Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*

ಏಪ್ರಿಲ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.11 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಕರ್ನಾಟಕ ಮಾಧ್ಯಮ ಅಕಾಡೆಮಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಸಾಮಾಜಿಕ ನ್ಯಾಯ ಪರಿಕಲ್ಪನೆಗೆ ಇಂದಿನ ಮಾಧ್ಯಮ ಸಂವೇದನಾಶೀಲತವಾಗಿದಿಯೇ” ಎಂಬ ವಿಷಯದ ಕುರಿತ ವಿಚಾರಸಂಕಿರಣವನ್ನು ಆಯೋಜಿಸಿತ್ತು. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ನೂತನ ಶೈಕ್ಷಣಿಕ ವಿಭಾಗದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಈ ವಿಚಾರಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಿದರು. ಸಾಮಾಜಿಕ ಸಮಾನತೆಯ ಹರಿಕಾರ ಅಂಬೇಡ್ಕರ್ ಅವರ ಸಾರಥ್ಯದಲ್ಲಿ ರಚನೆಯಾದ ಭಾರತದ ಸಂವಿಧಾನ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಕೈದೀವಿಗೆಯಾಗಿದೆ ಎಂದು ಅವರು ಬಣ್ಣಿಸಿದರು. ಜಾತಿ, ಧರ್ಮ, ಲಿಂಗ ಮತ್ತು ಭಾಷೆಯ ಆಧಾರದ ತಾರತಮ್ಯ ಹಾಗೂ ಅಸ್ಪೃಶ್ಯತೆಯ ಆಚರಣೆ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಇಂದಿಗೂ ಜ್ವಲಂತ ಸಮಸ್ಯೆಗಳಾಗಿ ದೇಶವನ್ನು ಕಾಡುತ್ತಿರುವುದು ವಿಷಾದನೀಯ ಎಂದು ಅವರು ವಿಶ್ಲೇಷಿಸಿದರು. ಭಾರತದಲ್ಲಿ 19,658 ಭಾಷೆಗಳಿದ್ದು ಜನ ಸಂಸ್ಕೃತಿಯ ಪ್ರತೀಕವಾದ ಅನೇಕ ಸಣ್ಣ ಭಾಷೆಗಳು ನಿರ್ಲಕ್ಷ್ಯಕ್ಕೆ ಗುರಿಯಾಗಿದ್ದು ಬಹುಸಂಖ್ಯಾತರ ಭಾಷೆಗಳ ಪ್ರಾಬಲ್ಯದಿಂದ ದಮನಿಸಲ್ಪಡುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಬ್ರಿಟಿಷರ ಕಾಲದಲ್ಲಿ ಪ್ರಾದೇಶಿಕ ಭಾಷಾ ಪತ್ರಿಕೆಗಳ ಮೇಲೆ ಪ್ರಾರಂಭವಾದ ಪ್ರಹಾರ ಇಂದಿಗೂ ಮುಂದುವರಿದಿದ್ದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮಾಧ್ಯಮ ದಿಟ್ಟತನದಿಂದ ಎತ್ತಿಹಿಡಿಯಬೇಕೆಂದು ಅವರು ಅಭಿಪ್ರಾಯಪಟ್ಟರು. ಪ್ರಧಾನ ಭಾಷಣ ಮಾಡಿದ ಹಿರಿಯ ಪತ್ರಕರ್ತ ಮತ್ತು ಚಿಂತಕರಾದ ಕೋಟಿಗಾನಹಳ್ಳಿ ರಾಮಯ್ಯನವರು ಮಾತನಾಡಿ ಪ್ರಬುದ್ಧ ಭಾರತ ನಿರ್ಮಾಣದ ಗುರಿ ಸಾಧನೆಗೆ ಯುವ ಪೀಳಿಗೆ ಅಂಬೇಡ್ಕರ್ ಕಟ್ಟಿಕೊಟ್ಟಿರುವ ಆದರ್ಶಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಪ್ರೇರೇಪಿಸಿದರು. 1990ರ ದಶಕದಿಂದ ಆರಂಭವಾದ ಕಾರ್ಪೊರೇಟ್ ಬಂಡವಾಳಶಾಹಿಯ ತುಷ್ಠೀಕರಣ ಸೃಷ್ಟಿಸಿರುವ ಪಲ್ಲಟ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಹರಿಸುವ ಅಪಾಯಕಾರಿ ಹಂತ ತಲುಪಿದೆ ಎಂದು ಅವರು ಎಚ್ಚರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ರಮೇಶ್.ಬಿ. ಸಮಕಾಲೀನ ಸಂದರ್ಭದ ಮಾಧ್ಯಮ ಜನದನಿಯಾಗಿ ಸಾಮಾಜಿಕ ನ್ಯಾಯದ ಆಶಯಗಳಿಗೆ ಹೆಚ್ಚಿನ ಸಂವೇದನೆ ತೋರಬೇಕಿದೆ ಎಂಬ ಅನಿಸಿಕೆ ವ್ಯಕ್ತಪಡಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಪ್ರಾಸ್ತಾವಿಕ ಭಾಷಣ ಮಾಡಿದರು. ಮಾಧ್ಯಮ ಅಕಾಡೆಮಿ ಕಾರ್ಯದರ್ಶಿಗಳಾದ ಸಹನಾ.ಎಂ., ಮೈಸೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಮಮತಾ. ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ.ಎಸ್. ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ತಾಂಡವಗೌಡ ಧನ್ಯವಾದ ಸಮರ್ಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026 Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.15: ವಿವಿಧತೆಯಲ್ಲಿ ಏಕತೆ ಹಾಗೂ ಶಾಂತಿಯ ತೋಟವಾಗಿರುವ ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವದ ಸಂಭ್ರಮ ಮನೆಮಾಡಿದ್ದು, ಇದೇ…

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.