Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊನೆಗೂ ಅರಣ್ಯದಲ್ಲಿ ಶರಣ್ಯ ಪತ್ತೆ : ಕುಡಿಯ ಸಮುದಾಯದ ಹರಕೆ ಫಲಿಸಿತು
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಕೊನೆಗೂ ಅರಣ್ಯದಲ್ಲಿ ಶರಣ್ಯ ಪತ್ತೆ : ಕುಡಿಯ ಸಮುದಾಯದ ಹರಕೆ ಫಲಿಸಿತು

ಏಪ್ರಿಲ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಏ.5 : ಕೊಡಗಿನ ಅತಿ ಎತ್ತರದ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಕೊಚ್ಚಿ ಮೂಲದ ಜಿ.ಎಸ್.ಶರಣ್ಯ(36) ಕೊನೆಗೂ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಸ್ಥಳೀಯ ಕಕ್ಕಬ್ಬೆ ಯವಕಪಾಡಿ ಗ್ರಾಮದ ಕುಡಿಯ ಸಮುದಾಯದ ಯುವಕರ ರಕ್ಷಣಾ ತಂಡ ಶರಣ್ಯ ಅವರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ತಡಿಯಂಡಮೋಳ್ ಬೆಟ್ಟದ ಟ್ರಕ್ಕಿಂಗ್ ಪಾಯಿಂಟ್ ನಿಂದ 3.5 ಕಿ.ಮೀ ದೂರದ ಮಲೆ ತಿರಿಕೆ ಎಂಬ ಅರಣ್ಯದೊಳಗೆ ಸುರಕ್ಷಿತವಾಗಿದ್ದ ಶರಣ್ಯ ಅವರನ್ನು ಕುಡಿಯ ಸಮುದಾಯದ ಯುವಕರ ರಕ್ಷಣಾ ತಂಡ ಪತ್ತೆ ಮಾಡಿ ಕರೆ ತಂದಿದ್ದಾರೆ.
ತಡಿಯಂಡಮೋಳ್ ಬೆಟ್ಟದ ಸಂಪೂರ್ಣ ಮಾಹಿತಿ ಹೊಂದಿದ್ದ ಸ್ಥಳೀಯ ಕುಡಿಯ ಬುಡಕಟ್ಟು ಸಮುದಾಯದ ಯುವಕರ ತಂಡ ಇಂದು ಸಂಜೆ ವೇಳೆಗೆ ಮಲೆ ತಿರಿಕೆ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶರಣ್ಯ ಇರುವುದನ್ನು ಪತ್ತೆ ಮಾಡುವಲ್ಲಿ ಸಫಲರಾಗಿದ್ದಾರೆ. ಬಳಿಕ ಯುವಕರು ರಕ್ಷಣಾ ತಂಡಗಳಿಗೆ ಮಾಹಿತಿ ರವಾನಿಸಿದ್ದಾರೆ. ಆಹಾರವಿಲ್ಲದೆ ಬಳಲಿದ್ದ ಶರಣ್ಯ ಅವರನ್ನು ಉಪಚರಿಸಿದ ವಿವಿಧ ಇಲಾಖೆಗಳ ರಕ್ಷಣಾ ತಂಡ ಟ್ರಕ್ಕಿಂಗ್ ಪಾಯಿಂಟ್ ಪ್ರವೇಶ ದ್ವಾರಕ್ಕೆ ಕರೆ ತಂದರು. *ಕುಡಿಯರ ಹರಕೆ* ಕಳೆದ 3 ದಿನಗಳಿಂದ ತಡಿಯಂಡಮೋಳ್ ಬೆಟ್ಟದ ಅರಣ್ಯದೊಳಗೆ ನಿಗೂಢವಾಗಿ ನಾಪತ್ತೆಯಾಗಿದ್ದ ಶರಣ್ಯ ಅವರು ಸುರಕ್ಷಿತವಾಗಿ ಮರಳಬೇಕು ಎಂದು ಸ್ಥಳೀಯ ಕುಡಿಯ ಸಮುದಾಯದ ಪ್ರಮುಖರು ತಮ್ಮ ಆರಾಧ್ಯ ದೈವಗಳ ಮೊರೆ ಹೋಗಿದ್ದರು. ಮಲೆ ಬೀರ, ಮಲೆ ತಮ್ಮಚ್ಚ, ಚೌಂಡಿ ದೈವಗಳಿಗೆ ವಿಶೇಷ ಪೂಜೆ ಸಲ್ಲಿಸಿ ಶರಣ್ಯ ಸುರಕ್ಷಿತವಾಗಿ ಪತ್ತೆಯಾಗಬೇಕು. ಹುಡುಕಾಟ ನಡೆಸಲು ಕಾಡಿಗೆ ತೆರಳಿದ ಗ್ರಾಮಸ್ಥರಿಗೆ ಯಾವುದೇ ಕಾಡು ಪ್ರಾಣಿಗಳಿಂದ ತೊಂದರೆಯಾಗಬಾರದು ಎಂದು ದೀಪಕ್ಕೆ ಅಕ್ಕಿ ಹಾಕಿ ಮುಂದಿನ ಹಬ್ಬದ ಸಂದರ್ಭ ಹರಕೆ ನೀಡುವುದಾಗಿ ಪ್ರಾರ್ಥಿಸಿದ್ದರು.
ಗ್ರಾಮದಲ್ಲಿ ಹಬ್ಬದ ಕಟ್ಟು ಬಿದ್ದಿದೆ, ಇಂತಹ ಸಂದರ್ಭ ತಿಳಿದು ತಿಳಿಯದೆಯೋ ಏನಾದರೂ ತಪ್ಪು ನಡೆದಿದ್ದರೆ ಮನ್ನಿಸುವಂತೆ ದೈವಗಳಲ್ಲಿ ಬೇಡಿಕೊಂಡಿದ್ದರು. ಕಾಕತಾಳೀಯ ಎಂಬoತೆ ಕುಡಿಯ ಸಮುದಾಯದ ಯುವಕರ ತಂಡಕ್ಕೆ ಶರಣ್ಯ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಆ ಮೂಲಕ ಸಮುದಾಯದ ಪ್ರಾರ್ಥನೆಗೆ ಆರಾಧ್ಯ ದೈವಗಳು ಹರಸಿದಂತಾಗಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.
*ಏಕಾಂಗಿ ಶರಣ್ಯ*
ಕಕ್ಕಬ್ಬೆ ಸಮೀಪದ ಕಬ್ಬಿನಕಾಡುವಿನ ಹೋಂಸ್ಟೇಗೆ ಏ.1ರಂದು ಬಂದಿದ್ದ ಧೈರ್ಯವಂತೆ ಶರಣ್ಯ ಏ.2ರಂದು ತಡಿಯಂಡಮೋಳ್ ಬೆಟ್ಟಕ್ಕೆ ಟ್ರಕ್ಕಿಂಗ್ ತೆರಳಿದ್ದರು. ಏಕಾಂಗಿಯಾಗಿ ಟ್ರಕ್ಕಿಂಗ್ ಬುಕ್ ಮಾಡಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇತರ ಚಾರಣಿಗರ ಜೊತೆಯಲ್ಲಿ ಶರಣ್ಯ ಅವರನ್ನು ಬೆಟ್ಟಕ್ಕೆ ತೆರಳಲು ಅನುಮತಿ ನೀಡಿದ್ದರು. ಶರಣ್ಯ ಜೊತೆಯಲ್ಲಿ ಟ್ರಕ್ಕಿಂಗ್ ತೆರಳಿದ್ದ ಎಲ್ಲಾ ಚಾರಣಿಗರು ಸಂಜೆ ಮರಳಿದ್ದರೂ ಶರಣ್ಯ ಮಾತ್ರ ವಾಪಾಸಾಗಿರಲಿಲ್ಲ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.