Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜಲ ಜೀವನ್ ಮಿಷನ್ 2028 ರ ವರೆಗೂ ವಿಸ್ತರಣೆ : 2.0 ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಲ ಜೀವನ್ ಮಿಷನ್ 2028 ರ ವರೆಗೂ ವಿಸ್ತರಣೆ : 2.0 ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

ಏಪ್ರಿಲ್ 8, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK ಏ.8 : ಕೇಂದ್ರ ಪುರಸ್ಕೃತ ಜಲಜೀವನ್ ಮಿಷನ್ 2.0 ಯೋಜನೆಯನ್ನು 2028 ನೇ ಸಾಲಿನ ವರೆಗೂ ವಿಸ್ತರಿಸುವ ಹಿನ್ನೆಲೆ ಯೋಜನೆಯ ಪ್ರಗತಿ ಮತ್ತು ಪರಿಣಾಮಕಾರಿ ಅನುಷ್ಠಾನ ಕುರಿತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಜೊತೆಗೆ ಜಲ ಮಹೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರದಿಂದ ಅನುಮತಿ ದೊರೆತಿದ್ದು, ಆ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಸದರು ಸೂಚಿಸಿದರು.

ಕೇಂದ್ರ ಪುರಸ್ಕೃತ ಜಲ ಜೀವನ್ ಮಿಷನ್ 2.0 ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ಲೋಪ ಉಂಟಾಗದAತೆ ಎಚ್ಚರ ವಹಿಸುವಂತೆ ಸಂಸದರು ನಿರ್ದೇಶನ ನೀಡಿದರು.

ಕೇಂದ್ರ ಸರ್ಕಾರ, ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂಬ ಉದ್ದೇಶದದಿಂದ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಜಲಜೀವನ್ ಮಿಷನ್ ಪ್ರಗತಿ ಮತ್ತು ಅನುಷ್ಠಾನ ಸಂಬAಧ ಹಲವು ಸಲಹೆ ಮಾರ್ಗದರ್ಶನ ನೀಡಿದರು.

ಜಿ.ಪಂಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬAಧ ಕಾಲ ಕಾಲಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತದೆ. ಹಾಗೆಯೇ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು  ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ಜಲ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯ 23 ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲು ಅನುಮತಿ ದೊರೆತಿದೆ ಎಂದು ಅವರು ಮಾಹಿತಿ ನೀಡಿದರು.

ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಎಸ್‌ವಿಎಸ್ ಕಾಮಗಾರಿಯನ್ನು ಘಟಕವಾರು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ 457 ಕಾಮಗಾರಿಗಳಲ್ಲಿ 369 ಕಾಮಗಾರಿ ಪೂರ್ಣಗೊಂಡಿದ್ದು, 86 ಕಾಮಗಾರಿ ಪ್ರಗತಿಯಲ್ಲಿದೆ ಎಂದು ಭಾಸ್ಕರ್ ಅವರು ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಎಂವಿಎಸ್ ಯೋಜನೆಯಡಿ 8.52 ಕೋಟಿ ರೂ. ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ ನೀರು ಪೂರೈಕೆಗೆ ಕುಶಾಲನಗರ ತಾಲ್ಲೂಕಿನ 12 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದರು.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಹೊಸದಾಗಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಸಂಬAಧಿಸಿದAತೆ ಮಡಿಕೇರಿ ಉಪ ವಿಭಾಗ, ಸೋಮವಾರಪೇಟೆ, ಕುಶಾಲನಗರ, ಸೋಮವಾರಪೇಟೆ ಉಪ ವಿಭಾಗ, ಪೊನ್ನಂಪೇಟೆ ಮತ್ತು ವಿರಾಜಪೇಟೆ, ತಾಲ್ಲೂಕುಗಳನ್ನು ಗುರುತಿಸಲಾಗಿದ್ದು, 533 ಜನ ವಸತಿ ಪ್ರದೇಶದಲ್ಲಿ 12 ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಭಾಸ್ಕರ್ ಅವರು ವಿವರಿಸಿದರು.

2025-26ನೇ ಸಾಲಿನ ಕ್ರೀಯಾ ಯೋಜನೆ ಕಾಮಗಾರಿಗಳ ಆರ್ಥಿಕ ಮತ್ತು ಬೌದ್ಧಿಕ ಪ್ರಗತಿ ಪರಿಶೀಲಿಸಿದಾಗ ಮಡಿಕೇರಿ ತಾಲ್ಲೂಕಿನಲ್ಲಿ 24 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, 35 ಲಕ್ಷ ರೂ. ವೆಚ್ಚ ಅಂದಾಜು ಮಾಡಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಘಟಕ ಸಂಬAಧಿಸಿದAತೆ 36 ಶುದ್ದೀಕರಣ ಘಟಕಗಳನ್ನು ಅಳವಡಿಸಲಾಗಿದ್ದು, ಇದರಲ್ಲಿ 27 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 9 ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದರು.

ಪಿವಿಟಿಜಿ, ಪಿ.ಎಂ.ಜನಮನ್ ಯೋಜನೆಯಡಿ ಜಿಲ್ಲೆಯಲ್ಲಿ 8 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದರಲ್ಲಿ ಒಂದು ಕಾಮಗಾರಿ ಪೂರ್ಣಗೊಂಡಿದೆ. 6 ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ಕಾಮಗಾರಿಯನ್ನು ಪ್ರಾರಂಭವಾಗಿಲ್ಲ ಎಂದು ವಿವರಿಸಿದರು.

ತಟ್ಟೆಕೆರೆಯಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಗ್ರಾ.ಪಂ.ಗೆ ಹಸ್ತಾಂತರಿಸಲಾಗಿದೆ. 6 ಕಾಮಗಾರಿಗಳ ಕೊಳವೆ ಮಾರ್ಗ ಮತ್ತು ನಳ ಸಂಪರ್ಕ ಪೂರ್ಣಗೊಂಡಿದೆ. ಹಾಗೆಯೇ ಒಎಚ್‌ಟಿ ಕಾಮಗಾರಿಯು ಪ್ರಗತಿಯಲ್ಲಿದೆ. ಒಟ್ಟು 374 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು.

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ತ್ಯಾಜ್ಯ ವಿಲೇವಾರಿಗೆ ಮುಂದಾಗಲಾಗಿದೆ ಎಂದರು.

ಜವಾಹರ್ ನವೋದಯ ವಿದ್ಯಾಲಯಕ್ಕೆ ಕುಡಿಯುವ ನೀರು ಪೂರೈಕೆ ಸಂಬAಧ ಇದೇ ಸಂದರ್ಭದಲ್ಲಿ ಚರ್ಚಿಸಲಾಯಿತು. ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ನವೋದಯ ಶಾಲೆಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಆದ್ದರಿಂದ ಕೂಟುಹೊಳೆಯಿಂದ ಪೂರೈಕೆಯಾಗುವ ನೀರನ್ನು ನವೋದಯ ಶಾಲೆಗೂ ಪೂರೈಸುವಂತಾಗಬೇಕು ಎಂದು ಕೋರಲಾಗಿತ್ತು.

ಆದರೆ ಬೇಸಿಗೆ ಅವಧಿಯಲ್ಲಿ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಪರಿಹಾರ ಮಾರ್ಗ ಕಂಡು ಕೊಳ್ಳುವ ಸಂಬAಧ ಚರ್ಚೆ ನಡೆಯಿತು.

ಕುಡಿಯುವ ನೀರು ಪೂರೈಕೆಗಾಗಿ ನವೋದಯ ವಿದ್ಯಾ ಸಂಸ್ಥೆಯಿAದ 78 ಲಕ್ಷ ರೂ. ಬಿಡುಗಡೆಯಾಗಿದ್ದು, ಟೆಂಡರ್‌ನ್ನು ಸಹ ಆಹ್ವಾನಿಸಲಾಗಿತ್ತು ಎಂದು ಕುಡಿಯುವ ನೀರು ಮತ್ತು ನೈರ್ಮಲ ವಿಭಾಗದ ಎಂಜಿನಿಯರ್ ಭಾಸ್ಕರ್ ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಬೇಸಿಗೆ ಅವಧಿಯಲ್ಲಿ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದರು.

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಈ ಸಂಬAಧ ಮತ್ತೊಮ್ಮೆ ಸ್ಥಳ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ನವೋದಯ ಶಾಲೆಯಲ್ಲಿ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದೊಡ್ಡ ಮನಸ್ಸು ಮಾಡಬೇಕಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸಲಹೆ ಮಾಡಿದರು.

ನವೋದಯ ಶಾಲೆಯ ಪ್ರಾಂಶುಪಾಲರಾದ ಪ್ರಮೀಳಾ ಅವರು ಮಾತನಾಡಿ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸುವಂತಾಗಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಕೂಟುಹೊಳೆಯಿಂದ ಮಡಿಕೇರಿ ನಗರಕ್ಕೆ ಪೂರೈಕೆಯಾಗುವ ನೀರನ್ನು ನವೋದಯ ಶಾಲೆಗೆ ನೀಡಲು ಕಷ್ಟವಾಗಲಿದೆ. ಆದ್ದರಿಂದ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಲಹೆ ಮಾಡಿದರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿರೇಂದ್ರ, ಎಂಜಿನಿಯರ್‌ಗಳು ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.