Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ

ಮಾರ್ಚ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮಾ.30 NEWS DESK : ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದ ವತಿಯಿಂದ ಏ.5 ರಿಂದ ಮೂರು ದಿನಗಳ ಕಾಲ ಕ್ರೀಡಾಕೂಟ ಹಾಗೂ ಏ.11 ರಂದು ಡ್ಯಾನ್ಸ್ ಮೇಳ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಟೋ ಮಾಲೀಕ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್.ಮೇದಪ್ಪ ಅವರು ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಆಕರ್ಷಕ ಡ್ಯಾನ್ಸ್ ಮೇಳದ ಕುರಿತು ಮಾಹಿತಿ ನೀಡಿದರು.  ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಖಡ್ಡಾಯವಾಗಿ ಸ್ಥಳೀಯ ಆಟೋ ಸಂಘಟನೆಗಳಲ್ಲಿ ಸದಸ್ಯರಾಗಿರುವ ಕೊಡಗಿನ ಆಟೋ ಚಾಲಕರಿಗೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈಗಾಗಲೇ 16ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ಉದ್ಘಾಟನಾ ಪಂದ್ಯದಲ್ಲಿ 5 ಓವರ್ ಗಳಿಗೆ ಸೀಮಿತವಾಗಿ ಪೊಲೀಸ್ ಇಲಾಖಾ ಸಿಬ್ಬಂದಿಗಳು, ವಕೀಲರು ಹಾಗೂ ವೈದ್ಯರ ತಂಡವನ್ನು ನಿರೀಕ್ಷಿಸಲಾಗಿದೆ. ವಿಜೇತ ತಂಡಕ್ಕೆ ವಿನ್ನರ್ ಮತ್ತು ರನ್ನರ್ ಟ್ರೋಫಿ ನೀಡಲಾಗುವುದು.  ಆಟೋ ಚಾಲಕರ ನಡುವೆ ನಡೆಯುವ ಪಂದ್ಯಾವಳಿಯ ವಿಜೇತ ತಂಡಕ್ಕೆ 40ಸಾವಿರ ರೂ. ನಗದು ಮತ್ತು ಟ್ರೋಫಿ ಹಾಗೂ ರನ್ನರ್ 25ಸಾವಿರ ನಗದು ಮತ್ತು ಟ್ರೋಫಿ, ಮೂರು ಮತ್ತು ನಾಲ್ಕನೇ ಬಹುಮಾನ ಟ್ರೋಫಿ ನೀಡಲಾಗುವುದು ಎಂದರು. ಏ.11ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಗರದ ಗಾಂಧಿ ಮೈದಾನದಲ್ಲಿ ಸಾರ್ವಜನಿಕ ಕ್ರೀಡಾಕೂಟ ಮತ್ತು ಡ್ಯಾನ್ಸ್ ಮೇಳ ನಡೆಯಲಿದೆ. ಕ್ರೀಡಾಕೂಟದಲ್ಲಿ ಪುಟಾಣಿ ಮಕ್ಕಳಿಂದ ಕಾಲೇಜು ವಿದ್ಯಾರ್ಥಿಗಳ ವರೆಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕಾಳು ಹೆಕ್ಕುವುದು, ಬೆಲೂನ್ ಒಡೆಯುವುದು, ಬಕೆಟ್ ಗೆ ಚೆಂಡು ಎಸೆಯುವುದು ಕೇರಂ, ಕಬಡ್ಡಿ(ಮಕ್ಕಳಿಗೆ), ಓಟದ ಸ್ಪರ್ಧೆ ಬಾಲಕರು ಹಾಗೂ ಬಾಲಕಿಯರಿಗೆ ಪ್ರತ್ಯೇಕವಾಗಿ ನಡೆಯಲಿದೆ. ಮಹಿಳೆಯರಿಗೆ ಹಗ್ಗ ಜಗ್ಗಾಟ, ಬಾಂಬ್ ಇನ್ ದ ಸಿಟಿ, ಸಂಗೀತ ಕುರ್ಚಿ, ಮಡಿಕೆ ಒಡೆಯುವುದು, ನಿಂಬೆ ಚಮಚ ಓಟ, ಭಾರದ ಗುಂಡು ಎಸೆತ, ಮತ್ತು ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪುರುಷರಿಗೆ ಹಗ್ಗಜಗ್ಗಾಟ, ತೆಂಗಿನ ಕಾಯಿಗೆ ಕಲ್ಲು ಎಸೆತ, ಭಾರದ ಗುಂಡು ಎಸೆತ, ಮಡಿಕೆ ಒಡೆಯುವುದು, ಹಾಗೆಯೇ ಆಟೋ ಚಾಲಕರಿಗೆ ಮಾತ್ರ ಅನ್ವಯವಾಗುವಂತೆ ಕಬಡ್ಡಿ ಪಂದ್ಯಾವಳಿ, ಸೊಂಟಕ್ಕೆ ಹಗ್ಗ ಕಟ್ಟಿ ಆಟೋ ಎಳೆಯುವುದು ಮತ್ತು 40ವರ್ಷದಿಂದ 70ವರ್ಷದ ಆಟೋ ಚಾಲಕರಿಗೆ ಅನ್ವಯಿಸುವಂತೆ ಅಂಗಿ ಗುಬ್ಬಿ ಹಾಕಿ ಓಟದ ವಿಶೇಷ ಸ್ಪರ್ಧೆ ಕೂಡ ನಡೆಯಲಿದೆ. ಅಂದು ಸಂಜೆ 6ಗಂಟೆಯ ನಂತರ ಆಕರ್ಷಕ ಡ್ಯಾನ್ಸ್ ಮೇಳ ನಡೆಯಲಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ಸ್ಮರಣಿಕೆ ನೀಡಲಾಗುವುದು, ಡ್ಯಾನ್ಸ್ ಮೇಳದಲ್ಲಿ ಸ್ಪರ್ಧೆಗೆ ಅವಕಾಶವಿರುವುದಿಲ್ಲ ಎಂದು ಡಿ.ಹೆಚ್.ಮೇದಪ್ಪ ಸ್ಪಷ್ಟಪಡಿಸಿದರು. ಜಿಲ್ಲೆಯ ಆಟೋ ಮಾಲೀಕರು, ಚಾಲಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಡ್ಯಾನ್ಸ್ ಮೇಳದಲ್ಲಿ ಭಾಗವಹಿಸುವ ತಂಡಗಳು ಏಪ್ರಿಲ್ 5ರ ಒಳಗಾಗಿ 6360252689 ಮತ್ತು 9483840637 ಈ ಸಂಖ್ಯೆಗಳನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದ ನಗರಾಧ್ಯಕ್ಷ ಸಮ್ಮದ್ ಎ., ಉಪಾಧ್ಯಕ್ಷ ದಿನೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬಾರನ ದಿನೇಶ್, ಖಜಾಂಚಿ ಹೆಚ್.ಎಸ್.ನಾಗರಾಜ್ ಹಾಗೂ ನಿರ್ದೇಶಕ ಜೆಸ್ಟಿನ್ ಡಿಸೋಜ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.