Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೈನಿಕ ಶಾಲೆ ಕೊಡಗು: 2026-27ನೇ ಸಾಲಿನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೈನಿಕ ಶಾಲೆ ಕೊಡಗು: 2026-27ನೇ ಸಾಲಿನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ

ಏಪ್ರಿಲ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ, NEWS DESK ಏಪ್ರಿಲ್ 06: ಸೈನಿಕ ಶಾಲೆ ಕೊಡಗಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವನ್ನು ಶಾಲೆಯ ಕುವೆಂಪು ವಿವಿದೊದ್ದೇಶ ಸಭಾಂಗಣದಲ್ಲಿ ಅತ್ಯಂತ ಹೆಮ್ಮೆ ಮತ್ತು ಗಾಂಭೀರ್ಯದಿಂದ ಆಯೋಜಿಸಲಾಗಿತ್ತು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿವಿಧ ಜವಾಬ್ದಾರಿಗಳನ್ನು ಶಾಲೆಯ ಅಧಿಕಾರಿಗಳು ಹಸ್ತಾಂತರಿಸುವ ಮೂಲಕ ಶಾಲೆಯ ನಾಯಕತ್ವದ ಪರಂಪರೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದರು.
ಸಮಾರಂಭವು ಜ್ಞಾನ, ಸಮಗ್ರತೆ ಮತ್ತು ಸೇವೆಯ ಮನೋಭಾವದ ಸಂಕೇತವಾಗಿ ಸಾಂಪ್ರದಾಯಿಕ ದೀಪ ಬೆಳಗುವುದರೊಂದಿಗೆ ಪ್ರಾರಂಭವಾಯಿತು. ಶಾಲೆಯ ಪ್ರಾಚಾರ್ಯರಾದ ಕರ್ನಲ್ ಅಮರ್ ಜೀತ್ ಸಿಂಗ್, ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ. ಪ್ರಕಾಶ್ ರಾವ್, ಉಪ ಪ್ರಾಚಾರ್ಯರಾದ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ ಮತ್ತು ಹಿರಿಯ ಶಿಕ್ಷಕರಾದ ಶ್ರೀ ಎನ್. ವಿಬಿನ್ ಕುಮಾರ್ ಅವರು ಶಾಲೆಯ ಹಿರಿಯ ವಿದ್ಯಾರ್ಥಿಗಳ ನಾಯಕರಿಗೆ ಭುಜದ ಮೇಲಿನ ಬ್ಯಾಡ್ಜಗಳನ್ನ ಅನಾವರಣಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಜವಾಬ್ದಾರಿಗಳನ್ನು ಹಸ್ತಾಂತರಿಸಿದರು.
ಇದರೊಂದಿಗೆ ವಿವಿಧ ನಿಲಯಗಳ ನಾಯಕರ ನೇಮಕಾತಿಗಳನ್ನು ಸಹ ಮಾಡಲಾಯಿತು. ವಿವಿಧ ನಿಲಯಗಳ ನಿಲಯ ಶಿಕ್ಷಕರು ಶಾಲೆಯ ಪ್ರಾಚಾರ್ಯರೊಂದಿಗೆ ಸೇರಿ ವಿದ್ಯಾರ್ಥಿಗಳಿಗೆ ಹೆಗಲ ಬ್ಯಾಡ್ಜ್‌ಗಳನ್ನು ಧರಿಸಿ ಅವರವರ ನಿಲಯಗಳ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು.
ಇದರ ನಂತರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಶಾಲಾ ನಾಯಕನಾಗಿ ಆಯ್ಕೆಯಾದ ಕೆಡೆಟ್ ಚಿನ್ಮಯ ಖಾನಾವಲ್ಲಿ ಮಾರ್ಗದರ್ಶನದಲ್ಲಿ ನೂತನ ವಿದ್ಯಾರ್ಥಿ ನಾಯಕರು ಶಾಲೆಯ ಮೌಲ್ಯಗಳು, ಶಿಸ್ತು ಮತ್ತು ಗೌರವವನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದರು.

ಶಾಲಾ ನಾಯಕನಾಗಿ ಕೆಡೆಟ್ ಚಿನ್ಮಯ ಖನವಲ್ಲಿ, ಶಾಲೆಯ ಶಿಸ್ತಿನ ನಾಯಕನಾಗಿ ಕೆಡೆಟ್ ಭರತ್ ಚೌಧರಿ, ಕ್ರೀಡಾ ನಾಯಕನಾಗಿ ಕೆಡೆಟ್ ಸೋಹಮ್ ಬಾಗೇವಾಡಿ, ಶೈಕ್ಷಣಿಕ ವಿಭಾಗದ ನಾಯಕನಾಗಿ ಕೆಡೆಟ್ ಅಕ್ಷತ್ ಗೈರೋಲಾ, ಸಾಂಸ್ಕೃತಿಕ ನಾಯಕನಾಗಿ ಕೆಡೆಟ್ ಗಿತೇಶ್ ಆರ್, ಭೋಜನಾಲಯದ ನಾಯಕನಾಗಿ ಕೆಡೆಟ್ ಪೂರ್ವಿಕ್ ಆರ್, ಐಟಿ ನಾಯಕನಾಗಿ ಕೆಡೆಟ್ ನೀರಜ್ ಧರಣಿ ಆಯ್ಕೆಯಾದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಾಚಾರ್ಯರಾದ ಕರ್ನಲ್ ಅಮರ್ ಜೀತ್ ಸಿಂಗ್ ರವರು ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಮತ್ತು ನಾಯಕತ್ವ ಹಾಗೂ ಜವಾಬ್ದಾರಿಯ ಸಾರವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಕರ್ತವ್ಯನಿಷ್ಠರಾಗಿ ತಮ್ಮ ‘ನಾಯಕತ್ವ ಧರ್ಮ’ವನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ನಿರ್ವಹಿಸುವಂತೆ ಅವರು ಕರೆ ನೀಡಿದರು. ಜವಾಬ್ದಾರಿಯು ಕೇವಲ ಸೌಲಭ್ಯವಲ್ಲ, ಅದೊಂದು ಕರ್ತವ್ಯ ಎಂದು ತಿಳಿಸಿದ ಅವರು, ಆಯ್ಕೆಯಾದ ನೂತನ ನಾಯಕರು ಮುಂಚೂಣಿಯಲ್ಲಿ ನಿಂತು ಶಾಲೆಯ ಎಲ್ಲಾ ಚಟುವಟಿಕೆಗಳನ್ನು ಮುನ್ನಡೆಸಬೇಕು. ಸಮಗ್ರತೆಯನ್ನು ಕಾಪಾಡಿಕೊಂಡು ಕೊಡಗಿನ ಸೈನಿಕ ಶಾಲೆಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಪ್ರೋತ್ಸಾಹಿಸಿದರು. ನಿಜವಾದ ನಾಯಕರು ಮಾದರಿಯಾಗಿ ನಿಂತು ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಾರೆಂದು ನೆನಪಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೆಮ್ಮೆ ಮತ್ತು ನವಚೈತನ್ಯದೊಂದಿಗೆ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಬೋಧಕ – ಭೋಧಕೇತರ ಸಿಬ್ಬಂದಿ, ಎನ್‌ಸಿಸಿ ಸಿಬ್ಬಂದಿ, ಧೈಹಿಕ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.