Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಾ.ಶಿವಕುಮಾರ ಸ್ವಾಮೀಜಿ ಜೀವನ ಶೈಲಿ ಜಗತ್ತಿಗೆ ಆದರ್ಶ… ಕುಶಾಲನಗರದಲ್ಲಿ ಸಿದ್ದಗಂಗಾ ಶ್ರೀಗಳ 119 ನೇ ಜಯಂತಿಯಲ್ಲಿ ಅರಮೇರಿ ಶ್ರೀಗಳ ಬಣ್ಣನೆ..
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡಾ.ಶಿವಕುಮಾರ ಸ್ವಾಮೀಜಿ ಜೀವನ ಶೈಲಿ ಜಗತ್ತಿಗೆ ಆದರ್ಶ… ಕುಶಾಲನಗರದಲ್ಲಿ ಸಿದ್ದಗಂಗಾ ಶ್ರೀಗಳ 119 ನೇ ಜಯಂತಿಯಲ್ಲಿ ಅರಮೇರಿ ಶ್ರೀಗಳ ಬಣ್ಣನೆ..

ಏಪ್ರಿಲ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ, NEWS DESK, ಏ.04 : 113 ವರ್ಷಗಳ ಸುಧೀರ್ಘ ಜೀವಿತಾವಧಿಯಲ್ಲಿ ತಮ್ಮ ಬದುಕನ್ನು ಸಮಾಜ ಸೇವೆಗೆ ಅರ್ಪಿಸುವ ಮೂಲಕ ಜಗತ್ತಿಗೆ ಆದರ್ಶರಾದವರು ಡಾ.ಶಿವಕುಮಾರ ಸ್ವಾಮೀಜಿ ಎಂದು ವಿರಾಜಪೇಟೆ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬಣ್ಣಿಸಿದರು.
ಕುಶಾಲನಗರದ ಸಿದ್ದಗಂಗಾ ಭಕ್ತಮಂಡಳಿ ಹಾಗೂ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ರಥಬೀದಿಯ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಾ.ಶಿವಕುಮಾರ ಸ್ವಾಮೀಜಿ ಯವರ 119 ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದ ಶ್ರೀಗಳು,
ಇಡೀ ನಾಡು ಬರಗಾಲದಲ್ಲಿ ನಲುಗಿದ್ದ ಸಂದರ್ಭ ಅಲ್ಲಿ ಕಲಿಯುತ್ತಿದ್ದ ಬಡ ಮಕ್ಕಳ ಹೊಟ್ಟೆ ತುಂಬಿಸಲು ಹಳ್ಳಿ ಹಳ್ಳಿಗಳಿಗೆ ಪಾದಯಾತ್ರೆ ನಡೆಸಿ ಜೋಳಿಗೆ ಹಿಡಿದು ಭಿಕ್ಷಾಟನೆ ಮಾಡಿ ತಂದ ದವಸದಲ್ಲಿ ಮಕ್ಕಳ ಹೊಟ್ಟೆ ತುಂಬಿಸುತ್ತಿದ್ದರು.
ನರ್ಸರಿ ಯಿಂದ ಉನ್ನತ ಶಿಕ್ಷಣದವರೆಗೂ ನಾನಾ ಶಿಕ್ಷಣ ಸಂಸ್ಥೆಗಳನ್ನು ತೆರೆದ ಸಿದ್ದಗಂಗಾ ಶ್ರೀಗಳು, ಬಡ ಮಕ್ಕಳಿಗೆ ಉಚಿತವಾಗಿ ವೈದ್ಯಕೀಯ ಶಿಕ್ಷಣ ನೀಡಲು ಸಾಧ್ಯವಾಗದ ಕಾರಣ ವೈದ್ಯಕೀಯ ಕಾಲೇಜನ್ನು ಡಾ.ಶಿವಕುಮಾರ ಸ್ವಾಮೀಜಿ ಗಳು ತೆರೆದಿರಲಿಲ್ಲ.
ಸಿದ್ದಗಂಗಾ ಮಠದಲ್ಲಿ ಉಚಿತ ಶಿಕ್ಷಣ ಹಾಗೂ ವಸತಿಗೆ ಪ್ರವೇಶ ಪಡೆಯಲು ಬಡ ಮಕ್ಕಳಿಗೆ ಕೇವಲ ಬಡತನ ಒಂದೇ ಮಾನದಂಡ ಎಂದು ಅರಮೇರಿ ಶ್ರೀಗಳು ಶ್ಲಾಘಿಸಿದರು.
ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶೀರ್ವಚನ ದಲ್ಲಿ, 69 ವಸಂತಗಳ ಕಾಲ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಶಿವಕುಮಾರ ಸ್ವಾಮೀಜಿ ಮಠದಲ್ಲಿ ನಿತ್ಯವೂ ಇರುವ 10 ಸಾವಿರ ಮಕ್ಕಳ ಹೃದಯದಲ್ಲಿ ದೇವರನ್ನು ಕಾಣುತ್ತಿದ್ದರು ಎಂದು ಬಣ್ಣಿಸಿದರು.
ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಹಾಗೂ ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮಾತನಾಡಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧ್ಯಕ್ಷ ಕೆ.ಪಿ.ಪರಮೇಶ್, ಸರ್ಕಾರಿ ನೌಕರರ ಸಂಘದ ವೀರಶೈವ ಸಮಾಜದ ಅಧ್ಯಕ್ಷ ಎಸ್.ನಂದೀಶ್, ಬಸವೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಎಂ.ಕೆ.ಧನರಾಜು, ಬಸವೇಶ್ವರ ಸೌಹಾರ್ದ ಸಹಕಾರ ಬ್ಯಾಂಕ್ ಅಧ್ಯಕ್ಷ ಶಾಂಭಶಿವಯ್ಯ, ಕೊಡ್ಲಿಪೇಟೆ ಗಂಗಾ ವೀರಶೈವ ಮಹಿಳಾ ಸಂಘದ ಅಧ್ಯಕ್ಷೆ ಮಂಜುಳಾ ಸುರೇಶ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಸರೋಜಾ ಆರಾಧ್ಯ, ಶರಣ ಸಾಹಿತ್ಯ ಪರಿಷತ್ತು ಯುವ ಘಟಕದ ಜಿಲ್ಲಾಧ್ಯಕ್ಷ ಹಕ್ಕೆ ಮೋಹನ್, ಸೋಮವಾರಪೇಟೆ ತಾಲ್ಲೂಕು ಶಸಾಪ ಅಧ್ಯಕ್ಷ ಎಸ್.ಎಸ್.ಮಹೇಶ್, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಎಸ್.ಶಿವಾನಂದ, ಗುಡ್ಡೆಹೊಸೂರು ವೀರಶೈವ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ, ಪ್ರಮುಖರಾದ ಸದಾಶಿವಯ್ಯ ಪಲ್ಲೇದ್, ಪರಮೇಶ್, ಎಂ.ಎಸ್.ಗಣೇಶ್, ಕುಶಾಲನಗರ ದೇವಾಂಗ ಸಮಾಜದ ಅಧ್ಯಕ್ಷ ಡಿ.ವಿ.ರಾಜೇಶ್, ನಿವೃತ್ತ ಪೋಲೀಸ್ ಅಧಿಕಾರಿ ಪರಶಿವ, ಪುರಸಭೆ ಮಾಜಿ ಸದಸ್ಯ ಎಂ.ಬಿ.ಸುರೇಶ್, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಮಣಜೂರು ಮಂಜುನಾಥ್, ಕಸಾಪ ಹೋಬಳಿ ಅಧ್ಯಕ್ಷ ಎಂ.ಎನ್.ಮೂರ್ತಿ ಮೊದಲಾದವರಿದ್ದರು.


ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಪುಟ್ಟರಾಜು, ಅಕ್ಕನ ಬಳಗದ ಮನುದೇವಿ, ಮಣಿಯಮ್ಮ ವಚನ ಗೀತೆ ಹಾಡಿದರು.
ಸಿದ್ದಗಂಗಾ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಎಂ.ಕೆ.ಧನರಾಜು, ಸಂತೋಷ್, ಡಿ.ವಿ.ರಾಜೇಶ್, ಕೊಡ್ಲಿಪೇಟೆ ಮಮತಾ ಸುರೇಶ, ಸರೋಜಾ ಆರಾಧ್ಯ, ಹಕ್ಕೆ ಮೋಹನ್ ಅವರನ್ನು ಸನ್ಮಾನಿಸಲಾಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.