Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ

ಏಪ್ರಿಲ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK ಏ.1 : ಓಂಕಾರೇಶ್ವರ ವ್ಯವಸ್ಥಾಪನಾ ಸಮಿತಿಯ ಉಸ್ತುವಾರಿಯಲ್ಲಿರುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಶ್ರೀ ಕೋಟೆ ಮಹಾಗಣಪತಿ ದೇವಾಲಯಗಳ ಅಭಿವೃದ್ಧಿಗೆ ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಒಟ್ಟು ರೂ 1 ಕೋಟಿ ಅನುದಾನವನ್ನು ಸರಕಾರದಿಂದ ಒದಗಿಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದ್ದಾರೆ.
ಮಡಿಕೇರಿಯಲ್ಲಿ ಭೇಟಿ ಮಾಡಿದ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಗೂ ಸದಸ್ಯರುಗಳಾದ ಅಂಬೆಕಲ್ ಕುಶಾಲಪ್ಪ, ಪ್ರಕಾಶ್ ಆಚಾರ್ಯ ಮತ್ತು ಜಿ.ರಾಜೇಂದ್ರ ಇವರುಗಳು ಮಾಡಿದ ಮನವಿಗೆ ಸ್ಪಂದಿಸಿ ಶಾಸಕರು ಈ ಭರವಸೆ ನೀಡಿದರು.
ಸರಕಾರದಿಂದ ತನಗೆ ಶಾಸಕರ ಅನುದಾನ ದೊರಕುವ ಮೂಲದಿಂದ ರೂ. 50 ಲಕ್ಷ ಹಾಗೂ ಮುಜರಾಯಿ ಇಲಾಖೆಯಿಂದ ಸಚಿವ ರಾಮಲಿಂಗಾ ರೆಡ್ಡಿ ಅವರ ಮೂಲಕ ರೂ. 50 ಲಕ್ಷ, ಹೀಗೆ ಒಟ್ಟು ರೂ. 1 ಕೋಟಿ ಒದಗಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
ಈಗಾಗಲೇ ಸಮಿತಿಯಿಂದ ಸುಮಾರು ರೂ. 36 ಲಕ್ಷದ ಅಭಿವೃದ್ಧಿ ಯೋಜನೆಯನ್ನು ಆಂಜನೇಯ ದೇವಾಲಯ ಆವರಣದಲ್ಲಿ ಕೈಗೊಂಡು ಅದು ಮುಕ್ತಾಯ ಹಂತದಲ್ಲಿದೆ. ದೇವಾಲಯ ಸುತ್ತಲೂ ನೆಲಹಾಸು ಹಾಗೂ ಛಾವಣಿಯನ್ನು ನಿರ್ಮಿಸಲಾಗಿದೆ. ಆಂಜನೇಯ ದೇವಾಲಯದ ಹೊರ ಆವರಣವನ್ನು ವಿಸ್ತರಿಸಲಾಗಿದೆ. ಅಲ್ಲದೆ ದೇವಾಲಯ ಆವರಣದಲ್ಲಿ ನೂತನವಾಗಿ ನವಗ್ರಹಗಳನ್ನು ಪ್ರತಿಷ್ಠಾಪಿಸಲು ಕಾರ್ಯೋನ್ಮುಖವಾಗಿರುವುದಾಗಿ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ತಿಳಿಸಿದ್ದಾರೆ.
ಈಗಾಗಲೇ ನವಗ್ರಹ ಮೂರ್ತಿಗಳನ್ನು ಶಿಲ್ಪಿಗಳಿಂದ ನಿರ್ಮಿಸಿ ತರಿಸಲಾಗಿದ್ದು. ಏಪ್ರಿಲ್, 25 ರಂದು ಕ್ಷೇತ್ರ ತಂತ್ರಿಯವರಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರ‍್ರಿಯವರು ಆಂಜನೇಯ ದೇಗುಲದ ಆವರಣದಲ್ಲಿ ಪ್ರತಿಷ್ಠಾಪನಾ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಿದ್ದಾರೆ ಎಂದರು.
ಈ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ಒಟ್ಟು ರೂ. 5 ಕೋಟಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು ಈ ಪೈಕಿ ಸರಕಾರದ ಮೂಲಕ ರೂ. 1 ಕೋಟಿಯನ್ನು ಶಾಸಕರು ಒದಗಿಸುವ ಭರವಸೆ ನೀಡಿದ್ದಾರೆ.
ಇನ್ನುಳಿದಂತೆ ಕೈಗೊಳ್ಳಬೇಕಾದ ಬೃಹತ್ ಯೋಜನೆಗಳಿಗಾಗಿ ಕೊಡಗಿನ ಉದಾರ ದಾನಿಗಳಿಂದಲೂ ಹಣ ಸಂಗ್ರಹಿಸಲು ಸಹಕಾರ ಕೋರಲಾಗಿದೆ.
ಈ ಯೋಜನೆಗಳೆಂದರೆ, ದೇವಾಲಯಗಳ ಮುಂಭಾಗ ಮಹಾದ್ವಾರ ನಿರ್ಮಾಣ, ಓಂಕಾರೇಶ್ವರ ದೇವಾಲಯ ಒಳ ಆವರಣದಲ್ಲಿರುವ ಪೌಳಿಗಳ ದುರಸ್ತಿ, ಹೊರ ಆವರಣದಲ್ಲಿರುವ ಕಲ್ಯಾಣಿ ಕೆರೆ ದುರಸ್ತಿ ಮತ್ತು ನೂತನ ಗ್ರಿಲ್ ಅಳವಡಿಕೆ, ದೇವಾಲಯ ಹೊರ ಆವರಣದ ಸುತ್ತಲೂ ಕಲ್ಲಿನ ಹಾಸು ಅಳವಡಿಕೆ, ಓಂಕಾರ ಸದನದ ದ್ವ್ವಿತೀಯ ಅಂತಸ್ತು ನಿರ್ಮಾಣ, ಸಿಬ್ಬಂದಿಗಳಿಗೆ ವಾಸಿಸಲು ಅತ್ಯಗತ್ಯವಾದ ವಸತಿ ಗೃಹ ನಿರ್ಮಾಣ ಮೊದಲಾದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.


ಅಲ್ಲದೆ, ಮಡಿಕೇರಿಯ ಐತಿಹಾಸಿಕ ಕೋಟೆ ಗಣಪತಿ ದೇವಾಲಯಕ್ಕೆ ನೂತನ ಮೇಲ್ಛಾವಣಿ ನಿರ್ಮಿಸಲು ಹಾಗೂ ನೆಲ ಭಾಗಕ್ಕೆ ಇಂಟರ್ ಲಾಕ್ ಅಳವಡಿಸಲು ಯೋಜಿಸಿದ್ದು, ಈ ದೇವಾಲಯದ ಪರಿಧಿಯು ವಾಸ್ತು ಪುರಾತತ್ವ ಇಲಾಖೆಗೆ ಒಳಪಡುವುದರಿಂದ ಕಾರ್ಯ ನಿರ್ವಹಿಸಲು ಇಲಾಖೆಯಿಂದ ಅನುಮತಿ ಕೋರಲಾಗಿದೆ ಎಂದು ಅಧ್ಯಕ್ಷ ಚುಮ್ಮಿ ದೇವಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.