ಶನಿವಾರಸಂತೆ, NEWS DESK ಏ.03:- ಮಹಿಳಾ ದಿನಾಚರಣೆ ಹಾಗೂ ಶಿವಕುಮಾರ ಸ್ವಾಮೀಜಿ ಜಯಂತಿ ಅಂಗವಾಗಿ ಪಟ್ಟಣದಲ್ಲಿ ವಿಜೃಂಭಣೆಯ ಮೆರವಣಿಗೆ ನಡೆಯಿತು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಕ್ಕಮಹಾದೇವಿ ಜಯಂತಿ,ಶಿವಕುಮಾರ ಸ್ವಾಮೀಜಿ ಜಯಂತಿ ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗುಡುಗಳಲೆ ದೇವಾಲಯದ ಬಳಿಯಿಂದ ಪೂರ್ಣಕುಂಭ,ವೀರಗಾಸೆ,ಚಂಡೆ ವಾದ್ಯದೊಂದಿಗೆ ಶಿವಕುಮಾರ ಸ್ವಾಮೀಜಿ,ಅಕ್ಕಮಹಾದೇವಿಯವರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ಮೆರವಣಿಗೆಯಲ್ಲಿ ಉದೂರು ರವಿಯವರ ವೀರಗಾಸೆ ವಿಶೇಷವಾಗಿ ಗಮನ ಸೆಳೆಯಿತು.
ನಂತರ ನಡೆದ ಕಾರ್ಯಕ್ರಮದ ಸಾನಿಧ್ಯವನ್ನು ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ , ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ,ಶಿಡಿಗಳಲೆ ಮಠದ ಇಮ್ಮಡಿಶಿವಲಿಂಗ ಸ್ವಾಮೀಜಿ ವಹಿಸಿದ್ದರು, ಮಹಿಳಾ ಘಟದ ಅಧ್ಯಕ್ಷೆ ದೀಪಿಕಾ ಕರುಣಾಕರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ನಿರ್ದೇಶಕಿ ಅನುಚಂದ್ರಶೇಖರ್,ಜಿಲ್ಲಾ ಉಪಾಧ್ಯಕ್ಷ ಸುರೇಶ್,ಪ್ರಮುಖರುಗಳಾದ ಸುಮಾಸುದೀಪ್, ವೀರೇಂದ್ರ,ರಾಜೇಶ್,ಹಾಗೂ ಮುಂತಾದವರು ಉಪಸ್ತಿತರಿದ್ದರು.







