Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಜನ ಗಣತಿದಾರರಿಗೆ ತರಬೇತಿ :  ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಜನ ಗಣತಿದಾರರಿಗೆ ತರಬೇತಿ :  ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ* 

ಏಪ್ರಿಲ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ ಏ.4 NEWS DESK : ಜನಗಣತಿ ಕಾರ್ಯವು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಕಾನೂನು‌ ಬದ್ಧ ಕೆಲಸವಾಗಿದೆ. ಶಿಕ್ಷಕರು ಉತ್ತಮ ಕರ್ತವ್ಯದೊಂದಿಗೆ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿಸಿ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ಶನಿವಾರ ಮನವಿ ಮಾಡಿದರು. ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ವತಿಯಿಂದ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮೇಲ್ವಿಚಾರಕರು ಹಾಗೂ ಗಣತಿದಾರರಿಗೆ ಮೂರು ದಿನಗಳ ಕಾಲ ಮನೆಪಟ್ಟಿ ಹಾಗೂ ಜನಗಣತಿ ಕಾರ್ಯದ ಕುರಿತು
ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನಗಣತಿ ಕಾರ್ಯವನ್ನು ಶಿಕ್ಷಕರು ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 164 ಬ್ಲಾಕ್ ಗಳನ್ನು ಗುರುತಿಸಿದ್ದು,
30 ಮಂದಿ ಮೇಲ್ವಿಚಾರಕರು ಹಾಗೂ 174 ಗಣತಿದಾರರು ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನೇಮಕಗೊಂಡಿರುವ ಗಣತಿದಾರರು ಮೊದಲ ಹಂತದ ಮನೆ ಪಟ್ಟಿ ಕಾರ್ಯದಲ್ಲಿ ನಿಗದಿ ಪಡಿಸುವ ಪ್ರದೇಶಗಳ ನಕ್ಷೆಯನ್ನು ಸಮರ್ಪಕವಾಗಿ ತಯಾರಿಸಿಕೊಂಡರೆ ಜನಗಣತಿ ಕಾರ್ಯ ಸುಲಭವಾಗುತ್ತದೆ ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ಹೇಳಿದರು. ರಾಷ್ಟ್ರೀಯ ಜನಗಣತಿಯ ಮೊದಲ ಭಾಗವಾಗಿ ಮನೆ ಮನೆಗಳ ಪಟ್ಟಿ ಸರ್ವೇ ಕಾರ್ಯ ಏಪ್ರಿಲ್‌ 16ರಿಂದ ಪ್ರಾರಂಭಗೊಂಡು ಮೇ 15 ಕ್ಕೆ ಮುಕ್ತಾಯಗೊಳ್ಳಲಿದೆ. ‌ಪ್ರತಿಯೊಬ್ಬ ಗಣತಿದಾರರು ನಿಗದಿಪಡಿಸುವ ಪ್ರದೇಶಗಳ ಮನೆಗಳನ್ನು ಗುರುತಿಸುವ ನಕ್ಷೆ ಕಾರ್ಯವನ್ನು ಕಡ್ಡಾಯವಾಗಿ ಪೂರ್ಣಗೊಳಿಸುವ ಮೂಲಕ ಮಹತ್ವದ ಯೋಜನೆಯ ಯಶಸ್ಸಿ‌ಗೆ ಶ್ರಮಿಸಿ’ ಎಂದು ಸಲಹೆ ನೀಡಿದರು. ಇಂದಿನ ಡಿಜಿಟಲ್ ಯುಗದಲ್ಲಿ ಜನಗಣತಿ ಕಾರ್ಯವನ್ನು ಸುಲಭಗೊಳಿಸಲು ಆನ್‌ಲೈನ್ ಅಪ್ಲಿಕೇಶನ್ ವ್ಯವಸ್ಥೆ ಮಾಡಲಾಗಿದೆ. 1872 ರಲ್ಲಿ ಆರಂಭವಾದ ಜನಗಣತಿ ಈಗ ಅದು 16 ನೇ ಜನಗಣತಿಯಾಗಿದ್ದು, ಸ್ವಾತಂತ್ರ್ಯ ನಂತರದ 8 ನೇ ರಾಷ್ಟ್ರೀಯ ಜನಗಣತಿ ಯಾಗಿ ಬಹಳ ಪ್ರಾಮುಖ್ಯತೆ ಪಡೆದಿದೆ‌. ದೇಶದ ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿಖರವಾದ ಅಂಕಿ- ಅಂಶಗಳ ಆಧಾರದ ಮೇಲೆ ಸರ್ಕಾರ ಯೋಜನೆಗಳನ್ನು ರೂಪಿಸಲು ಮೂಲ ಆಧಾರವಾಗಲಿದೆ ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ಹೇಳಿದರು. ಗಣತಿದಾರರು ಮನೆ ಮನೆಗೆ ಭೇಟಿ ನೀಡುವ ಸಮಯದಲ್ಲಿ ಕೇಳುವ 33 ಪ್ರಶ್ನೆಗಳಿಗೆ ಸರಿಯಾದ ಉತ್ತರ ಪಡೆಯಬೇಕು. ಉತ್ತರ ನೀಡಲು ಕೆಲವು ಮಂದಿ ನಿರಾಕರಿಸಿದರೆ ಅವರೊಂದಿಗೆ ಸಂಯಮದಿಂದ ಮಾತನಾಡಿ ಗಣತಿಯ ಮಹತ್ವವನ್ನು ಅವರಿಗೆ ಅರ್ಥ ಮಾಡಿಸಿ ಮಾಹಿತಿ ಪಡೆಯುವಂತೆ ತಹಶೀಲ್ದಾರ್ ಕಿರಣ್ ಗೌರಯ್ಯ ಸಲಹೆ ನೀಡಿದರು. ಗಣತಿ ಕಾರ್ಯದಲ್ಲಿ ಗಣತಿದಾರರಿಗೆ ಏನೇ ಸಮಸ್ಯೆ ಎದುರಾದರೆ ತಕ್ಷಣವೇ ಮೇಲ್ವಿಚಾರಕರು ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿದರೆ ಸಮಸ್ಯೆಗಳಿಗೆ ತಕ್ಷಣದಲ್ಲಿ ಸೂಕ್ತ ಪರಿಹಾರ ನೀಡಲಾಗುತ್ತದೆ’ ಎಂದು ತಿಳಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಉಪ ತಹಶೀಲ್ದಾರ್ ಎಂ.ಪಿ.ಪ್ರೀತು , ಕಂದಾಯ ನಿರೀಕ್ಷಕ ಎಚ್.ಎಸ್.ಸಂತೋಷ್, ಕಂದಾಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು/ಸಿಬ್ಬಂದಿ ಇದ್ದರು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಸ್.ಪಿ.ಪರಮೇಶ್, ಎಸ್.ಎನ್. ಲೋಕೇಶ್, ಕೆ.ಶಾಂತಕುಮಾರ್, ಪಿ.ಎಸ್.ರವಿಕೃಷ್ಣ , ಮನೆ ಸಮೀಕ್ಷೆ ಹಾಗೂ ಜನಗಣತಿ ಸಮೀಕ್ಷಾ ಕಾರ್ಯ ನಡೆಸುವ ಕುರಿತು ಪಿ.ಪಿ.ಟಿ.ಮೂಲಕ ಪೂರಕ ಮಾಹಿತಿ ನೀಡಿದರು. ತರಬೇತಿ ಕಾರ್ಯಕ್ರಮದಲ್ಲಿ ಜನಗಣತಿ ಕಾರ್ಯದ ವಿಧಾನಗಳು, ಅಪ್ಲಿಕೇಶನ್ ಬಳಕೆ, ಮಾಹಿತಿ ಸಂಗ್ರಹಣೆಯ ನಿಯಮಗಳು ಹಾಗೂ ಜನರೊಂದಿಗೆ ಸಂವಹನ ಮಾಡುವ ವಿಧಾನಗಳ ಕುರಿತು ವಿವರವಾಗಿ ತಿಳಿಸಲಾಯಿತು. ತರಬೇತಿಯಲ್ಲಿ ಜನಗಣತಿಗೆ ಪೂರಕವಾಗಿ ಮೊದಲ ಹಂತದ ಮನೆಪಟ್ಟಿ ಕಾರ್ಯಾಚರಣೆ ಮಾಡುವ ಬಗ್ಗೆ ವಿವರ ಮಾಹಿತಿ ನೀಡಲಾಯಿತು.ಹಾಗಾಗಿ ಮೂರು ದಿನಗಳ ಕಾಲ ತರಬೇತಿ ಪಡೆದು ಜನಗಣತಿ ಕಾರ್ಯವನ್ನು ಯಶಸ್ವಿಯಾಗಿಸಿ ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ ಮಾಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.