Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್

ಮಾರ್ಚ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮಾ.30 NEWS DESK : ಭಗವಾನ್ ಮಹಾವೀರರ ತತ್ವ, ಚಿಂತನೆ ಹಾಗೂ ಅಹಿಂಸೆಯನ್ನು ಅಳವಡಿಸಿಕೊಂಡಲ್ಲಿ ಪ್ರಪಂಚದಲ್ಲಿ ಯಾವುದೇ ಯುದ್ದ ನಡೆಯುವುದಿಲ್ಲ. ಆ ನಿಟ್ಟಿನಲ್ಲಿ ಭಗವಾನ್ ಮಹಾವೀರರ ಸಂದೇಶಗಳು ಹಾಗೂ ಮಾರ್ಗದರ್ಶನವನ್ನು ಪಾಲಿಸುವಂತಾಗಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ವಾಣಿ ಪುಷ್ಪರಾಜ್ ಅವರು ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಮೆರಿಕಾ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದ ವಿಶ್ವದಲ್ಲಿ ಒಂದು ರೀತಿ ಸಂದಿಗ್ಧ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಆರ್ಥಿಕ ಚಟುವಟಿಕೆ ಹಾಗೂ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಹೇಳಿದರು. ‘ಇಂದಿನ ವೇಗದ ಬದುಕಿನಲ್ಲಿ ಜಗತ್ತು ಒಂದು ಹಳ್ಳಿಯಾಗಿದ್ದು, ರಾಷ್ಟ್ರ ರಾಷ್ಟ್ರಗಳು ಒಂದಕ್ಕೊಂದು ಅವಲಂಬಿತವಾಗಿ ಬದುಕು ನಡೆಸುವಂತಾಗಿದೆ. ಆದ್ದರಿಂದ ಇಡೀ ವಿಶ್ವದಲ್ಲಿ ಶಾಂತಿ ನೆಲೆಸುವಂತಾಗಬೇಕು. ಅದಕ್ಕೆ ಮಹಾವೀರರ ಸಂದೇಶಗಳು ಮತ್ತು ತತ್ವಗಳನ್ನು ಅಳವಡಿಸಿಕೊಂಡು ಮುನ್ನಡೆಯುವಂತಾಗಬೇಕು ಎಂದು ವಾಣಿ ಪುಷ್ಪರಾಜ್ ಅವರು ಪ್ರತಿಪಾದಿಸಿದರು.’
ಭಗವಾನ್ ಮಹಾವೀರರು ಜೈನ ಧರ್ಮದ 24ನೇ ತೀರ್ಥಂಕರರಾಗಿದ್ದು, ಅಹಿಂಸೆ, ಸತ್ಯ, ಬ್ರಹ್ಮಚರ್ಯ, ಅಸ್ತೇಯ ಮತ್ತು ಅಪರಿಗ್ರಹ ಎಂಬ ಪಂಚ ಮಹಾವ್ರತಗಳನ್ನು ಭೋದಿಸಿದ್ದಾರೆ ಎಂದು ವಾಣಿ ಪುಷ್ಪರಾಜ್ ಅವರು ತಿಳಿಸಿದರು. ಕ್ರಿಸ್ತ ಪೂರ್ವ 6ನೇ ಶತಮಾನದಲ್ಲಿ ಜನಿಸಿರುವ ಭಗವಾನ್ ಮಹಾವೀರರು 12 ವರ್ಷಗಳ ಕಠಿಣ ತಪಸ್ಸಿನ ನಂತರ ಸರ್ವ ಜ್ಞಾನ ಪಡೆದು ಪ್ರತಿಯೊಂದು ಜೀವಿಗಳ ಉದ್ಧಾರಕ್ಕೆ ಅಹಿಂಸಾ ಮಾರ್ಗವನ್ನು ಬೋಧಿಸಿದರು ಎಂದು ಹೇಳಿದರು. ಮಹಾವೀರರ ಬಾಲ್ಯದ ಹೆಸರು ವರ್ದಮಾನ ಆಗಿದ್ದು, ಸತ್ಯದ ಹುಡುಕಾಟದಲ್ಲಿ 30ನೇ ವಯಸ್ಸಿನಲ್ಲಿ ಮನೆ ಬಿಟ್ಟು ಜೈನ ಧರ್ಮದ ತತ್ವ-ಮಾರ್ಗಗಳನ್ನು ಪಸರಿಸುತ್ತಾರೆ ಎಂದು ನಿವೃತ್ತ ಪ್ರಾಂಶುಪಾಲರು ಹೇಳಿದರು. ಅಹಿಂಸೆಯ ಪರಮಧರ್ಮ ಪ್ರತಿಯೊಂದು ಜೀವಿಯೂ ಮನುಷ್ಯ, ಪ್ರಾಣಿ, ಸಸ್ಯ, ಸಮಾನವಾದುದು ಮತ್ತು ಎಲ್ಲದರಲ್ಲೂ ಆತ್ಮವಿದೆ. ಆದ್ದರಿಂದ ಯಾವ ಪ್ರಾಣಿ, ಪಕ್ಷಿಗೂ ಹಿಂಸೆ ನೀಡಬಾರದು ಎಂದು ಮಹಾವೀರರು ಪ್ರತಿಪಾದಿಸಿದ್ದಾರೆ ಎಂದು ಅವರು ನುಡಿದರು. ಪಂಚ ಮಹಾವ್ರತಗಳು ಸೇರಿದಂತೆ ರತ್ನತ್ರಯಗಳು, ಕರ್ಮ ಸಿದ್ಧಾಂತ, ಅನೇಕಾಂತವಾದ ಹೀಗೆ ಹಲವು ಭೋದನೆಗಳಲ್ಲಿ ವಿವರಿಸಿದ್ದಾರೆ ಎಂದು ವಾಣಿ ಪುಷ್ಪರಾಜ್ ಅವರು ತಿಳಿಸಿದರು. ಜೈನ ಸಮಾಜದ ಅಲ್ಪಸಂಖ್ಯಾತರ ವಿಭಾಗದ ಸದಸ್ಯರಾದ ಜೆ.ಎನ್.ಚಂದ್ರಪ್ರಸಾದ್ ಅವರು ಮಾತನಾಡಿ ಭಗವಾನ್ ಮಹಾವೀರರು ಜೈನಧರ್ಮದ 24ನೇ ಮತ್ತು ಕೊನೆಯ ತೀರ್ಥಂಕರರಾಗಿದ್ದು, ಮಹಾವೀರರು ಹಾಕಿಕೊಟ್ಟ ಸತ್ಯದ ಮಾರ್ಗದಲ್ಲಿ ನಡೆದರೆ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಅವರು ಪ್ರತಿಪಾದಿಸಿದರು. ಸಮಾಜದಲ್ಲಿ ಅಹಿಂಸೆ, ಶಾಂತಿ ಇರಬೇಕು. ಮೋಸ ಮತ್ತು ವಂಚನೆ ಇರಬಾರದು. ಯಾರಿಗೂ ನೋವು ಉಂಟಾಗದಂತೆ ನಡೆದುಕೊಳ್ಳಬೇಕು. ಸತ್ಯ ಧರ್ಮದಲ್ಲಿ ನಂಬಿಕೆ ಇರಬೇಕು. ಆ ನಿಟ್ಟಿನಲ್ಲಿ ಭಗವಾನ್ ಮಹಾವೀರರ ಸಂದೇಶಗಳು ಇಂದಿಗೂ ಸಹ ಸಾರ್ವಕಾಲೀಕವಾಗಿವೆ ಎಂದು ಜೆ.ಎನ್.ಚಂದ್ರಪ್ರಸಾದ್ ಅವರು ವಿವರಿಸಿದರು.
ಜೈನ ಸಮಾಜದ ಜಿಲ್ಲಾಧ್ಯಕ್ಷರಾದ ಜೆ.ಎನ್.ಪುಷ್ಪರಾಜ್ ಅವರು ಮಾತನಾಡಿ ಭಗವಾನ್ ಮಹಾವೀರರ ಸಂದೇಶಗಳನ್ನು ಅಳವಡಿಸಿಕೊಂಡಲ್ಲಿ ಪ್ರಪಂಚದಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯ, ಆ ನಿಟ್ಟಿನಲ್ಲಿ ಭಗವಾನ್ ಮಹಾವೀರರ ಚಿಂತನೆ ಮತ್ತು ಮಾರ್ಗದರ್ಶನಗಳು ಪ್ರಸ್ತುತ ದಿನದಲ್ಲಿ ಹಿಂದಿಗಿಂತ ಇಂದು ಅತ್ಯಗತ್ಯವಾಗಿದೆ ಎಂದು ಅವರು ನುಡಿದರು. ಭಗವಾನ್ ಮಹಾವೀರರ ಶಾಂತಿಮಂತ್ರವನ್ನು ಇದೇ ಸಂದರ್ಭದಲ್ಲಿ ಪಠಿಸಲಾಯಿತು. ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ದೇವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ವಿದ್ಯಾರ್ಥಿಗಳು ಇತರರು ಇದ್ದರು. ಅನ್ವಿತ್ ಮತ್ತು ಸಮನ್ಯು ನಾಡಗೀತೆ ಹಾಡಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.