Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜೂನ್ 23 ರಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ… ಅರಮೇರಿ ಶ್ರೀ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ…
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜೂನ್ 23 ರಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ… ಅರಮೇರಿ ಶ್ರೀ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ…

ಏಪ್ರಿಲ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಕುಶಾಲನಗರ, NEWS DESK ಏ.06 : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮುಂಬರುವ ಜೂನ್ 23 ರಂದು ಮಂಗಳವಾರ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಜಿಲ್ಲಾ ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು ಕುಶಾಲನಗರದ ಸರ್ವರೂ ಸಮ್ಮೇಳನದ ಭಾಗವಾಗಬೇಕೆಂದು ಪರಿಷತ್ತಿನ ಗೌರವ ಅಧ್ಯಕ್ಷರೂ ಆದ ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕರೆಕೊಟ್ಟರು.
ಕುಶಾಲನಗರದ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,
ಶರಣ ಸಾಹಿತ್ಯ ಸಮ್ಮೇಳನ ಕೇವಲ ಸಮುದಾಯವೊಂದಕ್ಕೆ ಸೀಮಿತವಾದುದಲ್ಲ.
ಇದು ಜನಪರವಾದ ಜೀವಪರವಾದ ಅಭಿವ್ಯಕ್ತಿ.
ಸಮ ಸಮಾಜ ನಿರ್ಮಾಣದ ಪರಿಕಲ್ಪನೆ.
ಹನ್ನೆರಡನೆ ಶತಮಾನದಲ್ಲಿ ಸಮಾಜದಲ್ಲಿದ್ದ ಅಂಕು ಡೊಂಕುಗಳು – ಮೇಲು ಕೀಳು ಬೇಧಗಳನ್ನು ಬುಡಸಹಿತ ಕಿತ್ತೊಗೆಯಲು ರಚನೆಯಾದ ವಚನಗಳು ಹಾಗೂ ಶರಣ ಸಾಹಿತ್ಯವನ್ನು ಹಳ್ಳಿ – ಪೇಟೆ, ನಗರಗಳ ಪ್ರತಿ ಮನೆ ಮನೆಗಳಿಗೆ ಜನಸಾಮಾನ್ಯರ ಮನ ಮನಕ್ಕೆ ತಲುಪಿಸುವ ಉದ್ದೇಶವೇ ಶರಣ ಸಾಹಿತ್ಯ ಸಮ್ಮೇಳನದ ಮೂಲ ಧ್ಯೆಯ ಎಂದು ಶ್ರೀ ಗಳು ಹೇಳಿದರು.
ಸಮ್ಮೇಳನದ ಯಶಸ್ವಿಗೆ ವಿವಿಧ ಸಮಿತಿಗಳನ್ನು ಮಾಡಿಕೊಂಡು ಶಿಸ್ತು ಬದ್ಧವಾಗಿ, ಸಮಯ ಪಾಲನೆಯೊಂದಿಗೆ ಶರಣ ಸಾಹಿತ್ಯ ಸಮ್ಮೇಳನ ರೂಪುಗೊಳ್ಳಬೇಕೆಂದು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕರೆಕೊಟ್ಟರು.
ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮತನಾಡಿ, ಇದೇ ಮೊದಲ ಬಾರಿಗೆ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಆಯೋಜನೆಯಾಗುತ್ತಿದ್ದು
ಎಲ್ಲರೂ ಸೇರಿ ಸಮ್ಮೇಳನ ಯಶಸ್ವಿಗೊಳಿಸಬೇಕು.
ಸಮಯಪಾಲನೆಗೆ ಒತ್ತು ಕೊಡಬೇಕು.
ಕೊಡಗು ಜಿಲ್ಲೆಗೆ ಆಗಮಿಸುವ ಸುತ್ತೂರು ಶ್ರೀಗಳನ್ನು ಅಷ್ಟೇ ಭಕ್ತಿ ಹಾಗೂ ಗೌರವಗಳಿಂದ ಆದರಿಸಿ ಬೀಳ್ಕೊಡಬೇಕಿದೆ ಎಂದರು.
ತೊರೆನೂರು ವಿರಕ್ತ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಶರಣ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಜಾತಿ ವರ್ಗಗಳ ಜನರು ಸೇರುವ ಮೂಲಕ ಶರಣ ವಿಚಾರಗಳನ್ನು ಅರಿಯಲು ಉತ್ತಮ ವೇದಿಕೆ ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಎಸ್. ಶಿವಾನಂದ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎ.ಎಸ್.ಮಹೇಶ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಸರೋಜಾ ಆರಾಧ್ಯ, ಕುಶಾಲನಗರ ತಾಲ್ಲೂಕು ಅಧ್ಯಕ್ಷೆ ಹೇಮಲತಾ,
ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಹಕ್ಕೆ ಮೋಹನ್, ಉಪಾಧ್ಯಕ್ಷ ಕೆ.ಜಿ.ರಾಜಶೇಖರ, ಕೊಡ್ಲಿಪೇಟೆ ಗಂಗಾ ವೀರಶೈವ ಮಹಿಳಾ ಸಮಾಜದ ಅಧ್ಯಕ್ಷೆ ಮಂಜುಳಾ ಸುರೇಶ, ಕುಶಾಲನಗರ ಚೌಡೇಶ್ವರಿ ದೇವಾಲಯ ಸಮಿತಿ ಅಧ್ಯಕ್ಷ ಡಿ.ವಿ.ರಾಜೇಶ್,
ಪ್ರಮುಖರಾದ ಸದಾಶಿವಯ್ಯ ಪಲ್ಲೇದ, ಟಿ.ಜಿ.ಪ್ರೇಮಕುಮಾರ್, ಎಸ್.ನಂದೀಶ್, ಎಂ.ಕೆ.ಧನರಾಜು, ಎಂ.ಬಿ.ಸುರೇಶ್, ಶಿವಲಿಂಗ, ಜಿ.ಬಿ.ಲೋಕೇಶ್,
ವಿಜಯಪಾಲಾಕ್ಷ, ಪರಮೇಶ್ ಮೊದಲಾದವರಿದ್ದರು.
ಸಮಿತಿಗಳ ರಚನೆ :
ಹಣಕಾಸು ಸಮಿತಿಯ ಅಧ್ಯಕ್ಷರಾಗಿ ಶಾಂಬಶಿವಯ್ಯ,
ಸಂಚಾಲಕರಾಗಿ ಧನರಾಜು,
ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ರಾಗಿ ಎಸ್.ನಂದೀಶ್, ಸಂಚಾಲಕರಾಗಿ ಶಿವಲಿಂಗ,
ಆಹಾರ ಸಮಿತಿ ಅಧ್ಯಕ್ಷ ರಾಗಿ ಎಂ.ಎಸ್.ಗಣೇಶ್, ಸಂಚಾಲಕರಾಗಿ ಉದಯಕುಮಾರ್, ಧ್ವಜಾರೋಹಣ ಸಮಿತಿ ಅಧ್ಯಕ್ಷರಾಗಿ ಸದಾಶಿವಯ್ಯ ಪಲ್ಲೇದ್,
ವೇದಿಕೆ ಸಮಿತಿ ಅಧ್ಯಕ್ಷರಾಗಿ ಎಸ್.ಬಿ. ಹೇಮಲತಾ, ಸಂಚಾಲಕರಾಗಿ ಡಾ.ಹೇಮಲತಾ,
ಮೆರವಣಿಗೆ ಸಮಿತಿ ಅಧ್ಯಕ್ಷರಾಗಿ ಹೆಚ್.ಎಂ.ಮಧುಸೂದನ್, ಸಂಚಾಲಕರಾಗಿ ಧರ್ಮೇಂದ್ರ,
ಅತಿಥಿ ಸತ್ಕಾರ ಸಮಿತಿ ಅಧ್ಯಕ್ಷರಾಗಿ ಜಿ.ಬಿ.ಲೋಕೇಶ್, ಸಂಚಾಲಕರಾಗಿ ಎಂ.ಬಿ.ಸುರೇಶ್,
ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹುಲುಸೆ ಶಿವನಂಜಪ್ಪ,
ಸಂಚಾಲಕ ರಾಗಿ ಮರೂರು ಮಹದೇವ್ ಅವರನ್ನು ನೇಮಕ ಮಾಡಲಾಯಿತು.
ಹಾಗೆಯೇ ಅಷ್ಟೂ ಸಮಿತಿಯವರು ಪ್ರತ್ಯೇಕ ಸಮಿತಿ ಮಾಡಿಕೊಂಡು ತಂಡವಾಗಿ ಕಾರ್ಯನಿರ್ವಹಿಸುವ ಮೂಲಕ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು ಎಂದು ಸಭಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನಿರ್ದೇಶನ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.