
ನಾಪೋಕ್ಲು NEWS DESK ಮಾ.30 : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿರುವ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಈ ಕೆಳಗಿನಂತೆ ಎಚ್ಚರಿಕೆ ನೀಡಿದ್ದಾರೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿರುವ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಸದರಿ ವಿಡಿಯೋ ಮಾಡಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದಿನಾಂಕ: 30-03-2026 ರಂದು ದೂರು ಸ್ವೀಕರಿಸಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಮೊ.ಸಂ: 37/2026, ಕಲಂ: 196(1) ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. (Facebook/ Whatsapp/ X/ Instagram & etc) ಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಯಾವುದೇ ರೀತಿಯ ಸಂದೇಶ/ಭಾವಚಿತ್ರ/ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಸತ್ಯ-ಅಸತ್ಯತೆಯನ್ನು ಪರಿಶೀಲಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಕೋರಿದೆ ಹಾಗೂ ಕೊಡಗು ಜಿಲ್ಲಾ ಪೊಲೀಸ್ ಸಾಮಾಜಿಕ ಜಾಲತಾಣಗಳ ಮೇಲೆ ಸಂಪೂರ್ಣ ನಿಗಾವಹಿಸಿದ್ದು, ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಸುಳ್ಳು ಸುದ್ದಿಯ ಪೋಸ್ಟ್‌ಗಳನ್ನು ಹರಿಬಿಟ್ಟು ಆಪಪ್ರಚಾರ ಮಾಡುವ & ಆತಂಕ ಸೃಷ್ಟಿಸುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಯಾವುದೇ ರೀತಿ ಅಕ್ರಮ ಚಟುವಟಿಕೆಗಳ ಕುರಿತು ಸ್ಥಳೀಯ ಪೊಲೀಸ್ ಠಾಣೆ/ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ. (ಪೊಲೀಸ್ ಅಧೀಕ್ಷಕರು. ಕೊಡಗು ಜಿಲ್ಲೆ, ಮಡಿಕೇರಿ)








