
ಸೋಮವಾರಪೇಟೆ ಏ.7 NEWS DESK : ಸೋಮವಾರಪೇಟೆ ತಾಲ್ಲೂಕಿನ ನಗರಳ್ಳಿ ಗ್ರಾಮದ ಸುಗ್ಗಿಬನದಲ್ಲಿ ಕೂತಿನಾಡು ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಶ್ರೀ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮದೇವತೆ ಸಬ್ಬಮ್ಮ ದೇವಿಗೆ ಪೂಜೆಸಲ್ಲಿಸಿ, ಗ್ರಾಮ ಸುಭಿಕ್ಷೆ ಹಾಗೂ ಮಳೆ, ಬೆಳೆ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದರು. ಸುಗ್ಗಿ ಉತ್ಸವದ ಕೊನೆ ದಿನವಾದ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು. ನಗರಳ್ಳಿ ಗ್ರಾಮದ ಶ್ರವಣ್, ಸಂದೀಪ್, ಸವಿನ್, ರಚನ್ ಹಳ್ಳಿಯೂರು, ಗಗನ್ ಜಕ್ಕನಳ್ಳಿ, ಶಶಿಕುಮಾರ್ ಹೆಮನಗದ್ದೆ, ದೇವರ ಒಡೆಕಾರರಾಗಿ ಕಾರ್ಯ ನಿರ್ವಹಿಸಿದರು. ರಮೇಶ್, ಪ್ರಕಾಶ್, ಪ್ರಸನ್ನ, ಕುಶಾಲ್, ಲೋಹಿತ್, ದೇವರ ಸೇವೆಕರಾಗಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಿದರು. ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷರಾದ ಕೆ.ಬಿ. ಜಗದೀಶ್, ಉಪಾಧ್ಯಕ್ಷರಾದ ಸಿ. ಎಸ್.ಬೋಪ್ಪಯ್ಯ, ಕಾರ್ಯದರ್ಶಿ ಕೆ. ಯು. ಜಗದೀಶ್, ಖಜಾಂಚಿ ಎನ್.ಬಿ.ಸುರೇಶ್ ನಿರ್ದೇಶಕರಾದ ಬಿ.ಪಿ. ಪ್ರದೀಪ್ ಕುಮಾರ್, ಜಿ. ಆರ್.ಸುರೇಶ್, ರಜಿತ್, ಅಶ್ವತ್.ಕೆ.ಎಂ, ಕೌಶಿಕ್, ಪ್ರಸನ್ನ ಸುಗ್ಗಿಯ ಉಸ್ತುವಾರಿ ವಹಿಸಿದ್ದರು. :: ಸನ್ಮಾನ :: ನಗರಳ್ಳಿ ಗ್ರಾಮದ ಮೂಲ ದೇವಾಲಯ ನಿರ್ಮಾಣಕ್ಕೆ 10 ಲಕ್ಷ ರೂ.ಗಳ ಧನ ಸಹಾಯ ಮಾಡಿದ ಉದ್ಯಮಿ ಹಾಗು ಚಲನಚಿತ್ರ ನಟ ನಗರಳ್ಳಿ ಅರುಣ್ ಗೌಡ ಹಾಗು ಸುಗ್ಗಿ ಬನ ಅಭಿವೃದಿಗ್ಧೆ 10 ಲಕ್ಷ ರೂ, ಗಳ ಸರ್ಕಾರದಿಂದ ಅನುದಾನ ಕಲ್ಪಿಸಿದ ಶಾಸಕ ಡಾ.ಮಂತರ್‍ಗೌಡ ಅವರುಗಳನ್ನು ಸನ್ಮಾನಿಸಿಲಾಯಿತು. ಮಾಜಿ ಸಚಿವ ಅಪ್ಪಚ್ಚು ರಂಜನ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಮಾಜಿ ಎಂಎಲ್‍ಸಿ ಎಸ್.ಜಿ.ಮೇದಪ್ಪ ಮತ್ತಿತರ ಗಣ್ಯರು ಸುಗ್ಗಿ ಉತ್ಸವದಲ್ಲಿ ಭಾಗವಹಿಸಿದ್ದರು.









