Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪರಿಸರಕ್ಕೆ ವಿರೋಧವಾಗಿ ನಡೆದುಕೊಂಡರೆ ಪ್ರಾಣಿ ಸಂಕುಲದ ಅವನತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪರಿಸರಕ್ಕೆ ವಿರೋಧವಾಗಿ ನಡೆದುಕೊಂಡರೆ ಪ್ರಾಣಿ ಸಂಕುಲದ ಅವನತಿ

ಏಪ್ರಿಲ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ, NEWS DESK  ಏ.03: ಪ್ರಕೃತಿ ಪರಿಸರಕ್ಕೆ ವಿರೋಧವಾಗಿ ವರ್ತಿಸಿದಲ್ಲಿ ಪ್ರಾಣಿ ಸಂಕುಲದ ಅವನತಿಗೆ ಆಹ್ವಾನ ನೀಡಿದಂತಾಗುತ್ತದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಮಾಮಿ ಕಾವೇರಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಡೆದ 184ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.
ನಾಗಾಲೋಟದ ಅಭಿವೃದ್ಧಿ ನಡುವೆ ಪ್ರಕೃತಿ ಉಳಿಸಿ ನಾಡನ್ನು ಬೆಳೆಸುವ ಕೆಲಸ ಆಗಬೇಕು. ಅಭಿವೃದ್ಧಿ ಜೊತೆಗೆ ಪ್ರಕೃತಿ ಸಂರಕ್ಷಣೆ ಮಾಡುವ ಕಾರ್ಯ ನಿರಂತರವಾಗಿರಬೇಕು. ಪ್ರತಿಯೊಬ್ಬರೂ ಜಲಮೂಲಗಳ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಸೋಮನಾಥನಂದ ಗಿರಿ ಸ್ವಾಮೀಜಿ ಮಾತನಾಡಿ ಪ್ರಸಕ್ತ ಕಾವೇರಿ ತನ್ನ ಒಡಲಲ್ಲಿ ಕಲುಷಿತವನ್ನು ಹೊತ್ತು ಹರಿಯುವ ದುಸ್ಥಿತಿಗೆ ಬರುವಂತಾಗಿದೆ. ಪ್ರತಿಯೊಬ್ಬರಲ್ಲಿ ನದಿ ಸಂರಕ್ಷಣೆಯ ಪರಿಜ್ಞಾನ ಇರಬೇಕು ಎಂದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಸುತ್ತೂರು ಕ್ಷೇತ್ರಗಳ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಿರಂತರವಾಗಿ ಹಲವು ವರ್ಷಗಳಿಂದ ಪ್ರತಿ ತಿಂಗಳು ಹುಣ್ಣಿಮೆಯ ದಿನದಂದು ಜೀವ ನದಿಗೆ ಆರತಿ ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ನದಿ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಆರತಿ ಬಳಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅವರು ಮಾತನಾಡಿ ಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮಗಳ ಮೂಲಕ ಸಮಾಜದ ಸಾವಿರಾರು ಅಸಹಾಯಕ ಮಹಿಳೆಯರ ಬದುಕು ಹಸನಾಗಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಮಾತೃಶ್ರೀ ಹೇಮಾವತಿ ಹೆಗ್ಗಡೆ ಅವರ ಹುಟ್ಟುಹಬ್ಬ ಅಂಗವಾಗಿ ರಾಜ್ಯದಾದ್ಯಂತ ಸುಮಾರು 26 ಸಾವಿರ ಅಸಹಾಯಕ ಮಹಿಳೆಯರಿಗೆ ಸಹಾಯ ಹಸ್ತ ನೀಡಲಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭ ಅವರ ಹುಟ್ಟು ಹಬ್ಬದ ಅಂಗವಾಗಿ ಕುಶಾಲನಗರದಲ್ಲಿ ಯೋಜನೆಯ ಕಾರ್ಯಕರ್ತರು ಮತ್ತು ಯೋಜನಾ ಕಚೇರಿಯ ಸಿಬ್ಬಂದಿಗಳು, ಶೌರ್ಯ ತಂಡದ ಸದಸ್ಯರುಗಳು ಸೇರಿ ಕಾವೇರಿ ನದಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಹೇಳಿದರು.
ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಅಧ್ಯಕ್ಷರಾದ ಕೆ ಎಸ್ ಮೂರ್ತಿ ಅವರು ಯಾವುದೇ ಸಂದರ್ಭ ಜಲಮೂಲಗಳನ್ನು ಕಲುಷಿತಗೊಳಿಸಿದಂತೆ ಸಲಹೆ ನೀಡಿದರು.
ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಆರತಿ ಕಾರ್ಯಕ್ರಮದ ಮಹತ್ವದ ಬಗ್ಗೆ ಮಾಹಿತಿ ನೀಡಿ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿದರು.


ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ ಎನ್ ಚಂದ್ರಮೋಹನ್, ಉದ್ಯಮಿ ಎಸ್ ಕೆ ಸತೀಶ್, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ, ಸೌಮ್ಯ ಭಟ್, ಕರುಂಬಯ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕರಾದ ನಾಗರಾಜ್, ಒಕ್ಕೂಟದ ಅಧ್ಯಕ್ಷರಾದ ಪಾರ್ವತಿ, ಸೇವಾ ಪ್ರತಿನಿಧಿ ಜಯಲಕ್ಷ್ಮಿ, ಡಾಟಿ, ಶೌರ್ಯ ತಂಡದ ಗಿರೀಶ್, ಲಲಿತಾ ಶಿವಕುಮಾರ್ ಮತ್ತು ಯೋಜನೆ ಕಚೇರಿ ಸಿಬ್ಬಂದಿಗಳು ಮತ್ತು ಯೋಜನೆಯ ಕಾರ್ಯಕರ್ತರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.