Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹುದಗೂರಿನಲ್ಲಿ ಅರಣ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೌಶಲ್ಯ ತರಬೇತಿ; ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ: ಟಿ.ಜಿ.ಪ್ರೇಮಕುಮಾರ್*:
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹುದಗೂರಿನಲ್ಲಿ ಅರಣ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೌಶಲ್ಯ ತರಬೇತಿ; ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ: ಟಿ.ಜಿ.ಪ್ರೇಮಕುಮಾರ್*:

ಏಪ್ರಿಲ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ, NEWS DESK ಏ.3: ರೈತರು ಕೃಷಿಯೊಂದಿಗೆ ಅರಣ್ಯ ಕೃಷಿಯನ್ನು ವೈಜ್ಞಾನಿಕವಾಗಿ ಮಾಡಿದರೆ ಕೃಷಿ ಕ್ಷೇತ್ರದಲ್ಲಿ ಆರ್ಥಿಕವಾಗಿ ಹೆಚ್ಚಿನ ಲಾಭ ಗಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಪರಿಸರ ಕಾರ್ಯಕ್ರಮಗಳ ಸಂಘಟಕ ಪರಿಸರ ಪ್ರೇಮಿ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ, ಸಾಮಾಜಿಕ ಅರಣ್ಯ ವಿಭಾಗ, ಮಡಿಕೇರಿ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಕೂಡಿಗೆ ಬಳಿಯ ಹುದುಗೂರು ಅರಣ್ಯ ಸಸ್ಯಕ್ಷೇತ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ ಏರ್ಪಡಿಸಿದ್ದ ಕೌಶಲ್ಯ ತರಬೇತಿ ಮತ್ತು ಅರಿವು ಹಾಗೂ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ಅರಣ್ಯದಿಂದ ಕೃಷಿ ಭೂಮಿಯ ಅಂತರ್ಜಲ ವೃದ್ಧಿ ಸಾಧ್ಯ. ಇಂದಿನ ಹವಾಮಾನ ವೈಪರೀತ್ಯ, ಅತಿವೃಷ್ಠಿ ಹಾಗೂ ಅಕಾಲಿಕ ಮಳೆಯಿಂದ ಒಂದು ಬೆಳೆ ಕೈಕೊಟ್ಟರೂ, ಅರಣ್ಯ ಕೃಷಿಯಿಂದ ಬರುವ ಮರಗಳ ಆದಾಯವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ.ಇದು ರೈತರ ಆದಾಯದ ವೈವಿಧ್ಯೀಕರಣಕ್ಕೆ ಹೆಚ್ಚಿನ ಲಾಭ ತರುತ್ತದೆ ಎಂದರು. ರೈತರು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಅರಣ್ಯ ಸಂರಕ್ಷಿಸಿ ಕೊಳ್ಳಬೇಕು.ಗ್ರಾಮೀಣ ಯುವಕರು ಮತ್ತು ರೈತರಿಗೆ ಲಭ್ಯವಿರುವ ತಮ್ಮ ಜಮೀನಿನಲ್ಲಿ ಅರಣ್ಯ ಕೃಷಿ ಮತ್ತು ಪಶುಸಂಗೋಪನೆ, ತೋಟಗಾರಿಕೆ ಸಂಬಂಧಿತ ವಲಯಗಳಲ್ಲಿ ತೊಡಗಿಸಿಕೊಂಡರೆ ಕೃಷಿಕ್ಷೇತ್ರದಲ್ಲಿ ಆರ್ಥಿಕ ಸಬಲೀಕರಣಗೊಳ್ಳಲು ಸಾಧ್ಯ ಎಂದರು. ರೈತರು ಹವಾಮಾನ-ಸೂಕ್ಷ್ಮ ಕೃಷಿ ಮತ್ತು ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯಂತಹ ನಾವೀನ್ಯತೆವುಳ್ಳ
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತೋಟಗಾರಿಕೆ, ಜೇನುಸಾಕಣೆ, ಹಣ್ಣು ಸಂರಕ್ಷಣೆ ಮತ್ತು ಅಣಬೆ ಉತ್ಪಾದನೆಯಲ್ಲಿ ತೊಡಗಿದರೆ ಹೆಚ್ಚಿನ ರೀತಿಯಲ್ಲಿ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಪ್ರೇಮಕುಮಾರ್ ತಿಳಿಸಿದರು.
ರೈತರು ಕೃಷಿಯಲ್ಲಿ ನಾಲ್ಕಾರು ಲಾಭದಾಯಕ ಮಿಶ್ರ ಬೆಳೆ ಬೆಳೆಯುವ ಮೂಲಕ ಹೆಚ್ಚಿನ ಲಾಭ ಗಳಿಸಬಹುದು. ಅರಣ್ಯ ಕೃಷಿ, ಮಿಶ್ರ ಬೇಸಾಯ ಪದ್ಧತಿ ಹಾಗೂ ಸಮಗ್ರ ಕೃಷಿಯಲ್ಲಿ ‌ಉತ್ತಮ ಲಾಭ ಗಳಿಸುತ್ತಿದೆ. ಇದರಲ್ಲೇ ಉತ್ತಮ‌ ಬದುಕು ರೂಪಿಸಿಕೊಳ್ಳಬಹುದು. ರೈತರಿಗೆ ಅರಣ್ಯ ಇಲಾಖೆಯ ವತಿಯಿಂದ ಸಿಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದ ಸಾಮಾಜಿಕ ಅರಣ್ಯ ವಲಯಾಧಿಕಾರಿ ಎಂ.ಗಣೇಶ್ , ರೈತರು ಅರಣ್ಯ ಕೃಷಿಗೆ ಹೆಚ್ಚಿನ ಒತ್ತು ನೀಡಿದರೆ ಸುಸ್ಥಿರ ಆದಾಯ ಗಳಿಸಲು ಸಾಧ್ಯ. ರೈತರು ಈ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿಭೂಮಿಯ ಮಣ್ಣಿನ ಫಲವತ್ತತೆ , ಅಂತರ್ಜಲ ವೃದ್ಧಿ ಮತ್ತು ಪರಿಸರ ಸಮತೋಲನವನ್ನು ಕಾಪಾಡಲು ಸಾಧ್ಯ ಎಂದು ತಿಳಿಸಿದರು.

ರೈತರು ಸಾಂಪ್ರದಾಯಿಕ ಕೃಷಿಯೊಂದಿಗೆ ಲಭ್ಯ ಇರುವ ಮ್ಮ ಜಮೀನಿನಲ್ಲಿ ತೇಗ, ಶ್ರೀಗಂಧ, ಬಿದಿರು ಮತ್ತು ಹೆಬ್ಬೇವುಗಳಂತಹ ವಾಣಿಜ್ಯ ಮರಗಳನ್ನು ಬೆಳೆಸುವುದರಿಂದ, ರೈತರು ಅನಿಶ್ಚಿತ ಬೆಳೆ ನಷ್ಟದಿಂದ ಪಾರಾಗಿ ದೀರ್ಘಕಾಲೀನ ಆರ್ಥಿಕ ಭದ್ರತೆ ಹೊಂದಲು ಸಾಧ್ಯ ಎಂದರು.
ಕೂಡಿಗೆ ಗ್ರಾಮ ಪಂಚಾಯ್ತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಿ.ಎಸ್. ಮಂಜುಳ ಮಾತನಾಡಿ, ರೈತರು ಅರಣ್ಯ, ಕೃಷಿ ಮತ್ತಿತರ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಕೃಷಿಕರಾಗಿ ಆರ್ಥಿಕವಾಗಿ ಸಬಲೀಕರಣ ಹೊಂದಬೇಕು ಎಂದರು.
ಹುದುಗೂರಿನ ಪ್ರಗತಿಪರ ರೈತ ಐಮುಡಿಯಂಡ ಗಣೇಶ್, ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಎಚ್.ಎಸ್.ರವಿ, ಡಿಆರ್ ಎಫ್ ಓ ಎನ್.ಬಿ.ಹರೀಶ್ ಕುಮಾರ್,ತಾಂತ್ರಿಕ ಸಲಹೆಗಾರರಾದ ಶೀತಲ್, ವನಪಾಲಕರಾದ ಸೋಮಶೇಖರ್, ಅನಿಲ್ ಸೇರಿದಂತೆ ಹುದಗೂರು ಮತ್ತು ಸುತ್ತಲಿನ ರೈತರು ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.