ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ತಿತಿಮತಿಯ ತೋಟದಲ್ಲಿ ಬೀಡುಬಿಟ್ಟಿದ್ದ ಮರಿಯಾನೆ ಸೇರಿದಂತೆ ಸುಮಾರು ಐದು ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ ಮತ್ತಿಗೋಡು ಅರಣ್ಯಕ್ಕೆ ಮರಳಿ ಅಟ್ಟಲಾಗಿದೆ.

ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯವರ ಆದೇಶದಂತೆ ತಿತಿಮತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಅವರ ನಿರ್ದೇಶನದ ಮೇರೆಗೆ ವಲಯ ಅರಣ್ಯ ಅಧಿಕಾರಿ ಪ್ರಶಾಂತ್, ಡಿಎಫ್‌ಓ ದೇವರಾಜ್ ಮಾರ್ಗದರ್ಶನದಲ್ಲಿ ಪ್ರಾದೇಶಿಕ ವಲಯ ಸಿಬ್ಬದಿಗಳು ಹಾಗೂ ಇಟಿಎಫ್ ತಂಡದವರು ಕಾರ್ಯಾಚರಣೆ ನಡೆಸಿ ಆನೆಗಳನ್ನು ಅರಣ್ಯಕ್ಕೆ ಅಟ್ಟಿದರು.







