ಮಡಿಕೇರಿ, NEWS DESK ಏ.4 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹಾಕತ್ತೂರು- ಮರಗೋಡು ರಸ್ತೆಯಲ್ಲಿ ನಡೆದಿದೆ.
ಕಟ್ಟೆಮಾಡು ಗ್ರಾಮದ ಬಿದ್ರುಪಣೆ ಸೋಮಣ್ಣ ಅವರ ಕಿರಿಯ ಪುತ್ರ ಪ್ರವೀಣ್ (35) ಎಂಬುವವರೇ ಮೃತ ದುರ್ದೈವಿ. ಶುಕ್ರವಾರ ರಾತ್ರಿ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ರಸ್ತೆಯಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಪ್ರವೀಣ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಉಳಿದವರಿಗೂ ಗಾಯಗಳಾಗಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.








