Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ

ಮಾರ್ಚ್ 31, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK  ಮಾ.31:-ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಾರ್ಯಾಲಯ ಇವರ ಪರವಾಗಿ, ಜನಗಣತಿ ಕಾಯ್ದೆ-1948 ರ ಪ್ರಕಾರ ಕೊಡಗು ಜಿಲ್ಲೆಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿ ಇದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿದೆ. ಅದರಂತೆ, ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ, ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ ಹಾಗೂ ಯಾವುದೇ ತೆರಿಗೆ ಅಥವಾ ಪರಿಶೋಧನಾ ಉದ್ದೇಶಕ್ಕೆ ಸದರಿ ದತ್ತಾಂಶವನ್ನು ಬಳಿಸಿಕೊಳ್ಳುವುದಿಲ್ಲ. ಇದು ಸುರಕ್ಷಿತವಾಗಿ ಇರಿಸಲಾಗುತ್ತದೆ ಎಂದು ಜಿಲ್ಲಾಡಳಿತ ಪ್ರಕಣೆ ತಿಳಿಸಿದೆ.
ಈ ನಿಟ್ಟಿನಲ್ಲಿ ಏಪ್ರಿಲ್, 01 ರಿಂದ 15 ರವರೆಗೆ ನಿರ್ದೇಶನಾಲಯದಿಂದ ನೀಡಿರುವ ಸರಳವಾದ ಹಂತಗಳನ್ನು ಅನುಸರಿಸುವುದರ ಮೂಲಕ 15-20 ನಿಮಿಷಗಳಲ್ಲಿ ತಮ್ಮ ಮನೆಯ ಸ್ವಯಂ ಗಣತಿಯನ್ನು ಮಾಡಿಕೊಂಡು ಏಕೀಕೃತ ಸ್ವಯಂ ಗಣತಿ ಗುರುತಿನ ಸಂಖ್ಯೆಯನ್ನು (SELF ENUMERATION ID) ಪಡೆಯಬಹುದಾಗಿರುತ್ತದೆ.
ಹಾಗೆಯೇ ಪರಿಶೀಲನೆಗೆ ಬರುವ ಗಣತಿದಾರರಿಗೆ ಈ ಐಡಿ ಯನ್ನು ಒದಗಿಸಿ ಮನೆಗಣತಿ ಕಾರ್ಯವನ್ನು ಪೂರ್ಣಗೊಳಿಸಿಕೊಳ್ಳ ಬಹುದಾಗಿದೆ. ತಮ್ಮ ಸ್ವಯಂ ಮನೆ ಗಣತಿಯ ಕಾರ್ಯದ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಗಣತಿದಾರರು ಮತ್ತು ಮೇಲ್ವಿಚಾರಕರ ಪರಿಶೀಲನೆಗೆ ಒಳಪಟ್ಟಿರುತ್ತದೆ.
ಈ ಮೇರೆಗೆ, ವಿಕಸಿತ ಭಾರತ @2047 ಅಡಿಪಾಯಕ್ಕೆ ಸಹಕರಿಸಲು ಕೊಡಗು ಜಿಲ್ಲೆಯ ಎಲ್ಲಾ ಸಾರ್ವಜನಿಕ/ ನಾಗರಿಕರು ತಾವೇ ಅಂತರ್ಜಾಲದ ಕೊಂಡಿ (Link): https://se.census.gov.in/ ಅಂತರ್ಜಾಲದ ಲಿಂಕ್ ಮೂಲಕ ತಮ್ಮ ಮನೆಯ ಗಣತಿಯನ್ನು ಮಾಡಿಕೊಳ್ಳಲು ಕೋರಿದೆ. ಸಮಸ್ಯೆಗಳು ಇದ್ದಲ್ಲಿ ಅಂತರ್ಜಾಲದಲ್ಲಿ ಲಭ್ಯವಿರುವ se User Guide, se Flow Chart & se ಅಂಕಿಗಳನ್ನು ಅನುಸರಿಸಬಹುದಾಗಿರುತ್ತದೆ ಎಂದು ಜಿಲ್ಲಾ ಜನಗಣತಿ ಅಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.
ಸರಳ ವಿಧಾನಗಳು: ಅಂತರ್ಜಾಲದ ಲಿಂಕ್ ನಲ್ಲಿ ಲಾಗಿನ್ ಆಗುವುದು (Access And Intial Login, ಮನೆಯ ನೊಂದಣಿ ಮಾಡುವುದು (Household Registration), ಭಾμÉಯ ಆಯ್ಕೆ ಮತ್ತು ಓ.ಟಿ.ಪಿ ಪ್ರಮಾಣೀಕರಣ (Language selection and OTP Vrification), ನಿಮ್ಮ ನಿವಾಸ ಸ್ಥಳದ ವಿವರಗಳನ್ನು ಒದಗಿಸುವುದು (Providing Location Details of your Residence), ನಕ್ಷೆಯಲ್ಲಿ ನಿಮ್ಮ ನಿವಾಸವನ್ನು ಗುರುತಿಸುವುದು (Locating your Residence on Map), ಪ್ರಶ್ನಾವಳಿಗಳ ಪೂರ್ಣಗೊಳಿಸುವುದು (Completing the Questionnaire), ನಮೂದಿಸಿದ ದತ್ತಾಂಶದ ಪರಿಶೀಲನೆ (Review of entered data), (Final Subimission) ಹಾಗೂ ಕ್ಷೇತ್ರ ಮೇಲ್ವಿಚಾರಣೆ (Field Validation) ಮಾಡಬೇಕು ಎಂದು ಜಿಲ್ಲಾ ಜನಗಣತಿ ಅಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಇನ್ನಷ್ಟು ಮಾಹಿತಿ: ಭಾರತ ಸರ್ಕಾರದಿಂದ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿಯ ಪ್ರಕ್ರಿಯೆ ನಮ್ಮ ಜನಗಣತಿ ನಮ್ಮ ಅಭಿವೃದ್ಧಿ (2027ರ ಜನಗಣತಿಯ ಮೊದಲ ಹಂತ) ಪ್ರಾರಂಭವಾಗಲಿದೆ. ಮನೆಪಟ್ಟಿ ಮತ್ತು ಮನೆ ಗಣತಿಯ ಮೊದಲು, 15 ದಿನಗಳ ಕಾಲ ಸ್ವಯಂ-ಗಣತಿಗಾಗಿ ವಿಶೇಷ ಸೌಕರ್ಯ ಒದಗಿಸಲಾಗುತ್ತಿದೆ. ಈ ಸಮಯದಲ್ಲಿ ತಮ್ಮ ವಿವರಗಳನ್ನು ಸ್ವತಃ ಆನ್‍ಲೈನ್‍ನಲ್ಲಿ ಭರ್ತಿ ಮಾಡಬಹುದು.
ಸ್ವಯಂ-ಗಣತಿ: ರಾಜ್ಯದಲ್ಲಿ 1ನೇ ಏಪ್ರಿಲ್ 2026 ರಿಂದ-15ನೇ ಏಪ್ರಿಲ್ 2026ರ ವರೆಗೆ ಸರಳ, ಸುರಕ್ಷಿತ ಮತ್ತು ಡಿಜಿಟಲ್ ಸೌಲಭ್ಯ.
ಸ್ವಯಂ-ಗಣತಿಯನ್ನು ಹೇಗೆ ಮಾಡುವುದು?: ಅಧಿಕೃತ ಪೋರ್ಟಲ್ se.census.gov.in ಗೆ ಭೇಟಿ ನೀಡಿ, ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ OTP ಮೂಲಕ ಲಾಗಿನ್ ಆಗಿ, ನಿಮ್ಮ ರಾಜ್ಯ, ಜಿಲ್ಲೆ ಮತ್ತು ಸ್ಥಳೀಯ ವಿವರಗಳನ್ನು ಆಯ್ಕೆ ಮಾಡಿ, ಡಿಜಿಟಲ್ ಮ್ಯಾಪ್‍ನಲ್ಲಿ ನಿಮ್ಮ ಮನೆಯ ಸ್ಥಳವನ್ನು ಗುರುತಿಸಿ, ನಿಮ್ಮ ಮನೆ ಮತ್ತು ಕುಟುಂಬಕ್ಕೆ ಸಂಬಂಧಿಸಿದ ವಿವರಗಳನ್ನು ಭರ್ತಿ ಮಾಡಿ, ಸಲ್ಲಿಸಿದ ನಂತರ ನೀವು SE ID ಅನ್ನು ಸ್ವೀಕರಿಸುತ್ತೀರಿ, ನಿಮ್ಮ SE ID ಅನ್ನು ಸುರಕ್ಷಿತವಾಗಿರಿಸಿಕೊಳ್ಳಿ, ಗಣತಿದಾರರು ಭೇಟಿ ನೀಡಿದಾಗ ನಿಮ್ಮ SE ID ಅನ್ನು ಒದಗಿಸಿ, ಗಣತಿದಾರರು SE ID ಮೂಲಕ ವಿವರಗಳನ್ನು ದೃಢೀಕರಿಸುತ್ತಾರೆ.
ಇದರ ಪ್ರಯೋಜನಗಳು: ಸಮಯವನ್ನು ಉಳಿಸುತ್ತದೆ, ನಿಖರವಾದ ಮಾಹಿತಿ, ವೇಗವಾದ ಮಾಹಿತಿಗಳ ಸಂರಕ್ಷಣೆ ನೆನಪಿಡಿ: ಸ್ವಯಂ ಗಣತಿಯು ಒಂದು ವಿಶೇಷ ಸೌಲಭ್ಯವಾಗಿದೆ. ನೀವು ಸ್ವಯಂ ಗಣತಿಯನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, ನಿಗದಿತ ಅವಧಿಯಲ್ಲಿ ಗಣತಿದಾರರು ಅವಶ್ಯವಾಗಿ ನಿಮ್ಮ ಮನೆಗೆ ಭೇಟಿ ನೀಡಿ ನಿಮ್ಮ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ನಿಮ್ಮ ಎಲ್ಲಾ ಮಾಹಿತಿಗಳು ಸಂಪೂರ್ಣವಾಗಿ ಗೌಪ್ಯವಾಗಿ ಮತ್ತು ಸುರಕ್ಷಿತವಾಗಿರುತ್ತವೆ. ಜನಗಣತಿಯಲ್ಲಿ ಭಾಗವಹಿಸಿ, ಹೆಮ್ಮೆಯಿಂದ ಹೇಳಿ-ನನ್ನ ಗಣತಿ ದೇಶದ ಶಕ್ತಿ. ಬನ್ನಿ, ನಮ್ಮ ಜವಾಬ್ದಾರಿಯನ್ನು ನಿಭಾಯಿಸೋಣ ಮತ್ತು ಜನಗಣತಿಯಲ್ಲಿ ಭಾಗವಹಿಸೋಣ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.