
ಮಡಿಕೇರಿ ಮಾ.30 NEWS DESK : ಸಿದ್ದಾಪುರ ಗ್ರಾಮದ ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟೆ ನೀಡಿ ವಾರ್ಷಿಕ ಉತ್ಸವದಲ್ಲಿ ಪಾಲ್ಗೊಂಡರು. ಉತ್ಸವದ ಸಂದರ್ಭದಲ್ಲಿ ಶ್ರೀ ದೇವರ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭ ವಲಯ ಅಧ್ಯಕ್ಷರಾದ ಪ್ರತೀಶ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರಾದ ಕುಲಚಂಡ ಪ್ರಮೋದ್ ಗಣಪತಿ, ಪಕ್ಷದ ಮುಖಂಡರು ಸೂರಜ್ ಹೊಸೂರು, ಕುಂಡಚ್ಚಿರ ಮಂಜು ದೇವಯ್ಯ, ಮಲ್ದಾರೆ ಪಂಚಾಯಿತಿ ಅಧ್ಯಕ್ಷರು ಮಾಲತಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.









