Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
  • *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
  • *ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
  • *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
  • *ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*

ಏಪ್ರಿಲ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಕುಶಾಲನಗರ, ಏ.3 NEWS DESK : ರೈತರು ಕೃಷಿಯೊಂದಿಗೆ ಅರಣ್ಯ ಕೃಷಿಯನ್ನು ವೈಜ್ಞಾನಿಕವಾಗಿ ಮಾಡಿದರೆ ಕೃಷಿ ಕ್ಷೇತ್ರದಲ್ಲಿ ಆರ್ಥಿಕವಾಗಿ ಹೆಚ್ಚಿನ ಲಾಭ ಗಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಪರಿಸರ ಕಾರ್ಯಕ್ರಮಗಳ ಸಂಘಟಕ ಪರಿಸರ ಪ್ರೇಮಿ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ, ಸಾಮಾಜಿಕ ಅರಣ್ಯ ವಿಭಾಗ, ಮಡಿಕೇರಿ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಕೂಡಿಗೆ ಬಳಿಯ ಹುದುಗೂರು ಅರಣ್ಯ ಸಸ್ಯಕ್ಷೇತ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ ಏರ್ಪಡಿಸಿದ್ದ ಕೌಶಲ್ಯ ತರಬೇತಿ ಮತ್ತು ಅರಿವು ಹಾಗೂ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೃಷಿ ಅರಣ್ಯದಿಂದ ಕೃಷಿ ಭೂಮಿಯ ಅಂತರ್ಜಲ ವೃದ್ಧಿ ಸಾಧ್ಯ. ಇಂದಿನ ಹವಾಮಾನ ವೈಪರೀತ್ಯ, ಅತಿವೃಷ್ಠಿ ಹಾಗೂ ಅಕಾಲಿಕ ಮಳೆಯಿಂದ ಒಂದು ಬೆಳೆ ಕೈಕೊಟ್ಟರೂ, ಅರಣ್ಯ ಕೃಷಿಯಿಂದ ಬರುವ ಮರಗಳ ಆದಾಯವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ.ಇದು ರೈತರ ಆದಾಯದ ವೈವಿಧ್ಯೀಕರಣಕ್ಕೆ ಹೆಚ್ಚಿನ ಲಾಭ ತರುತ್ತದೆ ಎಂದರು. ರೈತರು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಅರಣ್ಯ ಸಂರಕ್ಷಿಸಿ ಕೊಳ್ಳಬೇಕು.ಗ್ರಾಮೀಣ ಯುವಕರು ಮತ್ತು ರೈತರಿಗೆ ಲಭ್ಯವಿರುವ ತಮ್ಮ ಜಮೀನಿನಲ್ಲಿ ಅರಣ್ಯ ಕೃಷಿ ಮತ್ತು ಪಶುಸಂಗೋಪನೆ, ತೋಟಗಾರಿಕೆ
ಸಂಬಂಧಿತ ವಲಯಗಳಲ್ಲಿ ತೊಡಗಿಸಿಕೊಂಡರೆ ಕೃಷಿಕ್ಷೇತ್ರದಲ್ಲಿ ಆರ್ಥಿಕ ಸಬಲೀಕರಣಗೊಳ್ಳಲು ಸಾಧ್ಯ ಎಂದರು. ರೈತರು ಹವಾಮಾನ-ಸೂಕ್ಷ್ಮ ಕೃಷಿ ಮತ್ತು ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯಂತಹ ನಾವೀನ್ಯತೆವುಳ್ಳ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತೋಟಗಾರಿಕೆ, ಜೇನುಸಾಕಣೆ, ಹಣ್ಣು ಸಂರಕ್ಷಣೆ ಮತ್ತು ಅಣಬೆ ಉತ್ಪಾದನೆಯಲ್ಲಿ ತೊಡಗಿದರೆ ಹೆಚ್ಚಿನ ರೀತಿಯಲ್ಲಿ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಪ್ರೇಮಕುಮಾರ್ ತಿಳಿಸಿದರು. ರೈತರು ಕೃಷಿಯಲ್ಲಿ ನಾಲ್ಕಾರು ಲಾಭದಾಯಕ ಮಿಶ್ರ ಬೆಳೆ ಬೆಳೆಯುವ ಮೂಲಕ ಹೆಚ್ಚಿನ ಲಾಭ ಗಳಿಸಬಹುದು. ಅರಣ್ಯ ಕೃಷಿ, ಮಿಶ್ರ ಬೇಸಾಯ ಪದ್ಧತಿ ಹಾಗೂ ಸಮಗ್ರ ಕೃಷಿಯಲ್ಲಿ ‌ಉತ್ತಮ ಲಾಭ ಗಳಿಸುತ್ತಿದೆ. ಇದರಲ್ಲೇ ಉತ್ತಮ‌ ಬದುಕು ರೂಪಿಸಿಕೊಳ್ಳಬಹುದು. ರೈತರಿಗೆ ಅರಣ್ಯ ಇಲಾಖೆಯ ವತಿಯಿಂದ ಸಿಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದ ಸಾಮಾಜಿಕ ಅರಣ್ಯ ವಲಯಾಧಿಕಾರಿ ಎಂ.ಗಣೇಶ್, ರೈತರು ಅರಣ್ಯ ಕೃಷಿಗೆ ಹೆಚ್ಚಿನ ಒತ್ತು ನೀಡಿದರೆ ಸುಸ್ಥಿರ ಆದಾಯ ಗಳಿಸಲು ಸಾಧ್ಯ. ರೈತರು ಈ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿಭೂಮಿಯ ಮಣ್ಣಿನ ಫಲವತ್ತತೆ , ಅಂತರ್ಜಲ ವೃದ್ಧಿ ಮತ್ತು ಪರಿಸರ ಸಮತೋಲನವನ್ನು ಕಾಪಾಡಲು ಸಾಧ್ಯ ಎಂದು ತಿಳಿಸಿದರು. ರೈತರು ಸಾಂಪ್ರದಾಯಿಕ ಕೃಷಿಯೊಂದಿಗೆ ಲಭ್ಯ ಇರುವ ಮ್ಮ ಜಮೀನಿನಲ್ಲಿ ತೇಗ, ಶ್ರೀಗಂಧ, ಬಿದಿರು ಮತ್ತು ಹೆಬ್ಬೇವುಗಳಂತಹ ವಾಣಿಜ್ಯ ಮರಗಳನ್ನು ಬೆಳೆಸುವುದರಿಂದ, ರೈತರು ಅನಿಶ್ಚಿತ ಬೆಳೆ ನಷ್ಟದಿಂದ ಪಾರಾಗಿ ದೀರ್ಘಕಾಲೀನ ಆರ್ಥಿಕ ಭದ್ರತೆ ಹೊಂದಲು ಸಾಧ್ಯ ಎಂದರು. ಕೂಡಿಗೆ ಗ್ರಾಮ ಪಂಚಾಯ್ತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಿ.ಎಸ್. ಮಂಜುಳ ಮಾತನಾಡಿ, ರೈತರು ಅರಣ್ಯ, ಕೃಷಿ ಮತ್ತಿತರ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಕೃಷಿಕರಾಗಿ ಆರ್ಥಿಕವಾಗಿ ಸಬಲೀಕರಣ ಹೊಂದಬೇಕು ಎಂದರು. ಹುದುಗೂರಿನ ಪ್ರಗತಿಪರ ರೈತ ಐಮುಡಿಯಂಡ ಗಣೇಶ್, ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಎಚ್.ಎಸ್.ರವಿ, ಡಿಆರ್ ಎಫ್ ಓ ಎನ್.ಬಿ.ಹರೀಶ್ ಕುಮಾರ್, ತಾಂತ್ರಿಕ ಸಲಹೆಗಾರರಾದ ಶೀತಲ್, ವನಪಾಲಕರಾದ ಸೋಮಶೇಖರ್, ಅನಿಲ್ ಸೇರಿದಂತೆ ಹುದಗೂರು ಮತ್ತು ಸುತ್ತಲಿನ ರೈತರು ಭಾಗವಹಿಸಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.16: ಕನ್ನಡದ ಪ್ರಥಮ ಕಥೆಗಾರ್ತಿ ಕೊಡಗಿನ ಗೌರಮ್ಮ (1912–1939) ಅವರು ಆಧುನಿಕ ಕನ್ನಡ ಸಾಹಿತ್ಯದ ಆರಂಭಿಕ…

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.