Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡವ ಕುಟುಂಬಗಳ ನಡುವಿನ ಚೇನಂಡ ಕಪ್ ಹಾಕಿ ಹಬ್ಬ ಆರಂಭ : ದಾಖಲೆಯ 383 ತಂಡಗಳ ನಡುವೆ ಹಣಾಹಣಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವ ಕುಟುಂಬಗಳ ನಡುವಿನ ಚೇನಂಡ ಕಪ್ ಹಾಕಿ ಹಬ್ಬ ಆರಂಭ : ದಾಖಲೆಯ 383 ತಂಡಗಳ ನಡುವೆ ಹಣಾಹಣಿ

ಏಪ್ರಿಲ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಏ.5 : ಕೊಡಗಿನ ಕೊಡವ ಕುಟುಂಬಗಳ ನಡುವಿನ ಹಾಕಿ ಹಬ್ಬದ 26ನೇ ವರ್ಷದ “ಚೇನಂಡ ಕಪ್ ಹಾಕಿ ಉತ್ಸವ”ಕ್ಕೆ ನಾಪೋಕ್ಲುವಿನಲ್ಲಿ ವರ್ಣರಂಜಿತ ಚಾಲನೆಯನ್ನು ನೀಡಲಾಯಿತು. ಕೊಡವ ಸಮುದಾಯದ ಒಟ್ಟು 383 ತಂಡಗಳ ನಡುವೆ 28 ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ಮೇ 2 ರಂದು ಅಂತಿಮ ಪಂದ್ಯವನ್ನು ಆಯೋಜಿಸಲಾಗಿದೆ. ಅತ್ಯಾಕರ್ಷಕವಾಗಿ ಸಜ್ಜುಗೊಂಡಿರುವ ನಾಪೋಕ್ಲು ಚೆರಿಯಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭಾನುವಾರ “ಚೇನಂಡ ಕಪ್ ಹಾಕಿ ಉತ್ಸವ”ಕ್ಕೆ ಸಾಂಪ್ರದಾಯಿಕವಾಗಿ ಬೆಳ್ಳಿಯ ಚೆಂಡನ್ನು ಬೆಳ್ಳಿಯ ಸ್ಟಿಕ್‌ನಿಂದ ಹೊಡೆಯುವ ಮೂಲಕ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರಾದ ಪಾಂಡoಡ ಬೋಪಣ್ಣ ಹಾಗೂ ಗಣ್ಯರು ವಿದ್ಯುಕ್ತ ಚಾಲನೆ ನೀಡಿದರು.
ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ ದೇಶ ವಿದೇಶಗಳಲ್ಲಿ ಕೊಡವ ಕೌಟುಂಬಿಕ ಹಾಕಿ ಪ್ರಸಿದ್ಧಿಯನ್ನು ಪಡೆದಿದೆ, ಈ ಹಿಂದಿನ ಹಾಕಿ ಉತ್ಸವದ ಸಂದರ್ಭ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿರುವ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಉತ್ಸವ ಸುಸೂತ್ರವಾಗಿ ನಡೆಯುವಂತಾಗಲೆAದು ಹಾರೈಸಿದರು.
ಕೊಡಗು ಜಿಲ್ಲೆ ಅದರಲ್ಲೂ ವಿಶೇಷವಾಗಿ ಕೊಡವ ಕುಟುಂಬದವರು ಸೇನೆ, ಕ್ರೀಡೆಯನ್ನು ಒಳಗೊಂಡoತೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆಯ ಮೂಲಕ ತಮ್ಮ ಛಾಪನ್ನು ಮೂಡಿಸಿ ವಿಶ್ವದಾದ್ಯಂತ ಹೆಸರು ಮಾಡಿದ್ದಾರೆ. ಈ ಕೌಟುಂಬಿಕ ಪಂದ್ಯಾವಳಿಯು ಜಗತ್ತಿಗೆ ಮತ್ತಷ್ಟು ಹಾಕಿ ಪ್ರತಿಭೆಗಳನ್ನು ನೀಡುವಂತಾಗಲಿ ಎಂದು ಹಾರೈಸಿದರು.
ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡಿರ ಅರುಣ್ ಮಾಚಯ್ಯ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಚೇನಂಡ ಕುಟುಂಬದ ಪಟ್ಟೆದಾರರಾದ ಪೊನ್ನಪ್ಪ, ಚೇನಂಡ ಹಾಕಿ ಉತ್ಸವ ಸಮಿತಿ ಅಧ್ಯಕ್ಷರಾದ ಚೇನಂಡ ಪಿ. ಕರುಂಬಯ್ಯ, ಕಾರ್ಯಧ್ಯಕ್ಷರಾದ ಡೀನಾ ಚೆಂಗಪ್ಪ, ವಕ್ತಾರ ಚೇನಂಡ ಸುರೇಶ್ ನಾಣಯ್ಯ, ಸದಸ್ಯರು, ನಿರ್ದೇಶಕರು ಹಾಗೂ ಆಡಳಿತ ಮಂಡಳಿ,ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರಾದ ಪಾಂಡoಡ ಬೋಪಣ್ಣ, ಒಲಂಪಿಯನ್ ಪೂಣಚ್ಚ, ನಿರ್ದೇಶಕರಾದ ಕಲಿಯಂಡ ಸಂಪನ್ ಅಯ್ಯಪ್ಪ ಮೊದಲಾದವರು ಪಾಲ್ಗೊಂಡಿದ್ದರು.
ಆಕರ್ಷಕ ಮೆರವಣಿಗೆ- ಸಾಂಪ್ರದಾಯಿಕ ಕುಪ್ಯಚಾಲೆ ತೊಟ್ಟ ಪುರುಷರು ಹಾಗೂ ಆಕರ್ಷಕ ಸಾಂಪ್ರದಾಯಿಕ ಸೀರೆಯನ್ನುಟ್ಟ ಮಹಿಳೆೆಯರು ಸೇರಿದಂತೆ, ಈ ಹಿಂದೆ ಕೊಡವ ಹಾಕಿ ಉತ್ಸವವನ್ನು ಆಯೋಜಿಸಿದ್ದ ಕುಟುಂಬಗಳ ಪ್ರಮುಖರು, ಕೊಡವ ಹಾಕಿ ಅಕಾಡೆಮಿಯ ಪ್ರಮುಖರು ಚೇನಂಡ ಹಾಕಿ ಉತ್ಸವದ ಧ್ವಜದೊಂದಿಗೆ, ಕೊಂಬ್ ಕೊಟ್ಟ್ ವಾಲಗದೊಂದಿಗೆ ನಾಪೋಕ್ಲುವಿನ ಪೊನ್ನಾಡ್ ಬಳಿಯಿಂದ ಚೆರಿಯಪರಂಬುವಿನ ಜ.ತಿಮ್ಮಯ್ಯ ಕ್ರೀಡಾಂಗಣದವರೆಗೆ ಅತ್ಯಾಕರ್ಷಕ ಮೆರವಣಿಗೆ ನಡೆಸಿ ಗಮನ ಸೆಳೆದರು.
ಹಿಂದಿನ ಉತ್ಸವ ಆಯೋಜಕರಿಗೆ ವಿಶೇಷ ಗೌರವ- ದಿ.ಪಾಂಡoಡ ಕುಟ್ಟಪ್ಪ ಅವರು 1997 ರಲ್ಲಿ ಪ್ರಥಮ ಬಾರಿಗೆ ಪಾಂಡoಡ ಕಪ್ ಹಾಕಿ ಉತ್ಸವನ್ನು ಆಯೋಜಿಸಿದ್ದರು. ಅಲ್ಲಿಂದ ಇಲ್ಲಿಯವರೆಗೆ ವಿವಿಧ ಕೊಡವ ಕುಟುಂಬಗಳು ಹಾಕಿ ಉತ್ಸವದ ಜವಾಬ್ದಾರಿ ವಹಿಸಿಕೊಂಡು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಅಚ್ಚುಕಟ್ಟಾಗಿ ಹಾಕಿ ಹಬ್ಬವನ್ನು ಆಯೋಜಿಸಿವೆ. ಈ ಹಿನ್ನೆಲೆಯಲ್ಲಿ ಇಂದಿನ ಉದ್ಘಾಟನಾ ಸಮಾರಂಭದಲ್ಲಿ ಈ ಹಿಂದೆ ಹಾಕಿ ಉತ್ಸವವನ್ನು ಆಯೋಜಿದ್ದ ಎಲ್ಲಾ ಕುಟುಂಬದ ಪ್ರಮುಖರನ್ನು ನಭಕ್ಕೆ ಗುಂಡಿಕ್ಕುವ ಮೂಲಕ ಗೌರವಿಸಿದ್ದು ವಿಶೇಷ.
ಪಾಂಡoಡ ಪುತ್ಥಳಿ ಅನಾವರಣ- ಕೊಡಗಿನ ಕೊಡವರ ಸಂಘಟನೆ, ಕ್ರೀಡಾ ಪ್ರತಿಭೆಗಳ ಉತ್ತೇಜನದ ಪ್ರಮುಖ ಉದ್ದೇಶದಿಂದ ಕೊಡವ ಕೌಟುಂಬಿಕ ಹಾಕಿ ಉತ್ಸವವನ್ನು ಆರಂಭಿಸಿದ “ದಿ.ಪಾಂಡoಡ ಕುಟ್ಟಪ್ಪ” ಅವರ ಸ್ಮರಣೆಗಾಗಿ ಚೇನಂಡ ಕುಟುಂಬಸ್ಥರು ಕ್ರೀಡಾಂಗಣದ ಬಳಿಯಲ್ಲಿ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು.
ಪ್ರದರ್ಶನ ಪಂದ್ಯದ ಆಕರ್ಷಣೆ- ಅಧಿಕೃತ ಪಂದ್ಯಗಳ ಆರಂಭಕ್ಕೂ ಮುನ್ನ ನಡೆದ ಟೀಂ ಯುಎಇ ತಂಡ ಮತ್ತು ತಾಮನೆ ಇಲೆವೆನ್ ತಂಡಗಳ ನಡುವಿನ ಪಂದ್ಯ ಮತ್ತು ಬೆಂಗಳೂರು ಸಾಯಿ ಮತ್ತು ಎಂಇಜಿ ತಂಡಗಳ ನಡುವಿನ ಪ್ರದರ್ಶನ ಪಂದ್ಯ ಆಕರ್ಷಕವಾಗಿ ನಡೆಯುವ ಮೂಲಕ ಚೇನಂಡ ಕಪ್ ಹಾಕಿ ಉತ್ಸವದ ಆರಂಭಕ್ಕೆ ಮುನ್ನುಡಿಯನ್ನು ಬರೆಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.