Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
  • *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
  • *ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
  • *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಛಾಯಾಗ್ರಹಣದ ದರ ಶೇ.10ರಷ್ಟು ಹೆಚ್ಚಳ : ಡಿ.ಸಿ.ರವೀಂದ್ರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಛಾಯಾಗ್ರಹಣದ ದರ ಶೇ.10ರಷ್ಟು ಹೆಚ್ಚಳ : ಡಿ.ಸಿ.ರವೀಂದ್ರ*

ಏಪ್ರಿಲ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.2 NEWS DESK : ಛಾಯಾಗ್ರಹಣಕ್ಕೆ ಸಂಬಂಧಿಸಿದ ಉಪಕರಣಗಳ ಬೆಲೆ ದುಪ್ಪಟ್ಟಾಗಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳನ್ನು ಒಳಗೊಂಡ ದಕ್ಷಿಣ ಕೊಡಗಿನ ವೃತ್ತಿನಿರತ ಛಾಯಾಗ್ರಾಹಕರಿಗೆ ಅನ್ವಯವಾಗುವಂತೆ ಛಾಯಾಗ್ರಹಣದ ದರವನ್ನು ಶೇ.10ರಷ್ಟು ಹೆಚ್ಚಿಸಿರುವುದಾಗಿ ದಕ್ಷಿಣ ಕೊಡಗು ಛಾಯಾಚಿತ್ರಗಾರರ ಸಂಘದ ಅಧ್ಯಕ್ಷರಾದ ಡಿ.ಸಿ.ರವೀಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಪ್ರಸ್ತುತ ಪ್ರೊಫೇಷನಲ್ ಕ್ಯಾಮರಾಗಳ ಬೆಲೆ ಗಗನಕ್ಕೇರಿದ್ದರೆ, ವೃತ್ತಿಗೆ ಸಂಬಂಧಿಸಿದ ಪರಿಕರಗಳಾದ ಪೆನ್ ಡ್ರೈವ್, ಹಾರ್ಡ್ ಡಿಸ್ಕ್, ಮೆಮೋರಿ ಕಾರ್ಡ್, ಫೋಟೋ ಪ್ರಿಂಟ್, ಆಲ್ಬಮ್ ಮೊದಲಾದವುಗಳ ದರ ದುಪ್ಪಟ್ಟಾಗಿದೆ. ಇದರಿಂದ ಈಗಿನ ದರದಲ್ಲಿ ಸ್ಟುಡಿಯೋಗಳನ್ನು ನಡೆಸುವುದು ಪ್ರಯಾಸಕರವಾಗಿರುವುದರಿಂದ ದರ ಹೆಚ್ಚಳ ಮಾಡಿರುವುದಾಗಿ ಹೇಳಿದರು. ದಕ್ಷಿಣ ಕೊಡಗು ವ್ಯಾಪ್ತಿಯಲ್ಲಿ 50 ಕ್ಕೂ ಹೆಚ್ಚಿನ ಸ್ಟುಡಿಯೋಗಳಿದ್ದು, ಇದನ್ನು ನಂಬಿ ಬದುಕು ಕಟ್ಟಿಕೊಂಡಿರುವ ಕುಟುಂಬಗಳ ಸಂಖ್ಯೆ 150 ರಿಂದ 180ರಷ್ಟ್ಟಿದೆ. ಇಂದಿನ ದರ ಹೆಚ್ಚಳದ ಅವಧಿಯಲ್ಲಿ ಕುಟುಂಬ ನಿರ್ವಹಣೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗದಂತೆ ದರವನ್ನು ಹೆಚ್ಚಿಸಲಾಗಿದೆಯೆಂದರು. ಯಾವುದಕ್ಕೆ ಎಷ್ಟು ದರ ಹೆಚ್ಚಳ?- ಇನ್ನು ಮುಂದೆ ಪಾಸ್ ಪೋರ್ಟ್ ಸೈಜಿನ ನಾಲ್ಕು ಫೋಟೋಗಳಿಗೆ ಹಿಂದೆ ಇದ್ದ 80 ರೂ.ಗಳನ್ನು 100ರೂ.ಗಳಿಗೆ ಹೆಚ್ಚಿಸಲಾಗಿದೆಯಾದರೆ, 8 ಕಾಪಿಗಳಿಗೆ 120 ರೂ.ಗಳಿಂದ 150ಕ್ಕೆ ಹೆಚ್ಚಿಸಲಾಗಿದೆ. ವಿವಾಹ ಸಮಾರಂಭಗಳ ಎರಡು ದಿನದ ಫೋಟೋ(300 ಫೊಟೋ) ಮತ್ತು ವಿಡಿಯೋ ಮಾಡುವ ದರವನ್ನು 35 ಸಾವಿರಗಳಿಂದ 45 ಸಾವಿರ ರೂ.ಗಳಿಗೆ. ಒಂದು ದಿನದ ಸಮಾರಂಭದ ಫೋಟೋ(300 ಫೋಟೋ) ಮತ್ತು ವಿಡಿಯೋಕ್ಕೆ 40 ಸಾವಿರ ರೂ.ಗಳನ್ನು ನಿಗದಿ ಪಡಿಸಲಾಗಿದೆ. ಬದಲಾದ ದರ ಪಟ್ಟಿಯನ್ನು ದಕ್ಷಿಣ ಕೊಡಗಿನ ಎಲ್ಲಾ ಸ್ಟುಡಿಯೋಗಳಲ್ಲಿ ಗ್ರ್ರಾಹಕರಿಗೆ ಅನುಕೂಲವಾಗುವಂತೆ ಪ್ರದರ್ಶಿಸಲಾಗುತ್ತದೆಂದು ಅವರು ತಿಳಿಸಿದರು. ಮೊಬೈಲ್ ಸಂಕಷ್ಟ-ಪ್ರಸ್ತುತ ದಿನಗಳಲ್ಲಿ ಮೊಬೈಲ್‍ಗಳಲ್ಲಿ ಫೋಟೋಗಳನ್ನು ತೆಗೆಯುತ್ತಿರುವುದರಿಂದ ಮತ್ತು ಸರ್ಕಾರದ ಕೆಲಸಗಳು ಆನ್‍ಲೈನ್‍ನಲ್ಲಿ ಹೆಚ್ಚಾಗಿ ನಡೆಯುತ್ತಿರುವುದಿಂದ ಛಾಯಾಚಿತ್ರ ಗ್ರಾಹಕರು ಸಾಕಷ್ಟು ಕೆಲಸಗಳನ್ನು ಕಳೆದುಕೊಂಡಿದ್ದು, ತೊಂದರೆಗೆ ಸಿಲುಕಿದ್ದಾರೆ. ಈ ಎಲ್ಲಾ ಕಾರಣಗಳಿಂದ ಕಳೆದ ಹತ್ತು ವರ್ಷಗಳ ಬಳಿಕವಷ್ಟೆ ಛಾಯಾಗ್ರಹಣದ ದರಗಳನ್ನು ಹೆಚ್ಚಿಸಲಾಗಿದೆಯೆಂದು ಹೇಳಿದರು. ಗ್ರಾಹಕರೆ ಜಾಗೃತರಾಗಿ. ಇತ್ತೀಚಿನ ದಿನಗಳಲ್ಲಿ ಗ್ರಾಹಕರು ಆನ್‍ಲೈನ್, ವೆಬ್ ಸೈಟ್‍ಗಳ ಮೂಲಕ ತಮಗೆ ಪರಿಚಯವಿಲ್ಲದವರಿಗೆ ಕಾರ್ಯಕ್ರಮ, ಸಮಾರಂಭಗಳ ಛಾಯಾಗ್ರಹಣಕ್ಕೆ ಅವಕಾಶ ನೀಡುತ್ತಿದ್ದು, ಸಾಕಷ್ಟು ಬಾರಿ ನಿಗದಿತ ಅವಧಿಯಲ್ಲಿ ಫೋಟೋಗಳು, ವಿಡಿಯೋಗಳು ಗ್ರಾಹಕರಿಗೆ ದೊರಕದೆ ತೊಂದರೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ದಕ್ಷಿಣ ಕೊಡಗಿನ ಭಾಗದ ಗ್ರಾಹಕರು “ದಕ್ಷಿಣ ಕೊಡಗು ಛಾಯಾಗ್ರಾಹಕರ ಸಂಘ”ದ ಗುರುತಿನ ಚೀಟಿ ಹೊಂದಿರುವುದನ್ನು ಮೊದಲೆ ಖಾತರಿ ಪಡಿಸಿಕೊಂಡು ಛಾಯಾಗ್ರಹಣಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು. ನಗರದಲ್ಲಿ ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಪಿ.ಜೆ.ಶರತ್, ಕಾರ್ಯದರ್ಶಿ ಹೆಚ್.ವಿ.ರಾಮದಾಸ್, ಮಾಜಿ ಅಧ್ಯಕ್ಷ ಕೆ.ಸುರೇಶ್ ಬಾಬು, ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ.ದೀಪಕ್ ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಸೆ.16 NEWS DESK : ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದಗೌರಿಗಣೇಶೋತ್ಸವದ ಅಂಗವಾಗಿ…

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.