
ವಿರಾಜಪೇಟೆ ಮಾ.30 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಏ.3 ಮತ್ತು 4 ರಂದು ನಡೆಯಲಿದೆ. ಕೆದಮುಳ್ಳೂರು ಚಾಮುಂಡಿ ಹಬ್ಬ ಎಂದರೆ ಎಲ್ಲೆಡೆ ಪ್ರಚಲಿತದಲ್ಲಿದ್ದು ಅತ್ಯಂತ ಹೆಸರುವಾಸಿಯಾಗಿದೆ. ಹಾಗೂ ಅತ್ಯಂತ ಶಕ್ತಿಯನ್ನು ಹೊಂದಿರತಕ್ಕಂತಹ ಚಾಮುಂಡಿ ದೇವಿಯ ಕ್ಷೇತ್ರವಾಗಿದೆ. ಹಾಗಾಗಿ ಈ ಉತ್ಸವದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ತರು, ದೂರ ದೂರದ ಊರುಗಳಿಂದ ಭಕ್ತರು, ಆಗಮಿಸಿ ದೇವರಲ್ಲಿ ಹರಕೆ ಹೊತ್ತುಕೊಂಡು ತಮ್ಮ ಸಂಕಷ್ಟಗಳನ್ನು ಪರಿಹರಿಸಿಕೊಳ್ಳುತ್ತಾರೆ. 2 ರಂದು ರಾತ್ರಿ 8.30 ಗಂಟೆಗೆ ಕೊಟ್ಟಿಪಾಡೋ, 3 ರಂದು ರಾತ್ರಿ 8:30 ಗಂಟೆಗೆ ತಕ್ಕರ ಮನೆಯಿಂದ ಭಂಡಾರ ಇಳಿಯುವುದು, ಹಾಗೂ ರಾತ್ರಿ ವಿವಿದ ಕೋಲಗಳು, 4ರಂದು ಬೆಳಿಗ್ಗೆ 7.30 ಗಂಟೆಗೆ ವಿಷ್ಣುಮೂರ್ತಿ ತೆರೆ, ಮಧ್ಯಾಹ್ನ 12 ಗಂಟೆಗೆ ಶ್ರೀ ಚಾಮುಂಡಿ ತೆರೆ ನಡೆಯಲಿದೆ. ಬೆಳಿಗ್ಗೆ 4 ರಂದು ಪ್ರಮುಖವಾದ ವಿಷ್ಣುಮೂರ್ತಿ ಕೋಲವು ದೇವಾಲಯದ ಮುಂದೆ ಸಿದ್ಧಪಡಿಸಿದ್ದ ಬೆಂಕಿ ಕೆಂಡದ ಮೇಲೆ 101 ಬಾರಿ ಮೇಲೇರಿ ಬೀಳಲಿದೆ. ಮಧ್ಯಾಹ್ನ 12 ಗಂಟೆಗೆ ಪ್ರಮುಖವಾದ ಚಾಮುಂಡಿ ದೇವಿಯ ಕೋಲ ನೆರವೇರಲಿದೆ. ಸಂಜೆ ವೇಳೆಗೆ ದೇವರು ಬನಕ್ಕೆ ತೆರಳಿ ಅಲ್ಲಿ ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ಬಳಿಕ ವಾರ್ಷಿಕ ತೆರೆ ಮಹೋತ್ಸವಕ್ಕೆ ತೆರೆ ಕಾಣಲಿದೆ. ವಾರ್ಷಿಕ ತೆರೆ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವ ತಕ್ಕರಾದ ಮಾಳೇಟಿರ ಗಣೇಶ್ ಕಾರ್ಯಪ್ಪ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.









