Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಂಗಸಮುದ್ರ ಗ್ರಾಮದಲ್ಲಿ ಜೋಡಿ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ… ಬರಿಗಾಲಲ್ಲಿ ಕೆಂಡ ಕೊಂಡ ಹಾಯ್ದ ಭಕ್ತರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಂಗಸಮುದ್ರ ಗ್ರಾಮದಲ್ಲಿ ಜೋಡಿ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ… ಬರಿಗಾಲಲ್ಲಿ ಕೆಂಡ ಕೊಂಡ ಹಾಯ್ದ ಭಕ್ತರು*

ಏಪ್ರಿಲ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, NEWS DESK ಏ.07 : ಇಲ್ಲಿಗೆ ಸಮೀಪದ ರಂಗಸಮುದ್ರ ಗ್ರಾಮದ ಜೋಡಿ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ ಮಂಗಳವಾರ ಶ್ರದ್ದಾಭಕ್ತಿಯಿಂದ ನೆರವೇರಿತು. ತಾ.6 ರಂದು ಸೋಮವಾರ ಬೆಳಗ್ಗೆ 7-30 ರಿಂದ ಆರಂಭವಾದ ದೇವರ ಧಾರ್ಮಿಕ ವಿಧಿಗಳು ಮಂಗಳವಾರ ಮಧ್ಯಾಹ್ನ 3 ಗಂಟೆವರೆಗೂ ನಿರಂತರವಾಗಿ ನಡೆದವು. ಸೋಮವಾರ ಸಂಜೆ ಗ್ರಾಮದ ಕಲ್ಲೇಗೌಡರ ಜಾನಕಿ ಮನೆಯಿಂದ ದೇವರ ಕಳಸವನ್ನು ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ತರಲಾಯಿತು. ಬಳಿಕ ರಾತ್ರಿ 8 ಗಂಟೆಗೆ ಗ್ರಾಮದ ಜೆ.ಜಿ. ಚಂದ್ರಶೇಖರ್ ಅವರ ಮನೆಯಿಂದ ಭಂಡಾರವನ್ನು ದೇವಾಲಯಕ್ಕೆ ತಂದು ಪೂಜಿಸಲಾಯಿತು.

ಸೋಮವಾರ ರಾತ್ರಿ ಗ್ರಾಮದ ಕುಂಭನ ಬೆಳ್ಯಪ್ಪ ಕುಟುಂಬಸ್ಥರಿಂದ ಪೂಜಾ ಪ್ರಸಾದ ಅನ್ನದಾನ ನಡೆಯಿತು. ರಾತ್ರಿ 9-30 ಗಂಟೆಗೆ ದೇವರ ಗಂಗಾಸ್ನಾನಕ್ಕೆ ತೆರಳಲು ದೇವರ ಅಪ್ಪಣೆ ಪಡೆಯಲಾಯಿತು. ಮಂಗಳವಾರ ಮುಂಜಾನೆ 4 ಗಂಟೆಯಿಂದ ದೇವಾಲಯದ ಆವರಣದಲ್ಲಿ ಕೆಂಡಕೊಂಡದ ಪೂಜೆ ಆರಂಭವಾಯಿತು. ಮುಂಜಾನೆ 5 ಗಂಟೆಗೆ ದೇವರಿಗೆ ಅಭಿಷೇಕ ಪೂಜೆ. ಬೆಳಗ್ಗೆ 9 ಗಂಟೆಗೆ ವಾದ್ಯ ಮೇಳ, ಅಲಂಕೃತ ದೇವರ ಪಲ್ಲಕ್ಕಿ ಉತ್ಸವದೊಂದಿಗೆ ಗ್ರಾಮದ ಕಾಫಿ ಬೆಳೆಗಾರ ಮುರುಳಿ ಮಾದಯ್ಯ ಅವರ ತೋಟದ ವ್ಯಾಪ್ತಿಯಲ್ಲಿ ಚಿಕ್ಲಿಹೊಳೆ ಹಾಗೂ ಕಾವೇರಿ ನದಿಯ ಸಂಗಮದಲ್ಲಿ ಗಂಗಾಸ್ನಾನ ಹಾಗೂ ಗಂಗಾಪೂಜೆ ನೆರವೇರಿಸಲಾಯಿತು.
ನಂತರ ದೇವರ ಪಲ್ಲಕ್ಕಿ ಮೆರವಣಿಗೆ ಕಾವೇರಿ ನದಿಯಿಂದ ಆರಂಭಗೊಂಡು ದೇವಾಲಯದವರೆಗೂ ಸಾಗಿ ಬಂತು. ಈ ಸಂದರ್ಭ ರಂಗಸಮುದ್ರ, ವಿರೂಪಾಕ್ಷಪುರ, ಕಬ್ಬಿನಗದ್ದೆ ವ್ಯಾಪ್ತಿಯ ಆದಿವಾಸಿಗಳು ಸೇರಿದಂತೆ ಸಮಸ್ತ ಭಕ್ತಜನರು ಪಾಲ್ಗೊಂಡು ಪುನೀತರಾದರು. ಮಧ್ಯಾಹ್ನ 2 ಗಂಟೆಯಿಂದ ಕೆಂಡ ಕೊಂಡ ಪೂಜೆ ನಡೆಯಿತು. ಈ ಸಂದರ್ಭ ಗ್ರಾಮದ ನಿಂಗರಾಜು, ಮಧು ಹಾಗೂ ಲೋಕನಾಥ ಅವರ ಮೇಲೆ ಜೋಡಿ ಬಸವೇಶ್ವರ ಹಾಗೂ ಸುಗ್ಗಿ ದೇವರು ಆವಾಹನೆಗೊಂಡು ಕುಣಿದು ಕುಪ್ಪಳಿಸಿ ದೇವಾಲಯದ ಮುಂಬದಿಯಲ್ಲಿ ಅಳವಡಿಸಲಾಗಿದ್ದ ಕೆಂಡದ ಬೆಂಕಿ ಕೊಂಡವನ್ನು ಬರಿಗಾಲಲ್ಲಿ ಹಾಯ್ದು ಭಕ್ತಿ ಸಮರ್ಪಿಸಲಾಯಿತು. ನಂತರ ಮಹಾಮಂಗಳಾರತಿ ಹಾಗೂ ಭಂಡಾರ ಹಾಕಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ಪದಾಧಿಕಾರಿಗಳು ಆವಾಹಿತ ದೇವ ಭಕ್ತರಲ್ಲಿ ಈ ಬಾರಿ ಮಳೆ ಬೆಳೆ ಉತ್ತಮಗೊಂಡು ರೈತರ ಬೆಳೆಗಾರರ ಬದುಕು ಹಸನು ಮಾಡು ಎಂದು ಬೇಡಿದರು. ಇದೇ ಸಂದರ್ಭ ದೇವಾಲಯಕ್ಕೆ ಆಗಮಿಸಿದ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಪಾದಪೂಜೆ ದೇವಾಲಯದ ಆವರಣದಲ್ಲಿ ನೆರವೇರಿಸಲಾಯಿತು. ಬಳಿಕ ನೆರೆದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು.


ದೇವಾಲಯ ಆಡಳಿತ ಸಮಿತಿ ಅಧ್ಯಕ್ಷ ಎ.ಜಿ.ಚಿಣ್ಣಪ್ಪ, ಗೌರವಾಧ್ಯಕ್ಷ ಜೆ.ಜಿ.ಚಂದ್ರಶೇಖರ್, ಕಾರ್ಯದರ್ಶಿ ಕೆ.ಟಿ.ಧನಂಜಯ, ನಿರ್ದೇಶಕರಾದ ವಿ.ಹೆಚ್.ಸುಭಾಷ್, ಎನ್.ಪಿ.ನವೀನ್, ಕೆ.ಎಸ್.ಚಂದ್ರಶೇಖರ್, ಜೆ.ಕೆ.ಮುತ್ತುರಾಜ್, ಎನ್.ಪಿ.ಕುಶಾಲಪ್ಪ, ಎನ್.ಡಿ.ಪ್ರಕಾಶ್, ಪಿ.ಎಸ್.ಬಸಪ್ಪ,ಪಿ.ಬಿ.ಅಶೋಕ್, ಪಿ.ಎಸ್.ಮೋಹನ್ ಹಾಗೂ ಅರ್ಚಕ ಶಿವಕುಮಾರ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.