
ಮಡಿಕೇರಿ ಏ.3 NEWS DESK : ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಮೀನ್ಯಾರ್ ನಮ್ಮೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಮೊಮ್ಮಕ್ಕಡ ಕೂಟ ಮೇಳವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ ಉದ್ಘಾಟಿಸಿ ಶುಭಕೋರಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾವೇರಿ ಪೊಮ್ಮಕ್ಕಡ ಕೂಟವು ಹಲವಾರು ವರ್ಷಗಳಿಂದ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಇದು ಮಹಿಳಾ ಸಬಲೀಕರಣಕ್ಕೆ ಒಂದು ಉತ್ತಮ ನಿದರ್ಶನವಾಗಿದೆ. ಸಮಾಜ ಏಳಿಗೆ ಕಾಣಬೇಕೆಂದರೆ ಮಹಿಳೆಯರು ಇದರಲ್ಲಿ ಭಾಗಿಯಾಗಬೇಕು. ಉತ್ತಮ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಬಹುದೊಡ್ಡದಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ನಾಡಿಗೆ ಶ್ರೇಯಸ್ಸು ತನ್ನಿ ಎಂದು ಕರೆ ನೀಡಿದರು. ಈ ಸಂದರ್ಭ ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕೊಟ್ಟಂಗಡ ವಿಜು ದೇವಯ್ಯ, ಸನ್ಮಾನಿತರು ಬಿದ್ದಂಡ ನಾಣಿ ನಾಣಯ್ಯ, ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ,ಮಾಳೆಟೀರ ಅಜಿತ್ ಪೂವಣ್ಣ, ಚೀಫ್ ಎಲೆಟ್ರಿಕಲ್ ಆಫೀಸರ್ ತಿತೀರ ರೋಷನ್ ಅಪ್ಪಚ್ಚು, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷರಾದ ಕಾಳಿಮಾಡ ಮೋಟಯ್ಯ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಚಿರಿಯಪಂಡ ಸುರೇಶ್ ನಂಜಪ್ಪ, ಟಾಟು ಮೊಣ್ಣಪ್ಪ, ನೇರವಂಡ ಉಮೇಶ್, ಕೊಕ್ಕಂಡ ರೂಪಾ ಭೀಮಯ್ಯ, ಕೊಳೇರ ಭಾರತಿ, ಸುನಿತಾ, ಅನಿತಾ, ಕಾಡೇಮಾಡ ಕುಸುಮಾ, ಕಾಳಮಾಂಡ ಜಗತ್, ನಯನ, ದಿಲ್ಲು, ಕುಂಡಚ್ಚಿರ ಮಂಜು ದೇವಯ್ಯ, ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ನಿರ್ದೇಶಕರು, ಸರ್ವ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









