Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ : ಯಶಸ್ಸಿಗೆ ಕೈ ಜೋಡಿಸಲು ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ : ಯಶಸ್ಸಿಗೆ ಕೈ ಜೋಡಿಸಲು ಮನವಿ

ಏಪ್ರಿಲ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement


ಮಡಿಕೇರಿ ಏ.1 NEWS DESK : ಬ್ಯಾರಿ ಅಕಾಡಮಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಒಂದು ಸಂಸ್ಥೆಗೆ ಸೀಮಿತ ಅಲ್ಲ ಬದಲಾಗಿ
ಬ್ಯಾರಿ ಭಾಷೆ, ಕಲೆ ಸಂಸ್ಕ್ರತಿಯನ್ನು ಬಿಂಬಿಸುವ ವೇದಿಕೆಯಾಗಿದೆ. ಸಾಹಿತ್ಯ , ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿ ಕೊಂಡವರನ್ನು ಸಮ್ಮೇಳನದಲ್ಲಿ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ, ಸಮ್ಮೇಳನದ ಭಾಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಬ್ಯಾರಿ ಸಮುದಾಯದ ಅಭಿವೃದ್ಧಿಗಾಗಿ ಎಲ್ಲರೂ ಸಹಕರಿಸಬೇಕೆಂದು ಹಿರಿಯ ಸಾಹಿತಿ ಬಿ.ಎ.ಶಂಷುದ್ದೀನ್ ಕರೆ ನೀಡಿದರು.  ಏ.28 ರಂದು ಮಡಿಕೇರಿಯಲ್ಲಿ ಕರ್ನಾಟಕ ಬ್ಯಾರಿ ಅಕಾಡಮಿ ಹಾಗೂ ಕೊಡಗು ವೆಲ್ಫೇರ್ ಟ್ರಸ್ಟ್ ವತಿಯಿಂದ ನಡೆಸಲಾಗುವ ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನದ ಭಾಗವಾಗಿ ಮಡಿಕೇರಿಯ ಕಮ್ಯುನಿಟಿ ಸಭಾಂಗಣದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಾಮಾಜಿಕ ಕಾರ್ಯಕರ್ತರ ಸಭೆಯಲ್ಲಿ  ಅವರು ಮಾತನಾಡಿದರು. ಮಹಿಳೆಯರು, ಮಕ್ಕಳು ಹಾಗೂ ಯುವಕರಿಗೆ ವಿವಿಧ ಸ್ಪರ್ದೆಗಳು, ಸಮ್ಮೇಳನದಂದು ಕವಿಗೋಷ್ಟಿ, ವಿಚಾರ ಸಂಕೀರಣ, ವಿಚಾರ ಗೋಷ್ಠಿ ಕಾರ್ಯಕ್ರಮಗಳು ನಡೆಯಲಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ನಗರಸಭಾ ಸದಸ್ಯ ಹಾಗೂ ಬದ್ರಿಯಾ ಮಸೀದಿಯ ಅಧ್ಯಕ್ಷರಾದ ಅಮೀನ್ ಮೊಹ್ಸಿನ್ ಮಾತಾನಾಡಿ,
ಬ್ಯಾರಿ ಸಮುದಾಯವು ರಾಜಕೀಯ, ಸಾಮಾಜಿಕ ಶೈಕ್ಷಣಿಕವಾಗಿ ಮುಂದೆ ಬರಬೇಕು. ಸಮುದಾಯದಲ್ಲಿ ಪ್ರತಿಭಾವಂತ ನಾಯಕರುಗಳಿದ್ದರೂ ಸರ್ಕಾರದ ನಿಗಮ ಮಂಡಲಗಳಲ್ಲಿ ಸ್ಥಾನ ಗಳಿಸಲು ಸಾಧ್ಯವಾಗದಿರುವುದು ಬಹು ದೊಡ್ಡ ದುರಂತ ಆದ್ದರಿಂದ ಬ್ಯಾರಿ ಸಮುದಾಯ ಒಗ್ಗಟ್ಟನ್ನು ಪ್ರದರ್ಶಿಸಿಸುವುದರೊಂದಿಗೆ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಜಿಲ್ಲೆಯಲ್ಲಿ ನಡೆಯಲಿರುವ ಬ್ಯಾರಿ ಸಮ್ಮೇಳನವನ್ನು ಯಶಸ್ಸುಗೊಳಿಸಬೇಕು ಎಂದರು. ನಗರಸಭಾ ಸದಸ್ಯರಾದ ಬಶೀರ್ ಅಹಮದ್, ಮನ್ಸೂರ್ ಅಹಮದ್ ಮಾತನಾಡಿ ಸಮ್ಮೇಳನದ ಯಶಸ್ವಿಗೆ ಕೈ ಜೋಡಿಸಲು ಮನವಿ ಮಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕೊಡಗು ಬ್ಯಾರೀಸ್ ವೆಲ್ಪೇರ್ ಟ್ರಸ್ಟ್ ಅಧ್ಯಕ್ಷ ಎಂ.ಬಿ.ನಾಸಿರ್ ಅಹಮದ್ ಮಾತನಾಡಿ, ಬ್ಯಾರಿ ಸಮುದಾಯವು ಮಂಗಳೂರು, ಚಿಕ್ಜಮಗಳೂರು, ಬೆಂಗಳೂರು ಸೇರಿದಂತೆ ಅಂತರಾಷ್ಟ್ರಿಯ ಮಟ್ಟದಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿದೆ. ಅದೇ ರೀತಿ ನಮ್ಮ ಕೊಡಗಿನ ಮೂಲೆ ಮೂಲೆಗಳಲ್ಲಿ ಬ್ಯಾರಿ ಸಮುದಾಯ ಜೀವನ ಸಾಗಿಸುತ್ತಿದೆ. ಕೂಲಿ ಕಾರ್ಮಿಕರಿಂದ ಹಿಡಿದು ಉನ್ನತ ಅಧಿಕಾರಿಗಳಾಗಿ ಕೆಲಸ ಮಾಡುವವರು ಇದ್ದಾರೆ. ಆದರೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದೆ ಇರುವ ಬ್ಯಾರಿ ಸಮುದಾಯವನ್ನು ಮುನ್ನಲೆಗೆ ತರುವ ಕಾರ್ಯ ಆಗಬೇಕಿದೆ ಮುಖ್ಯವಾಗಿ ಕೊಡಗು ಜಿಲ್ಲೆಯಲ್ಲಿ ಬ್ಯಾರಿ ಸಮುದಾಯ ಭವನಕ್ಕಾಗಿ ಸರಕಾರದ ಗಮನ ಸೆಳೆಯಬೇಕಾಗಿದೆ ಇದಕ್ಕಾಗಿ ಏ.28ರಂದು ಮಡಿಕೇರಿಯಲ್ಲಿ ನಡೆಯಲಿರುವ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ನೇಳನಕ್ಕೆ ಸರ್ವರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ನಿಕಟ ಪೂರ್ವ ಸದಸ್ಯ ಎಸ್.ಐ.ಮುನೀರ್ ಸ್ವಾಗತಿಸಿ, ನಿರೂಪಿಸಿದರು. ಉಪಾದ್ಯಕ್ಷ ಎಂ.ಎ.ನಾಸಿರ್ ವಂದಿಸಿದರು. ಸಭೆಯಲ್ಲಿ ನಗರಸಭಾ ಸದಸ್ಯ ಎಂ.ಎ.ಮುಸ್ತಫ, ನಾಮ ನಿರ್ದೇಶಿತ ನಗರಸಭಾ ಸದಸ್ಯಯಾಕೂಬ್ ,ಬ್ಯಾರಿ ಅಕಾಡಮಿ ಮಾಜಿ ಹಿರಿಯ ಸದಸ್ಯ ಪತ್ರಕರ್ತ ಅಬ್ದುಲ್ಲಾ ಶರೀಫ್  ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.  :: ಉಪ ಸಮಿತಿಗಳ ರಚನೆ ::  ಸ್ವಾಗತ ಸಮಿತಿ, ಪ್ರಚಾರ ಸಮಿತಿ, ಕ್ರೀಡಾ ಸಮಿತಿ, ಹಣಕಾಸು ಸಮಿತಿ, ಆಹಾರ ಸಮಿತಿ, ವೇದಿಕೆ ಸಮಿತಿ ಸಾಂಸ್ಕೃತಿಕ ಸಮಿತಿ ಹಾಗೂ ಸ್ವಯಂ ಸೇವಾ ಸಮಿತಿಗಳನ್ನು ರಚಿಸಲಾಯಿತು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.