Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ

ಮಾರ್ಚ್ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮಾ.31 : ಮಡಿಕೇರಿ ಕೊಡವ ಸಮಾಜದ ವತಿಯಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ್, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ, ಉಪಾಧ್ಯಕ್ಷರಾದ ದೇವಯ್ಯ, ಮಾಜಿ ಸೈನಿಕರು, ಹಲವು ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಬ್ಯಾಂಡ್‌ನೊAದಿಗೆ ಗೌರವ ಸಲ್ಲಿಸಲಾಯಿತು.
ಕೊಡವ ಸಮಾಜದ ನಿರ್ದೇಶಕರು, ಎನ್.ಸಿ.ಸಿ.ವಿದ್ಯಾರ್ಥಿಗಳು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಇತರರು ಪಾಲ್ಗೊಂಡಿದ್ದರು.
ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕÀ ಡಾ.ಮಂತರ್‌ಗೌಡ ಅವರು ಮಾತನಾಡಿ ಭಾರತೀಯ ಸೇನಾ ಕ್ಷೇತ್ರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಅಪಾರ ಕೊಡುಗೆ ನೀಡಿದ್ದು, ರಾಷ್ಟçದ ಕಣ್ಮಣಿಯಾಗಿದ್ದಾರೆ ಎಂದು ನುಡಿದರು.
ಭಾರತದಂತಹ ಬೃಹತ್ ರಾಷ್ಟçದಲ್ಲಿ ದೊಡ್ಡ ಸೇನೆಯನ್ನು ಹೊಂದಿದ್ದು, ಈ ಸೇನಾ ಕ್ಷೇತ್ರದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ರಾಷ್ಟç ರಕ್ಷಣೆ ಹಾಗೂ ಭಾರತೀಯ ಸೇನೆಯನ್ನು ಬಲಪಡಿಸುವಲ್ಲಿ ಶ್ರಮಿಸಿದ್ದಾರೆ ಎಂದು ಹೇಳಿದರು.
ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕವಾಗಿದ್ದು, ಪ್ರೇರಣೆಯಾಗಿದ್ದಾರೆ. ಇವರ ಶಿಸ್ತು ಬದ್ಧ ಬದುಕನ್ನು ಮೈಗೂಡಿಸಿಕೊಳ್ಳಬೇಕು ಎಂದು ಡಾ.ಮಂತರ್ ಗೌಡ ಅವರು ಹೇಳಿದರು.


ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಬದುಕು, ಸಾಧನೆ, ಅವರು ಸೇನಾ ಕ್ಷೇತ್ರದಲ್ಲಿ ಬಿಟ್ಟು ಹೋಗಿರುವ ಇತಿಹಾಸವನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ಜನರಲ್ ತಿಮ್ಮಯ್ಯ ಅವರು ಸಣ್ಣ ವಯಸ್ಸಿನಲ್ಲಿಯೇ ಭಾರತೀಯ ಸೇನೆಗೆ ಸೇರ್ಪಡೆಗೊಂಡು 35 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಭಾರತೀಯ ಸೇನೆಯ ಮುಖ್ಯಸ್ಥರಾಗಿ, ಜನರಲ್ ಆಗಿ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದು, ಜನರಲ್ ತಿಮ್ಮಯ್ಯ ಅವರ ವ್ಯಕ್ತಿತ್ವವು ಎಲ್ಲರ ಬದುಕಿನ ದಾರಿ ದೀಪವಾಗಿದೆ ಎಂದರು.
ಜನರಲ್ ತಿಮ್ಮಯ್ಯ ಅವರು ಭಾರತೀಯ ಸೇನೆಗೆ ನೀಡಿರುವ ಕೊಡುಗೆ ಅಪಾರವಾಗಿದೆ. ತಿಮ್ಮಯ್ಯ ಅವರ ಶಿಸ್ತು, ಸಮಯ ಪ್ರಜ್ಞೆಯನ್ನು ವಿದ್ಯಾರ್ಥಿಗಳು ಕಲಿಯಬೇಕು ಎಂದರು.
ಜನರಲ್ ತಿಮ್ಮಯ್ಯ ಅವರ ಮೌಲ್ಯಾಧಾರಿತ ಬದುಕಿನಂತೆ ನಡೆಯಬೇಕು. ಅವರು ಹುಟ್ಟಿದ ಮನೆ ಸನ್ನಿಸೈಡ್ ಸುಂದರವಾಗಿರುವುದರ ಜೊತೆಗೆ ಸ್ಫೂರ್ತಿದಾಯಕವಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.
ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಮತ್ತು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆ ನಿರ್ಮಾಣಕ್ಕೆ ಈ ಹಿಂದೆ ಶ್ರಮಿಸಲಾಗಿದೆ. ಇವರು ಭಾರತೀಯ ಸೇನೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದು, ಇವರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಹೇಳಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಅವರ ಸೇನಾ ಕ್ಷೇತ್ರದಲ್ಲಿನ ಸಾಧನೆ, ಕೊಡುಗೆ ಬಗ್ಗೆ ಗುಣಗಾನ ಮಾಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ, ಉಪಾಧ್ಯಕ್ಷರಾದ ಕೆ.ಎ.ದೇವಯ್ಯ, ರಾಣಿ ಮಾಚಯ್ಯ, ಬೊಪ್ಪಂಡ ಸರಳ ಕರುಂಬಯ್ಯ, ಲೆ.ಕ.(ನಿ) ಎಂ. ಕಾವೇರಪ್ಪ, ಇತರರು ಇದ್ದರು. ಫೋಟೋ :: ಕೊಡವ ಸಮಾಜ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.