಾಲೆ ಇರಬೇಕೆನ್ನುವ ಶಿಕ್ಷಣ ಹಕ್ಕು ಕಾಯ್ದೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಉಲ್ಲಂಘಿಸುವ ಸಾಧ್ಯತೆ ಇದೆ ಎಂದರು. ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, ಕುಶಾಲನಗರ ತಾಲ್ಲೂಕಿನ ಕುಶಾಲನಗರದ ಸರಕಾರಿ ಶಾಲೆ, ಕೂಡಿಗೆ ಶಾಲೆ, ಶಿರಂಗಾಲ ಶಾಲೆ ಹಾಗೆಯೇ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ಶಾಲೆ, ಕುಟ್ಟ ಶಾಲೆ ಸೇರಿದಂತೆ 5 ಶಾಲೆಗಳನ್ನು ಆಯ್ಕೆ ಮಾಡಿ 135 ಶಾಲೆಗಳನ್ನು ಮ್ಯಾಗ್ನೆಟ್ ಯೋಜನೆಯಡಿ ವಿಲೀನಗೊಳಿಸಿ ಮುಚ್ಚುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶ. ಎಷ್ಟೋ ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲ. ಮಳೆಗಾಲದಲ್ಲಿ ನಾಲ್ಕು ತಿಂಗಳು ಸುರಿಯುವ ಮಳೆಯಲ್ಲಿ ಒಂದನೇ ತರಗತಿ, ಎರಡನೇ ತರಗತಿ ಓದುವ ಚಿಕ್ಕ ಮಕ್ಕಳು ಐದು ಆರು ಕಿಲೋ ಮೀಟರ್ ನಡೆದುಕೊಂಡು ಹೋಗುವುದು ಅಸಾಧ್ಯದ ಮಾತು. ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಜಾರಿಯಾದರೆ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಮಕ್ಕಳು, ಕಾಡಿನ ಅಂಚಿನಲ್ಲಿ ವಾಸಿಸುತ್ತಿರುವ ಆದಿವಾಸಿ ಮಕ್ಕಳು ಹಾಗೂ ರೈತರ, ಬಡವರ ಮಕ್ಕಳು, ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಆದ್ದರಿಂದ ಈ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಅತಿಥಿಗಳಾಗಿ ಆಗಮಿಸಿದ್ದ ಕುಶಾಲನಗರದ ಕಸಾಪ ಅಧ್ಯಕ್ಷ ನಾಗೇಶ್ ಕೆ.ಎಸ್ ಮಾತನಾಡಿ, ಶಾಲೆಗಳು ಪ್ರತಿಯೊಂದು ಗ್ರಾಮಗಳಲ್ಲಿ ಇರಬೇಕು. ಐದರಿಂದ ಆರು ಕಿಲೋಮೀಟರ್ ದೂರದ ಶಾಲೆಗೆ ಚಿಕ್ಕ ಮಕ್ಕಳು, ಹೆಣ್ಣು ಮಕ್ಕಳು ತೆರಳಿ ಶಿಕ್ಷಣ ಪಡೆದುಕೊಳ್ಳುವುದು ಅಸಾಧ್ಯವಾದೀತೆಂದು ಕಳವಳ ವ್ಯಕ್ತಪಡಿಸಿದರು. ಕಾರ್ಮಿಕ ಮುಖಂಡರಾದ ಹರೀಶ್, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಿಂದ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಆತಂಕ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ವಿಜಯನಗರದ ಸುರೇಶ್, ಚಿಕ್ಕತ್ತೂರು ಹರೀಶ್, ತೊರೆನೂರು ಸಾಗರ್ ಮಾತನಾಡಿದರು.
ಸಮಾವೇಶದ ಅಧ್ಯಕ್ಷತೆಯನ್ನು ಎಐಡಿಎಸ್‌ಓ ಸಂಘಟನಾಕಾರಾದ ಸ್ವಾತಿ ವಹಿಸಿದ್ದರು. ಯುವಜನ ಪದಾಧಿಕಾರಿಗಳಾದ ಪೂರ್ಣಿಮಾ, ನೀತು, ಮಂಜು ಹಾಗೂ ವಿವಿಧ ಹಳ್ಳಿಗಳ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
*62 ಸಾವಿರ ಶಿಕ್ಷಕರ ಹುದ್ದೆ ಖಾಲಿ* ಪ್ರಸ್ತುತ ರಾಜ್ಯದಲ್ಲಿ 62 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದೆ, 7 ಸಾವಿರಕ್ಕೂ ಹೆಚ್ಚಿನ ಏಕೋಪಾಧ್ಯಾಯ ಶಾಲೆಗಳಿವೆ. 23 ಸಾವಿರಕ್ಕೂ ಹೆಚ್ಚಿನ ಸರ್ಕಾರಿ ಶಾಲೆ ಕಟ್ಟಡಗಳು ದುರಸ್ತಿಯಾಗಬೇಕಾಗಿದೆ. ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೆ, ಅವುಗಳನ್ನು ಸೊರಗುವಂತೆ ಮಾಡಿ ಸರ್ಕಾರ ಹಿಂಬಾಗಿಲಿನಿoದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ. (ಸುಭಾಷ್ ಬೆಟ್ಟದ ಕೊಪ್ಪ)
*ಸಮಿತಿ ರಚನೆ* ಸಾರ್ವಜನಿಕ ಶಿಕ್ಷಣ ಉಳಿಸಲು ಮುಂದಿನ ದಿನಗಳಲ್ಲಿ ಸಶಕ್ತವಾಗಿ ಹೋರಾಟವನ್ನು ರೂಪಿಸಲು ಕೊಡಗು ಜಿಲ್ಲಾ ಮಟ್ಟದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯನ್ನು ಇದೇ ಸಂದರ್ಭ ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ವಿಜಯನಗರದ ಸುರೇಶ, ಕಾರ್ಯದರ್ಶಿಯಾಗಿ ಎಐಟಿಎಸ್‌ಓದ ಸ್ವಾತಿ ಹಾಗೂ ಉಪಾಧ್ಯಕ್ಷರಾಗಿ ವಿಜಯನಗರದ ಅಕ್ಷಯ್, ಚಿಕ್ಕತ್ತೂರಿನ ಹರೀಶ್, ತೊರೆನೂರಿನ ಸಾಗರ್, ಬ್ಯಾಡಗೂಟ್ಟ ಹಾಡಿಯ ಚಿಮ್ಮಿ, ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಶಾಂತಿ, ಯುವಜನ ಸಂಘಟನೆಯ ಪೂರ್ಣಿಮಾ ಹಾಗೂ ಸಲಹೆಗಾರರುಗಳನ್ನಾಡಿ ಕುಶಾಲನಗರ ತಾಲ್ಲೂಕು ಕಸಾಪ ಅಧ್ಯಕ್ಷ ನಾಗೇಶ್ ಕೆ.ಎಸ್. ಮತ್ತು ಕೆಲ ಪ್ರಮುಖರನ್ನು ಆಯ್ಕೆ ಮಾಡಲಾಯಿತು. ವಿವಿಧ ಗ್ರಾಮೀಣ ಭಾಗಗಳ ನೂರಕ್ಕೂ ಹೆಚ್ಚು ಮಂದಿಯನ್ನು ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.29 : ಕೂಡಿಗೆಯ ಸೈನಿಕ ಶಾಲೆ ಕೊಡಗು ತನ್ನ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ 2025–26ನೇ ಶೈಕ್ಷಣಿಕ…

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.