
ಮಡಿಕೇರಿ NEWS DESK ಏ.11 : ವಿರಾಜಪೇಟೆ ಸಮೀಪದ ಬೇತ್ರಿ ಗ್ರಾಮದ ಕಾಫಿ ತೋಟವೊಂದರಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ.
ಕಾಫಿ ತೋಟದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶುವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಕ್ಷಿಸಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಶಿಶುಗಳ ತುರ್ತು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಶುವಿನ ಪೋಷಕರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.








