Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಿಐಟಿಗೆ ಪ್ರಸಿದ್ಧ ತಂತ್ರಜ್ಞಾನ ಉದ್ಯಮಿ ರಾಮ್ ಪ್ರಕಾಶ್ ಭೇಟಿ : ಸಿಐಟಿ ನಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವದ ಅರಿವು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಿಐಟಿಗೆ ಪ್ರಸಿದ್ಧ ತಂತ್ರಜ್ಞಾನ ಉದ್ಯಮಿ ರಾಮ್ ಪ್ರಕಾಶ್ ಭೇಟಿ : ಸಿಐಟಿ ನಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವದ ಅರಿವು

ಏಪ್ರಿಲ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.10 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಸಿಐಟಿ) ಕಾಲೇಜಿನ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಅಧ್ಯಯನ (ಎಐ & ಎಂಎಲ್) ವಿಭಾಗದಲ್ಲಿ “ಕೃತಕ ಬುದ್ಧಿಮತ್ತೆ – ಒಬ್ಬ ನಿಜವಾದ ಎಂಜಿನಿಯರ್ ಏನು ಮಾಡುತ್ತಾನೆ?” ಎಂಬ ವಿಷಯದಡಿ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಖ್ಯಾತ ತಂತ್ರಜ್ಞಾನ ಉದ್ಯಮಿ ಎಚ್. ರಾಮ್ ಪ್ರಕಾಶ್ ಅವರು “ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಈ ಯುಗದಲ್ಲಿ ಪ್ರತಿಯೊಬ್ಬರೂ ಕೃತಕ ಬುದ್ಧಿಮತ್ತೆಯನ್ನು ಕಲಿಯಬೇಕು, ಅದನ್ನು ಅಭ್ಯಾಸ ಮಾಡಬೇಕು ಮತ್ತು ಅದರೊಂದಿಗೆ ಬದುಕಲು ಕಲಿಯಬೇಕು. ಕೃತಕ ಬುದ್ಧಿಮತ್ತೆ ಮಾನವನಿಗೆ ಬೆದರಿಕೆ ಅಲ್ಲ; ಸರಿಯಾದ ರೀತಿಯಲ್ಲಿ ಬಳಸಿದರೆ ಅದು ಮಾನವ ಜೀವನವನ್ನು ಸುಧಾರಿಸುತ್ತದೆ,” ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಸವರಾಜ್, “ಕೃತಕ ಬುದ್ಧಿಮತ್ತೆ ನಮ್ಮನ್ನು ಹೊಸ ಮಟ್ಟಕ್ಕೆ ಕೊಂಡೊಯ್ಯುತ್ತಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು,” ಎಂದು ಹೇಳಿದರು. ಎಐ ಮತ್ತು ಎಂಎಲ್ ವಿಭಾಗದ ಮುಖ್ಯಸ್ಥರಾದ ಡಾ. ರಾಮಕೃಷ್ಣ ಮಾತನಾಡಿ, “ಇಂತಹ ಮಹಾನ್ ವ್ಯಕ್ತಿತ್ವ ಕಾಲೇಜಿಗೆ ಭೇಟಿ ನೀಡಿರುವುದು ನಮ್ಮ ಭಾಗ್ಯ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು,” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕೃತಕ ಬುದ್ಧಿಮತ್ತೆಯ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ದಾರಿಗಳನ್ನು ತೆರೆದಿದೆ ಎಂದರು. ಉದ್ಯಮಿ ರಾಮ್ ಪ್ರಕಾಶ್ ಅವರು 17 ವರ್ಷಗಳ ಅನುಭವ ಹೊಂದಿರುವ ಅವರು ದಶಕಕ್ಕೂ ಹೆಚ್ಚು ಕಾಲ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಅಧ್ಯಯನ ಕ್ಷೇತ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ. ಭಾರತೀಯ ಭಾಷೆಗಳಿಗಾಗಿ ಮೆಷಿನ್ ಲರ್ನಿಂಗ್ ಆಧಾರಿತ ಪ್ರಥಮ ಟ್ರಾನ್ಸ್ಲಿಟರೇಶನ್ ಸಾಧನವಾದ ಕ್ವಿಲ್‍ಪ್ಯಾಡ್ ಅನ್ನು ರೂಪಿಸಿದಕ್ಕಾಗಿ 2010ರಲ್ಲಿ ಎಂಐಟಿ ಟಿಆರ್ 35 ಯುವ ನವೋದ್ಯಮಿ ಪ್ರಶಸ್ತಿಗೆ ಭಾಜನರಾದರು. ಅವರು ಕಾಗ್ನಿರೆಲ್ ಟೆಕ್ನಾಲಜೀಸ್ ಸಂಸ್ಥೆಯನ್ನು ಸ್ಥಾಪಿಸಿ, ಶಿಕ್ಷಣ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಅವರು ಐಐಟಿ ಮದ್ರಾಸ್ನ ಹಳೆಯ ವಿದ್ಯಾರ್ಥಿಯಾಗಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಕುಟೆನ್ ಇಂಡಿಯಾ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಮುಖ್ಯ ವಾಸ್ತುಶಿಲ್ಪಿ ಎ.ಪಿ. ಪ್ರದೀಪ್ ಹಾಜರಿದ್ದರು. ವಿದ್ಯಾರ್ಥಿ ಸಂಘದ ಸಂಯೋಜಕರಾದ ಪ್ರೊ. ಬಬಿತಾ ಸ್ವಾಗತಿಸಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.