
ವಿರಾಜಪೇಟೆ ಏ.9 NEWS DESK : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸಂತ ಅನ್ನಮ್ಮ ಪಿ.ಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸಾಧನೆಯನ್ನು ಮಾಡಿದ್ದು, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶವನ್ನು ಪಡೆದಿದೆ. ವಿಜ್ಞಾನ ವಿಭಾಗದಲ್ಲಿ 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 49 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣ ರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 48 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 78 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣ ರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಜೆಸಿಕಾ ಎನ್. ಎಸ್. ಶೇ.97.67 ಅಂಕಗಳೊಂದಿಗೆ ಪ್ರಥಮ ಸ್ಥಾನ, ಪಿ.ಕೆ.ರಕ್ಷಿತ್ 95.83% ದ್ವಿತೀಯ ಸ್ಥಾನ, ಹಾಗೂ ತೇಜಸ್ವಿನಿ ಟಿ.ಎಂ ಶೇ.95.33 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ನಿಶಿಕ ದೇಚಮ್ಮ ಎಂ.ಎಲ್. ಶೇ.98 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ, ಕೆ. ಜೆ. ಮೇಘ ಶೇ.97.33 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಹರ್ಷಿತಾ ಎಸ್ ಶೇ.96.50 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯ ಕುರಿತು ಮಾಹಿತಿಯನ್ನು ನೀಡಿದ ಸಂತ ಅನ್ನಮ್ಮ ಪಿ ಯು ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ರವರು ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದು ಸಂತಸವನ್ನು ತಂದಿದೆ. ಇದಕ್ಕಾಗಿ ಶ್ರಮಿಸಿದ ಉಪನ್ಯಾಸಕರಿಗೂ, ಪೋಷಕರು ಹಾಗೂ ಪರೀಕ್ಷೆ ಬರೆದ ಸರ್ವ ವಿದ್ಯಾರ್ಥಿಗಳಿಗೂ ಅಭಿನಂದಿಸುವುದಾಗಿ ಹೇಳಿದರು.









