Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಕಾರ್ಯಾಗಾರ : ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಅಗತ್ಯ : ನಿತಿನ್ ಚಕ್ಕಿ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಕಾರ್ಯಾಗಾರ : ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಅಗತ್ಯ : ನಿತಿನ್ ಚಕ್ಕಿ ಸಲಹೆ

ಏಪ್ರಿಲ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಏ.2 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಭಾಂಗಣದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗ ಮತ್ತು ತುರ್ತು ಚಿಕಿತ್ಸಾ ವಿಭಾಗದ ಸಹಯೋಗದಲ್ಲಿ “ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ” ಕಾರ್ಯಕ್ರಮವು ಗುರುವಾರ ನಡೆಯಿತು.
ಉಪ ವಿಭಾಗಧಿಕಾರಿಯಾದ ನಿತಿನ್ ಚಕ್ಕಿ, ಅವರು ಮಾತನಾಡಿ ಸುಟ್ಟ ಗಾಯಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಚಿಕಿತ್ಸೆ ನೀಡುವುದು, ಸೋಂಕು ನಿಯಂತ್ರಣದ ಮಹತ್ವವನ್ನು ಒತ್ತಿ ಹೇಳಿದರು. ಆರಂಭಿಕ ಚಿಕಿತ್ಸೆಯಿಂದ ಪುನರ್ವಸತಿ ವರೆಗೆ ವ್ಯವಸ್ಥಿತ ರೀತಿಯ ನಿರ್ವಹಣೆ ಬಗ್ಗೆ ಚರ್ಚೆ ಪ್ರಾಯೋಗಿಕವಾಗಿ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು. ಮಿಸ್ ಟೀನ್ ಯೂನಿವರ್ಸ್ ಇಂಡಿಯಾ 2024 ಕರಿಸ್ಸಾ ಬೋಪಣ್ಣ ಅವರು ತಮ್ಮ ಫ್ಯಾಷನ್ ಡಿಸೈನಿಂಗ್ ವಿದ್ಯಾಭ್ಯಾಸದ ಅನುಭವ ಹಂಚಿಕೊoಡು, ವೈದ್ಯಕೀಯ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು. ಜೀವನದಲ್ಲಿ ಮನಸ್ಸು ಕುಗ್ಗಿದಾಗ ವೈದ್ಯಕೀಯ ಕ್ಷೇತ್ರವನ್ನು ಆಯ್ಕೆ ಮಾಡಿದ ಉದ್ದೇಶವನ್ನು ನೆನಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಟ್ರಸ್ಟ್ವೆಲ್ ಆಸ್ಪತ್ರೆಯ ಓರೋ-ಫೇಷಿಯಲ್ ಮತ್ತು ಪ್ಲಾಸ್ಟಿಕ್ ಸರ್ಜರಿ ಸಲಹೆಗಾರರಾದ ಡಾ. ವಿಶ್ವಾಸ್ ವಿಜಯದೇವ್ ಅವರು “ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆಯ ಒಳನೋಟಗಳು” ವಿಷಯದ ಕುರಿತು ಉಪನ್ಯಾಸ ನೀಡಿದರು. ಎರಡನೇ ಅಧಿವೇಶನದಲ್ಲಿ ಈ ಸಂಸ್ಥೆಯ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್ ಎಸ್ ಅವರು “ಸುಟ್ಟ ಗಾಯಗಳ ಪ್ರಾಥಮಿಕ ಮೌಲ್ಯಮಾಪನ ಮತ್ತು ತುರ್ತು ನಿರ್ವಹಣೆ” ಕುರಿತು ಮಾತನಾಡಿದರು. ಟ್ರಸ್ಟ್ವೆಲ್ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಸಲಹೆಗಾರರಾದ ಡಾ.ನಿಕಿತಾ ರೋಲೆಕರ್ ಅವರು “ಸುಟ್ಟ ಗಾಯಗಳ ಗಾಯ ನಿರ್ವಹಣೆ, ದಹನಾನಂತರ ಉಂಟಾಗುವ ಕಾಂಟ್ರಾಕ್ಚರ್‌ಗಳ ತಡೆಗಟ್ಟುವಿಕೆ ಹಾಗೂ ನಿರ್ವಹಣೆ” ಕುರಿತು ವಿವರಿಸಿದರು. ಕೆವಿಜಿ ವೈದ್ಯಕೀಯ ಕಾಲೇಜು, ಸುಳ್ಯ ಅವರ ಶಿಶು ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಗೌರವ್ ಅವರು “ಮಕ್ಕಳ ಸುಟ್ಟ ಗಾಯಗಳ ಆರೈಕೆ” ಕುರಿತು ಉಪನ್ಯಾಸ ನೀಡಿದರು.ಸಿದ್ಧಾರ್ಥ ವೈದ್ಯಕೀಯ ಕಾಲೇಜು ತುಮಕೂರು ಶಿಶು ಶಸ್ತ್ರಚಿಕಿತ್ಸಾ ವಿಭಾಗದ ಡಾ.ನಿಜಗಲ್ ಮುತ್ತನ್ ಜೆ.ಬಿ. ಅವರು “ ಸುಟ್ಟ ಗಾಯಗೊಂಡ ಮಕ್ಕಳಿಗೆ ಶಸ್ತ್ರ ಚಿಕಿತ್ಸಾ ಆರೈಕೆ” ಕುರಿತು ಮಾತನಾಡಿದರು.ನಾರಾಯಣ ಆಸ್ಪತ್ರೆಯ ಪ್ಲಾಸ್ಟಿಕ್ ಮತ್ತು ರಿಕನ್‌ಸ್ಟ್ರಕ್ಟಿವ್ ಸರ್ಜರಿ ಸಲಹೆಗಾರರಾದ ಡಾ.ಸುನಿಲ್ ಕುಮಾರ್ ಎಂ ಅವರು “ಸುಟ್ಟ ಗಾಯಗಳ ವಾರ್ಡ್ ಮತ್ತು ಸುಟ್ಟ ಗಾಯಗಳ ಕೇಂದ್ರ– ಸಂಸ್ಥೆಯ ಗುಣಮಟ್ಟದ ಸೂಚಕ” ವಿಷಯದ ಕುರಿತು ವಿವರಿಸಿದರು. ನಂತರ ಕೊ.ವೈ.ವಿ.ಸಂಸ್ಥೆ ಮಡಿಕೇರಿಯಲ್ಲಿ ಆಂಕಾಲಜಿ ವಿಭಾಗದ ಉದ್ಘಾಟನೆಯು ಡಾ.ದಿವಿಯಾ ಕರಿಯಪ್ಪ ಹಾಗೂ ಡಾ. ಮುಖೇಶ್ ಅವರಿಂದ ನೆರವೇರಿತು.


ಮುಂದಿನ ಅಧಿವೇಶನದಲ್ಲಿ ಟ್ರಸ್ಟ್ವೆಲ್ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಡಾ.ರವಿಕುಮಾರ್ ಅವರು “ರೋಬೋಟಿಕ್ ಆಂಕೋ-ಯೂರಾಲಜಿ” ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಡೀನ್ ಮತ್ತು ನಿರ್ದೇಶಕರಾದ ಡಾ.ಲೋಕೇಶ್ ಎ.ಜೆ. ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುAಡಯ್ಯ, ಸಮುದಾಯ ವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್, ಶಸ್ತ್ರ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ.ಪ್ರವೀಣ್ ಕುಮಾರ್, ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ.ಮೋಹನ್ ಅಪ್ಪಾಜಿ, ಸ್ಥಾನೀಯ ವೈದ್ಯಾಧಿಕಾರಿಗಳಾದ ಡಾ.ಅಭಿನಂದನ್, ಸ್ಥಾನೀಯ ವೈದ್ಯಾಧಿಕಾರಿಗಳಾದ ಡಾ.ಧನಂಜಯ ಕುಮಾರ್ ಇತರೆ ಜಿಲ್ಲೆಗಳ ಆಸ್ಪತ್ರೆಗಳ ವೈದ್ಯರು ಸ್ನಾತಕೋತ್ತರ ವೈದ್ಯರು, ಇಂಟರ್ನ್ಸ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.