Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ*

ಮಾರ್ಚ್ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.31 : ಮಡಿಕೇರಿ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ 14 ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವವು ಏ.1 ರಿಂದ 4ರ ವರೆಗೆ ಜರುಗಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.1 ರಂದು ಸಂಜೆ 6.30 ರಿಂದ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕುನ್ನತ್ತಿಲ್ಲತ್ ಮುರಳಿಕೃಷ್ಣ ನಂಬೂದರಿ ಹಾಗೂ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ಅವರ ನೇತೃತ್ವದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ಜರುಗಲಿದೆ ಎಂದರು.
ಏ.1 ರಂದು ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ಸಂಜೆ ಆಚಾರ್ಯವರ್ಣ, ಪ್ರಾರ್ಥನೆ, ಕಲಶÀ ಪೂಜೆ, ಶ್ರೀ ಭಗವತಿ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಏ.2 ರಂದು ಬೆಳಿಗ್ಗೆ 7.00 ಗಂಟೆಗೆ ಗಣಪತಿ ಹೋಮ, 9 ಗಂಟೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಷ್ಠಾಭಿಷೇಕ, 10 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪಾಭಿಷೇಕ, 11 ಗಂಟೆಗೆ ಶ್ರೀ ನಾಗದೇವರಿಗೆ ತಂಬೀಲ ಸಮರ್ಪಣೆ, 11.30 ಗಂಟೆಗೆ ಕಲಶಾಭಿಷೇಕ ಮತ್ತು 12.00 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆಯಾಗಲಿದೆ. ಅದೇ ದಿನ ಸಂಜೆ 4 ಗಂಟೆಗೆ ಧ್ವಜಾರೋಹಣದೊಂದಿಗೆ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದೆ. 4.30ಕ್ಕೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು, 5.30ಕ್ಕೆ ಮುತ್ತಪ್ಪ ದೇವರ ವೆಳ್ಳಾಟಂ (ತೆರೆ) ನಡೆಯಲಿದೆ. 6.30 ಗಂಟೆಗೆ ಶ್ರೀ ಭಗವತಿ ದೇವಿಗೆ ದೀಪಾರಾಧನೆ ಮತ್ತು ಪುಷ್ಪಾರ್ಚನೆ ನಡೆಯಲಿದೆ. 7.30 ಗಂಟೆಗೆ ಹರಕೆ ಕೋಲ ನಡೆಸಿಕೊಡಲಾಗುವುದು. (ಶ್ರೀ ವಿಷ್ಣು ಮೂರ್ತಿ, ಶಿವಭೂತಂ, ಶ್ರೀ ಪೋದಿ, ಶ್ರೀ ಕುಟ್ಟಿಚಾತನ್ ದೈವದ ಕೋಲಗಳನ್ನು ಕಟ್ಟಿಸಲು ವ್ಯವಸ್ಥೆ ಮಾಡಿಕೊಡಲಾಗುತ್ತದೆ.)
ಏ.3 ರಂದು ಸಂಜೆ 5.30 ಗಂಟೆಗೆ ಶ್ರೀ ಮುತ್ತಪ್ಪ ದೇವರ ಕಲಶ ಮೆರವಣಿಗೆಯು ಗಾಂಧಿ ಮೈದಾನದಿಂದ ಹೊರಡಲಿದೆ. ಮೆರವಣಿಗೆಯಲ್ಲಿ ಕಡಗದಾಳು, ನೀರುಕೊಲ್ಲಿ, ಸಂಪಿಗೆ ಕಟ್ಟೆ, ಮೈಸೂರು ರಸ್ತೆಯ ಡಿಪೋ ಬಳಿ, ಮೈತ್ರಿ ಜಂಕ್ಷನ್ ಸೇರಿದಂತೆ ನಗರದ ನಾಲ್ಕೂ ದಿಕ್ಕುಗಳಿಂದ ಹೊರಡುವ ಕಳಸ ಮೆರವಣಿಗೆಯು ಶ್ರೀ ಮುತ್ತಪ್ಪ ದೇವಾಲಯದ ಕಲಶದೊಂದಿಗೆ ಮಹಿಳೆಯರು ಮತ್ತು ಮಕ್ಕಳ ತಾಲಾಪೊಲಿ, ಆಕರ್ಷಕ ಕಲಾ ತಂಡಗಳು, ಭಜನಾ ಕುಣಿತ, ಚಿಂಗಾರಿ ಮೇಳ, ವಿದ್ಯುತ್ ಅಲಂಕೃತ ಮಂಟಪಗಳು ಮೆರವಣಿಗೆಗೆ ಮೆರಗು ನೀಡಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ ಅವರು, ಮೆರವಣಿಗೆಯಲ್ಲಿ ಭಾಗವಹಿಸುವ ಅದೃಷ್ಟವಂತ ಮೂವರು ಮಹಿಳೆಯರು ಹಾಗೂ ಪುರುಷರಿಗೆ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಟಿ.ಕೆ.ಸುಧೀರ್ ತಿಳಿಸಿದರು.


ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು, 4.30ಕ್ಕೆ ಶ್ರೀ ಶಾಸ್ತಪ್ಪ ದೇವರ ವೆಳ್ಳಾಟಂ, 5.30 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 7 ಗಂಟೆಗೆ ಶ್ರೀ ವಿಷ್ಣುಮೂರ್ತಿ ಮೇಲೇರಿಗೆ ಅಗ್ನಿ ಸ್ಪರ್ಶ, ರಾತ್ರಿ 8.40ರಿಂದ ಅನ್ನ ಸಂತರ್ಪಣೆ, ಪ್ರಸಾದ ವಿತರಣೆ, 7.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, 9.30 ಗಂಟೆಗೆ ಶ್ರೀ ಪೊವದಿ ವೆಳ್ಳಾಟಂ, 10.30 ಗಂಟೆಗೆ ಶ್ರೀ ವಿಷ್ಣುಮೂರ್ತಿ ವೆಳ್ಳಾಟಂ, 12.00 ಶ್ರೀ ಶಿವಭೂತ ತೆರೆ, ರಾತ್ರಿ 1 ಗಂಟೆಗೆ ಶ್ರೀ ಗುಳಿಗ ದೇವರ ತೆರೆ, 2 ಗಂಟೆಗೆ ಕಳಗ ಪಾಟ್, ಸಂದ್ಯಾವೇಲೆ, 2.30 ಗಂಟೆಗೆ ಶ್ರೀ ಕುಟ್ಟಿಚಾತನ್ ದೇವರ ತೆರೆ ನಡೆಯಲಿದೆ.
ಏ.4 ರಂದು ಬೆಳಿಗ್ಗೆ 4 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ತೆರೆ, 5 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಮೇಲೇರಿ, 8 ಗಂಟೆಗೆ ಶ್ರೀ ಪೊವ್ವದಿ ತೆರೆ, 9.30 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಬಾರಣೆ, ಮಧ್ಯಾಹ್ನ 11.30 ಕ್ಕೆ ಧ್ವಜ ಅವರೋಹಣ ನಡೆಯಲಿದೆ ಎಂದು ವಿವರಿಸಿದರು.
ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಮಣ್ಯ ದೇವಾಲಯದ ಸುತ್ತ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಪೌಳಿ ಮತ್ತು ತೀರ್ಥ ಮಂಟಪ ನಿರ್ಮಾಣದÀ ಯೋಜನೆ ರೂಪಿಸಲಾಗಿದೆ. ಭಕ್ತರು ಹಾಗೂ ದಾನಿಗಳು ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದೇವಾಲಯ ಸಮಿತಿಯ ಉಪಾಧ್ಯಕ್ಷ ಬಿ.ಕೆ.ರವೀಂದ್ರ ರೈ, ಖಜಾಂಚಿ ಎನ್.ವಿ.ಉಣ್ಣಿಕೃಷ್ಣ, ಮಹಿಳಾ ವೇದಿಕೆ ಸದಸ್ಯೆ ಕಾಳಚಂಡ ರಾಣಿ ಗಣಪತಿ, ಸಲಹೆಗಾರ ಟಿ.ಆರ್.ವಾಸು ಹಾಗೂ ಕೆ.ಎಸ್.ರಮೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.