ಮಡಿಕೇರಿ, NEWS DESK ಏ.4:-2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಟಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್, 15 ಪ್ರಾರಂಭದ ದಿನವಾಗಿದೆ. ಅರ್ಜಿ ಸಲ್ಲಿಸಲು ಮೇ, 04 ಕೊನೆಯ ದಿನವಾಗಿದೆ. ಮೇ, 06 ರಂದು ಅರ್ಜಿಗಳ ಪರಿಶೀಲನೆ, ಮೇ, 12 ರಂದು ಪ್ರವೇಶ ಪರೀಕ್ಷೆ, ಮೇ, 15 ರಂದು ಪ್ರವೇಶ ಪರೀಕ್ಷೆ ಫಲಿತಾಂಶ ಘೋಷಣೆ, ಮೇ, 19 ರಂದು ಅರ್ಹ ವಿದ್ಯಾರ್ಥಿಗಳನ್ನು ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡುವುದು, ಆಯ್ಕೆಯಾದ ಶಾಲೆಗೆ ದಾಖಲಾಗಲು ಮೇ, 30 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:- ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://swd.karnataka.gov.in/ ಅನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು, ವಿದ್ಯಾರ್ಥಿಗಳಿಂದ ಜಾತಿ ದೃಡಿsೀಕರಣ ಪ್ರಮಾಣ ಪತ್ರ, ಆದಾಯ ದೃಡಿsೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಡಿsೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2 ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು).
ಅರ್ಜಿ ಪಡೆಯಲು ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ 9480843156, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 9480843157 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.







