ಮಡಿಕೇರಿ, NEWS DESK ಮಾ.31:-ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಏಪ್ರಿಲ್, 02 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ.
ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
















