Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಕಾರಾತ್ಮಕ ಚಿಂತನೆಯಿಂದ ಕೂಡಿದ ನಿರ್ದಿಷ್ಟ ಗುರಿ ಇದ್ದರೆ ಯಶಸ್ಸು ಸಾಧ್ಯ ; ಪ್ರಯತ್ನ ಮತ್ತು ಪರಿಶ್ರಮದಿಂದ ಗುರಿಯನ್ನು ಮುಟ್ಟಬಹುದೇ ಹೊರತು ಅದೃಷ್ಟ, ಹಣೆಬರಹ ನಂಬಿದರೆ ಯಶಸ್ಸನ್ನು ಪಡೆಯಲು ಸಾಧ್ಯವಿಲ್ಲ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ರುದ್ರ ಅಭಿಪ್ರಾಯ ವ್ಯಕ್ತಪಡಿಸಿದರು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಕಾರಾತ್ಮಕ ಚಿಂತನೆಯಿಂದ ಕೂಡಿದ ನಿರ್ದಿಷ್ಟ ಗುರಿ ಇದ್ದರೆ ಯಶಸ್ಸು ಸಾಧ್ಯ ; ಪ್ರಯತ್ನ ಮತ್ತು ಪರಿಶ್ರಮದಿಂದ ಗುರಿಯನ್ನು ಮುಟ್ಟಬಹುದೇ ಹೊರತು ಅದೃಷ್ಟ, ಹಣೆಬರಹ ನಂಬಿದರೆ ಯಶಸ್ಸನ್ನು ಪಡೆಯಲು ಸಾಧ್ಯವಿಲ್ಲ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ರುದ್ರ ಅಭಿಪ್ರಾಯ ವ್ಯಕ್ತಪಡಿಸಿದರು

ಏಪ್ರಿಲ್ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ವಿರಾಜಪೇಟೆ ಕಾವೇರಿ ಕಾಲೇಜಿನ ಐಕ್ಯೂಎಸಿ ಹಾಗೂ ಇತಿಹಾಸ ವಿಭಾಗದ ವತಿಯಿಂದ ಮಂಗಳವಾರ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಆಯೋಜಿಸಲಾಗಿದ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ಸಮಯ ನಿರ್ವಹಣೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇತಿಹಾಸ ವಿಷಯದ ಮಹತ್ವ ಎಂಬ ವಿಷಯದ ಕುರಿತು ನಡೆದ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ನಮ್ಮ ಬದುಕಿನ ನಿರ್ಮಾಣ ನಮ್ಮ ಕೈಯಲ್ಲಿದ್ದು ನಮ್ಮನ್ನು ನಾವು ಇತರರಿಗೆ ಹೋಲಿಸಿಕೊಳ್ಳುವುದು ನಮಗೆ ನಾವೇ ಮಾಡಿಕೊಳ್ಳುವಂತಹ ಅವಮಾನ. ನಮ್ಮಲ್ಲಿ ಆತ್ಮವಿಶ್ವಾಸವಿರಬೇಕು ಇದು ಸವಾಲನ್ನು ಹೇಗೆ ಎದುರಿಸಬೇಕೆಂದು ಕಲಿಸುತ್ತದೆ. ನಮಗೆ ಸಿಕ್ಕ ಪ್ರತಿಯೊಂದು ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸೂಕ್ತ ಮಾರ್ಗದಲ್ಲಿ ಬಳಸಿಕೊಂಡು ಸಾಗಿದಾಗ ಮಾತ್ರ ಯಶಸ್ಸನ್ನು ಕಾಣಲು ಸಾಧ್ಯ. ವಿದ್ಯಾರ್ಥಿ ಜೀವನದಿಂದ ಸಮಯ ಪ್ರಜ್ಞೆ ಹೆಚ್ಚಿನ ಮಹತ್ವವನ್ನು ನೀಡಬೇಕು. ನಾವು ಸಮಯವನ್ನು ಗೌರವಿಸಿದರೆ ಸಮಯ ನಮಗೆ ಗೌರವವನ್ನು ತಂದು ಕೊಡುತ್ತದೆ .ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವವರಲ್ಲಿ ಮೊದಲು ಮಾನಸಿಕವಾದಂತಹ ಸಿದ್ಧತೆ ಬೇಕು . ನಿರಂತರವಾಗಿ ಓದುವಂತಹ ಪ್ರಕ್ರಿಯೆ ಹಾಗೂ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸೂಕ್ತ ಮಾರ್ಗದರ್ಶನದೊಂದಿಗೆ ಮುನ್ನಡೆದರೆ ಯಶಸಿನ ಕಡೆ ಸಾಗಬಹುದು.ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೋಲುವ ಸಂದರ್ಭ ಅಧಿ ಸೂಚನೆಗಳನ್ನು ಸಮರ್ಪಕವಾಗಿ ಅರ್ಥೈಸಬೇಕು. ಪಠ್ಯಕ್ರಮಕ್ಕೆ ಅನುಗುಣವಾಗಿ ಸೂಕ್ತ ಪುಸ್ತಕ ಹಾಗೂ ಪರಾಮರ್ಶನ ಗ್ರಂಥಗಳನ್ನು ಆಯ್ಕೆ ಮಾಡಬೇಕು. ಸರಿಯಾದ ಕ್ರಮದಲ್ಲಿ ಓದಿ ಮೂರು ಆರ್ ಸೂತ್ರ ರೀಡ್, ರಿವಿಜನ್ , ರಿಕಾಲ್ ಅಳವಡಿಸಿಕೊಳ್ಳಿ. ಸಾಧ್ಯವಾದಷ್ಟು ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವ ಕೆಲಸ ಆದಾಗ ಪರೀಕ್ಷೆಯ ತಯಾರಿ ಸೂಕ್ತವಾಗಿ ಸಾಗುತ್ತದೆ ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಹಲವಾರು ಆನ್ ಲೈನ್ ವೆಬ್ಸೈಟ್ ಗಳಿದ್ದು ಅನಗತ್ಯವಾಗಿ ಮೊಬೈಲ್ ಬಳಕೆ ಮಾಡಿ ಸಾಮಾಜಿಕ ಮಾಧ್ಯಮದಲ್ಲೇ ಸಮಯ ಹರಣ ಮಾಡುವುದಕ್ಕಿಂತ ಇಂತಹ ವೆಬ್ಸೈಟ್ ಗಳಲ್ಲಿ ಹೆಚ್ಚಿನ ಸಮಯವನ್ನು ಕಳೆದು ಜ್ಞಾನವನ್ನು ಹೆಚ್ಚಿಸಿಕೊಳ್ಳಿ . ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 20 ಪ್ರಶ್ನೆಗಳು ಇತಿಹಾಸ ವಿಷಯದಿಂದ ಇದ್ದು ಅದಷ್ಟು ಉತ್ತಮ ರೀತಿಯಲ್ಲಿ ಅಧ್ಯಯನ ಆರಂಭಿಸಿ ಎಂದರು .


ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ಡಾನ ಪ್ರಸ್ತುತ ಯುಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸ್ಪರ್ಧೆ ಬಹಳವಿದೆ. ಒಂದು ಬಾರಿ ಸೋತರೆ ಹತಾಶರಾಗಿ ಹೇಡಿಗಳಾಗ ಹಿಂದೆನಿಲ್ಲಬಾರದು. ಸತತ ಪ್ರಯತ್ನವನ್ನು ಮಾಡುತ್ತಾ ಯಶಸ್ಸಿನ ಕಡೆಗೆ ಸಾಗಬೇಕು . ವಿದ್ಯಾರ್ಥಿ ಜೀವನದಿಂದಲೇ ಜ್ಞಾನವನ್ನು ಗಳಿಸಿಕೊಳ್ಳುವ ಕಡೆಗೆ ವಿದ್ಯಾರ್ಥಿಗಳು ಗಮನವನ್ನು ಹರಿಸುತ್ತಾ ಎಲ್ಲಾ ಒತ್ತಡಗಳನ್ನು ನಿಭಾಯಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮಾಡುತ್ತ ಹೋದರೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು .

ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಐಕ್ಯೂ ಎಸಿ ಸಂಯೋಜಕರಾದ ಎಲ್.ಆರ್. ರಾಘವೇಂದ್ರ, ವಿದ್ಯಾರ್ಥಿ ಕ್ಷೇಮಪಾನ ಸಮಿತಿಯ ಮುಖ್ಯಸ್ಥರಾದ ಡಾ. ಕೆ.ಜಿ ವೀಣಾ ಇತಿಹಾಸ ವಿಭಾಗದ ಮುಖ್ಯಸ್ಥರಾದ ಸಿ.ಪಿ. ಅನುಪಮಾ ಉಪಸ್ಥಿತರಿದ್ದರು .

ಕಾರ್ಯಕ್ರಮದಲ್ಲಿ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ಕೆ .ಪದ್ಮ , ಇತಿಹಾಸ ವಿಭಾಗದ ಉಪನ್ಯಾಸಕಿ ಚೈತ್ರ , ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.